ಜಿಮ್ಸ್ ಆಡಳಿತ ಮಂಡಳಿಗೆ ಸಚಿವ ಸುಧಾಕರ್ ಖಡಕ್ ಎಚ್ಚರಿಕೆ

ಆರೋಗ್ಯ ಮತ್ತು ಕುಟುಂಬ ಕಲ್ಯಾಣ, ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ ಸುಧಾಕರ ಶನಿವಾರ ಜಿಮ್ಸ್ ಆಸ್ಪತ್ರೆಗೆ ಭೇಟಿ ನೀಡಿದರು.

Dr K Sudhakar Visits kalaburagi district hospital rbj

ಕಲಬುರಗಿ, (ಮೇ.01): ಆಕ್ಸಿಜನ್ ಮತ್ತು ರೆಮ್‌ಡೆಸಿವಿರ್ ಬಳಕೆಯಲ್ಲಿ ಕಟ್ಟುನಿಟ್ಟಿನ ಮಾನದಂಡಗಳನ್ನು ಅಳವಡಿಸಿಕೊಂಡು ಕಾರ್ಯ ನಿರ್ವಹಿಸಬೇಕು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ ಸುಧಾಕರ್ ಎಚ್ಚರಿಕೆ ನೀಡಿದ್ದಾರೆ.

ಇಂದು (ಶನಿವಾರ) ಕಲಬುರಗಿಯ ಜಿಮ್ಸ್ ಆಸ್ಪತ್ರೆ ಮತ್ತು ಕಾಲೇಜಿಗೆ ಭೇಟಿ ನೀಡಿ, ಕೋವಿಡ್ ಚಿಕಿತ್ಸೆ ಹಾಗೂ ಸಂಬಂಧಿಸಿದ ವಿಷಯಗಳ ಬಗ್ಗೆ ಶನಿವಾರ ಪರಿಶೀಲನೆ ನಡೆಸಿದ ಆರೋಗ್ಯ ಸಚಿವ ಸುಧಾಕರ್, ಕೋವಿಡ್ ಸಂದರ್ಭದಲ್ಲಿ ಒಟ್ಟಾರೆ ನಿರ್ವಹಣೆಯ ಉಸ್ತುವಾರಿಯಾಗಿ ಹಿರಿಯ ಅಧಿಕಾರಿಯನ್ನು ನೇಮಿಸಲು ಜಿಲ್ಲಾಧಿಕಾರಿಗೆ ಸೂಚನೆ ನೀಡಿದರು.

ಕೊರೋನಾ 2 ಅಲೆ ನಡುವೆ ಮೂರನೇ ಅಲೆ ಅಪ್ಪಳಿಸುವ ಸೂಚನೆ: ಮಕ್ಕಳೇ ಟಾರ್ಗೆಟ್‌?

ದಿನದಿಂದ ದಿನಕ್ಕೆ ಕೋವಿಡ್ ಹೆಚ್ಚಾಗುತ್ತಿದ್ದರಿಂದ ವೈದ್ಯಕೀಯ ಸಚಿವರು ಜಿಮ್ಸ್ ಆಸ್ಪತ್ರೆಯ ಮುಖ್ಯ ಆಡಳಿತ ಕಚೇರಿಯಿಂದಲೇ ಸಿಸಿ ಟಿವಿ ಮೂಲಕ ಕೋರೊನಾ ವಾರ್ಡಗಳ ವ್ಯವಸ್ಥೆ ಪರಿಶಿಲಿಸಿದರು. ಸುಮಾರು ಒಂದು ಗಂಟೆಗಳ ಕಾಲ ಅಲ್ಲಿರುವ ಆಸ್ಪತ್ರೆಯ ಸಿಬ್ಬಂದಿಗಳೊಂದಿಗೆ ಚರ್ಚೆ ನಡೆಸಿ ರೋಗಿಗಳಿಗೆ ತೊಂದರೆಯಾಗದಂತೆ ನೋಡಿಕೊಳ್ಳಬೇಕೆಂದು ಸಲಹೆ ನೀಡಿದರು.

ಈ ಸಂದರ್ಭದಲ್ಲಿ ಸಂಸದ ಡಾ. ಉಮೇಶ ಜಾಧವ, ಶಾಸಕ ರಾಜಕುಮಾರ ಪಾಟೀಲ್ ತೇಲ್ಕೂರ, ದತ್ತಾತ್ರೇಯ ಪಾಟೀಲ್ ರೇವೂರ, ಬಿ.ಜಿ. ಪಾಟೀಲ್, ಶಶಿಲ್ ನಮೋಶಿ ಸೇರಿದಂತೆ ಜಿಮ್ಸ್ ಆಸ್ಪತ್ರೆಯ ವೈದ್ಯರು ಇದ್ದರು.

Latest Videos
Follow Us:
Download App:
  • android
  • ios