Asianet Suvarna News Asianet Suvarna News

ಬಸವಣ್ಣನವರಿಂದ ಪ್ರಭಾವಿತರಾಗಿದ್ದ ಅಂಬೇಡ್ಕರ್: ಶಾಸಕ ನರೇಂದ್ರಸ್ವಾಮಿ

ಸಾಮಾಜಿಕ ನ್ಯಾಯದ ಹೋರಾಟಕ್ಕೆ ನಾಂದಿ ಹಾಡಿದ ಬಸವಣ್ಣನವರ ದೂರದೃಷ್ಟಿ ಫಲದಿಂದಲೇ ಡಾ.ಬಿ.ಆರ್.ಅಂಬೇಡ್ಕರ್ ಬರೆದ ಸಂವಿಧಾನದಿಂದ ಪ್ರತಿಯೊಬ್ಬರು ನೆಮ್ಮದಿಯಿಂದ ಬದುಕುವಂತಾಗಿದೆ ಎಂದು ಶಾಸಕ ಪಿ.ಎಂ.ನರೇಂದ್ರಸ್ವಾಮಿ ತಿಳಿಸಿದರು. 

Dr BR Ambedkar who was influenced by Basavanna Says MLA PM Narendraswamy gvd
Author
First Published Feb 18, 2024, 8:14 PM IST

ಮಳವಳ್ಳಿ (ಫೆ.18): ಸಾಮಾಜಿಕ ನ್ಯಾಯದ ಹೋರಾಟಕ್ಕೆ ನಾಂದಿ ಹಾಡಿದ ಬಸವಣ್ಣನವರ ದೂರದೃಷ್ಟಿ ಫಲದಿಂದಲೇ ಡಾ. ಬಿ.ಆರ್. ಅಂಬೇಡ್ಕರ್ ಬರೆದ ಸಂವಿಧಾನದಿಂದ ಪ್ರತಿಯೊಬ್ಬರು ನೆಮ್ಮದಿಯಿಂದ ಬದುಕುವಂತಾಗಿದೆ ಎಂದು ಶಾಸಕ ಪಿ.ಎಂ.ನರೇಂದ್ರಸ್ವಾಮಿ ತಿಳಿಸಿದರು. ಸರ್ಕಾರಿ ಕಚೇರಿಗಳಲ್ಲಿ ಬಸವಣ್ಣನವರ ಭಾವಚಿತ್ರ ಅಳವಡಿಸಬೇಕೆಂಬ ಸರ್ಕಾರದ ಅದೇಶದ ಹಿನ್ನೆಲೆಯಲ್ಲಿ ಪಟ್ಟಣದ ತಾಲೂಕು ಪಂಚಾಯ್ತಿ ಸಭಾಂಗಣದಲ್ಲಿ ಬಸವಣ್ಣನವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಪುಷ್ಪಾರ್ಚನೆ ನೆರೆವೇರಿಸುವುದರ ಮೂಲಕ ಭಾವಚಿತ್ರ ಅಳವಡಿಕೆಗೆ ಚಾಲನೆ ನೀಡಿ ಮಾತನಾಡಿರು.

ಸಾಮಾಜಿಕ ನ್ಯಾಯದ ಪರಿಕಲ್ಪನೆಯೊಂದಿಗೆ ಸಂವಿಧಾನದ ನಿಜ ಜಾರಿಯ ಜವಾಬ್ದಾರಿಯಲ್ಲಿ ಕಾಂಗ್ರೆಸ್ ಸರ್ಕಾರ ಸಂವಿಧಾನ ಪೀಠಿಕೆ ಓದು ಹಾಗೂ ಸಾಮಾಜಿಕ ನ್ಯಾಯದ ಹರಿಕಾರ ಬಸವಣ್ಣನವರ ಭಾವಚಿತ್ರವನ್ನು ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ಅಳವಡಿಸಬೇಕೆಂಬ ನಿರ್ಧಾರವನ್ನು ಕೈಗೊಳ್ಳಲಾಗಿದೆ ಎಂದರು. ಗಂಡು-ಹೆಣ್ಣು ಬೇಧವಿಲ್ಲದೇ ಮನುಷ್ಯರನ್ನು ಮನುಷ್ಯರನ್ನಾಗಿ ಕಾಣಬೇಕು, ಪ್ರತಿಯೊಬ್ಬರು ಸಮಾನತೆಯಿಂದ ಬದುಕಬೇಕು ಎನ್ನುವ ಸಂದೇಶ ಸಾರುವುದರ ಜೊತೆಗೆ ವಿಶ್ವವೇ ಮೆಚ್ಚುವಂತಹ ಆಡಳಿತವನ್ನು ೧೨ನೇ ಶತಮಾನದಲ್ಲಿಯೇ ಬಸವಣ್ಣನವರು ತಿಳಿಸಿಕೊಟ್ಟಿದ್ದರು. ಬಸವಣ್ಣನವರ ವಚನಗಳು ಸಮಾಜಕ್ಕೆ ದಾರಿ ದೀಪವಾಗಿದೆ, ಅವರ ಚಿಂತನೆಗಳು ಇಂದಿಗೂ ಪ್ರಸ್ತುತವಾಗಿದೆ ಎಂದರು.

ವಿಶ್ವಕ್ಕೆ ಸಮಾನತೆ ಸಾರಿದ ಬಸವೇಶ್ವರ: ಶಾಸಕ ಬಸವರಾಜ ರಾಯರಡ್ಡಿ

ಬಸವಣ್ಣನವರು ತಮ್ಮ ಅನುಭವ ಮಂಟಪದಲ್ಲಿ ಎಲ್ಲಾ ಜನಾಂಗದವರಿಗೂ ಚರ್ಚೆಗೆ ಅವಕಾಶ ಮಾಡಿಕೊಟ್ಟಿದ್ದರು. ಬಸವಣ್ಣನವರ ಮಾದರಿ ಆಡಳಿತ ಮತ್ತು ಚಿಂತನೆಗಳು ಅಂಬೇಡ್ಕರ್ ಸಂವಿಧಾನ ಬರೆಯಲು ಸ್ಪೂರ್ತ್ತಿದಾಯಕವಾಗಿತ್ತು. ಇವರಿಬ್ಬರ ಚಿಂತನೆಗಳನ್ನು ಪ್ರತಿಯೊಬ್ಬರು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು. ಜಿಲ್ಲಾ ಪಂಚಾಯ್ತಿ ಅಭಿವೃದ್ಧಿ ಯೋಜನಾಧಿಕಾರಿ ಸಂಜೀವಪ್ಪ, ತಹಸೀಲ್ದಾರ್ ಕೆ.ಎನ್ ಲೊಕೇಶ್, ತಾಪಂ ಕಾರ್ಯನಿರ್ವಹಕ ಅಧಿಕಾರಿ ಮಮತಾ ಇತರರಿದ್ದರು.

Follow Us:
Download App:
  • android
  • ios