ಬೆಂ.ಗ್ರಾ.ದಲ್ಲಿ ಡಾಕ್ಟರ್ ಗೆಲುವು ಸಾಧಿಸಲಿದ್ದಾರೆ: ಸಿಪಿವೈ

ಲೋಕಸಭಾ ಚುನಾವಣೆಯ ಅಂಕಿ-ಅಂಶಗಳು ಹಾಗೂ ಸಮೀಕ್ಷೆಗಳು ನಮ್ಮ ಪರವಾಗಿದ್ದು, ಈ ಬಾರಿಯ ಚುನಾವಣೆಯಲ್ಲಿ ರಾಜ್ಯದಲ್ಲಿ ಎನ್‌ಡಿಎ ಜಯಭೇರಿ ಭಾರಿಸಲಿದೆ. ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಎನ್‌ಡಿಎ ಅಭ್ಯರ್ಥಿ ಡಾ. ಮಂಜುನಾಥ್ ಸಹ ಗೆಲುವು ಸಾಧಿಸಲಿದ್ದಾರೆ ಎಂದು ವಿಧಾನ ಪರಿಪತ್ ಸದಸ್ಯ ಸಿ.ಪಿ.ಯೋಗೇಶ್ವರ್ ವಿಶ್ವಾಸ ವ್ಯಕ್ತಪಡಿಸಿದರು.

Dr Manjunath Will win in Bengaluru Rural snr

  ಚನ್ನಪಟ್ಟಣ :  ಲೋಕಸಭಾ ಚುನಾವಣೆಯ ಅಂಕಿ-ಅಂಶಗಳು ಹಾಗೂ ಸಮೀಕ್ಷೆಗಳು ನಮ್ಮ ಪರವಾಗಿದ್ದು, ಈ ಬಾರಿಯ ಚುನಾವಣೆಯಲ್ಲಿ ರಾಜ್ಯದಲ್ಲಿ ಎನ್‌ಡಿಎ ಜಯಭೇರಿ ಭಾರಿಸಲಿದೆ. ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಎನ್‌ಡಿಎ ಅಭ್ಯರ್ಥಿ ಡಾ. ಮಂಜುನಾಥ್ ಸಹ ಗೆಲುವು ಸಾಧಿಸಲಿದ್ದಾರೆ ಎಂದು ವಿಧಾನ ಪರಿಪತ್ ಸದಸ್ಯ ಸಿ.ಪಿ.ಯೋಗೇಶ್ವರ್ ವಿಶ್ವಾಸ ವ್ಯಕ್ತಪಡಿಸಿದರು.

ತಾಲೂಕಿನ ಹೊರ ವಲಯದ ಖಾಸಗಿ ಹೋಟೇಲ್‌ನಲ್ಲಿ ಬೆಂಗಳೂರು ಪದವೀಧರ ಕ್ಷೇತ್ರದ ಎನ್‌ಡಿಎ ಅಭ್ಯರ್ಥಿ ಅ.ದೇವೇಗೌಡ ಪರ ಹಮ್ಮಿಕೊಂಡಿದ್ದ ಜೆಡಿಎಸ್-ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಡಾ.ಮಂಜುನಾಥ್ ಗೆಲುವು ಸಾಧಿಸಿ, ಲೋಕಸಭೆಗೆ ಹೋಗುವುದರಲ್ಲಿ ಯಾವುದೇ ಅನುಮಾನವಿಲ್ಲ ಎಂದರು.

ಪ್ರತಿಷ್ಠೆಯ ಚುನಾವಣೆ: ಬೆಂಗಳೂರು ಪದವೀಧರ ಕ್ಷೇತ್ರದ ಚುನಾವಣೆ ಜೆಡಿಎಸ್ ಹಾಗೂ ಬಿಜೆಪಿ ಎರಡು ಪಕ್ಷಗಳ ಪಾಲಿಗೆ ಪ್ರತಿಷ್ಠೆಯ ಚುನಾವಣೆಯಾಗಿದೆ. ಕ್ಷೇತ್ರದಿಂದ ಎನ್‌ಡಿಎ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಅ.ದೇವೇಗೌಡರನ್ನು ಗೆಲ್ಲಿಸಿಕೊಳ್ಳುವುದು ಎರಡು ಪಕ್ಷಗಳ ಮುಖಂಡರು ಹಾಗೂ ಕಾರ್ಯಕರ್ತರ ಜವಬ್ದಾರಿಯಾಗಿದೆ. ಲೋಕಸಭೆ ಹಾಗೂ ವಿಧಾನ ಪರಿಷತ್ ಚುನಾವಣೆಯ ಫಲಿತಾಂಶ ಪ್ರಕಟಗೊಂಡ ನಂತರ ರಾಜಕೀಯ ಚಟುವಟಿಕೆಗಳು ಗರಿಗೆದರಲಿವೆ ಎಂದು ಮಾರ್ಮಿಕವಾಗಿ ನುಡಿದರು.

ವಿರೋಧ ಪಕ್ಷದ ಅಭ್ಯರ್ಥಿ ಸ್ಥಳೀಯರಲ್ಲ:

ಎನ್‌ಡಿಎ ಅಭ್ಯರ್ಥಿ ವಿರುದ್ಧ ಸ್ಪರ್ಧಿಸಿರುವ ಅಭ್ಯರ್ಥಿ ಸ್ಥಳೀಯರಲ್ಲ. ಬೇರೆ ಕಡೆಯಿಂದ ಬಂದ ಅವರು ಇಲ್ಲಿಂದ ಸ್ಪರ್ಧಿಸಿದ್ದಾರೆ. ಅವರಿಗೆ ಜನಸೇವೆಯ ಉದ್ದೇಶವಿಲ್ಲ. ಅವರು ಕೆಲಸದ ವಿಚಾರ ಇಟ್ಟುಕೊಂಡು ಮತ ಕೇಳದೇ ಆಮೀಷ ಒಡ್ಡುವ ಮೂಲಕ ಮತ ಕೇಳುತ್ತಿದ್ದಾರೆ. ಅವರ ಕಡೆಯ ಗಿಫ್ಟ್‌ಗಳು ಸೀಜ್ ಆಗಿರುವುದೇ ಇದಕ್ಕೆ ಸಾಕ್ಷಿಯಾಗಿದೆ ಎಂದು ಆರೋಪಿಸಿದರು.

ದೊಡ್ಡ ಕ್ಷೇತ್ರ:

36 ವಿಧಾನಸಭೆ ಕ್ಷೇತ್ರದ ವ್ಯಾಪ್ತಿಯಲ್ಲಿ ನಡೆಯುವ ಪರಿಷತ್ ಚುನಾವಣೆ ಲೋಕಸಭೆಗಿಂತ ದೊಡ್ಡ ಚುನಾವಣೆ. ಕ್ಷೇತ್ರದ ವ್ಯಾಪ್ತಿ ತುಂಬಾ ದೊಡ್ಡದಿರುವುದರಿಂದ ಎಲ್ಲ ಕಡೆ ನಮ್ಮ ಅಭ್ಯರ್ಥಿ ಬರಬೇಕು ಎನ್ನಲು ಆಗುವುದಿಲ್ಲ. ಈ ಹಿನ್ನೆಲೆಯಲ್ಲಿ ಎರಡೂ ಪಕ್ಷಗಳ ಮುಖಂಡರು ಹಾಗೂ ಕಾರ್ಯಕರ್ತರು ತಮ್ಮ ಪಂಚಾಯಿತಿ ವ್ಯಾಪ್ತಿಯಲ್ಲಿನ ಪದವೀಧರ ಮತದಾರನ್ನು ಸಂಪರ್ಕಿಸಿ, ನಮ್ಮ ಅಭ್ಯರ್ಥಿ ಪರ ಮತಚಲಾಯಿಸುವಂತೆ ಮನವೊಲಿಸಬೇಕು ಎಂದರು.

ಪದವೀಧರ ಕ್ಷೇತ್ರ ಚುನಾವಣೆಗೆ ತಾಲೂಕಿನ ಮೂರು ಕಡೆ ಮತಗಟ್ಟೆಗಳನ್ನು ಸ್ಥಾಪಿಸಲಾಗುತ್ತದೆ. ಕೋಡಂಬಳ್ಳಿ, ಮಳೂರು ಹಾಗೂ ತಾಲೂಕು ಕಚೇರಿಯಲ್ಲಿ ಕೇಂದ್ರಗಳು ಇರಲಿವೆ. ಆಯಾ ಭಾಗದ ಮತದಾರರು ಆಯಾ ಭಾಗದಲ್ಲೇ ಮತಚಲಾಯಿಸುವಂತೆ ನೋಡಿಕೊಳ್ಳುವುದು ಕಾರ್ಯಕರ್ತರ ಜವಬ್ದಾರಿಯಾಗಿದ್ದು, ಇದನ್ನು ಅಚ್ಚುಕಟ್ಟಾಗಿ ನಿರ್ವಹಿಸುವಂತೆ ಸೂಚಿಸಿದರು.

ಜೆಡಿಎಸ್ ತಾಲೂಕು ಅಧ್ಯಕ್ಷ ಎಚ್.ಸಿ.ಜಯಮುತ್ತು ಮಾತನಾಡಿ, ಅ.ದೇವೇಗೌಡರು ಬಿಜೆಪಿಯಿಂದ ಕ್ಷೇತ್ರದಲ್ಲಿ ಗೆಲುವು ಸಾಧಿಸಲಿದ್ದಾರೆ. ಈ ಬಾರಿ ಜೆಡಿಎಸ್ ಹಾಗೂ ಬಿಜೆಪಿ ಎರಡು ಪಕ್ಷಗಳು ಒಂದಾಗಿರುವುದರಿಂದ ನನ್ನ ಬಲ ಹೆಚ್ಚಾಗಿದೆ. ಪ್ರತಿ ಪಂಚಾಯಿತಿ ವ್ಯಾಪ್ತಿಯಲ್ಲಿ ಸಹ ಎರಡೂ ಪಕ್ಷಗಳ ಕಾರ್ಯಕರ್ತರು ಸಮನ್ವಯತೆಯಿಂದ ಕೆಲಸ ಮಾಡಿ ಎನ್‌ಡಿಎ ಅಭ್ಯರ್ಥಿಯ ಗೆಲುವಿಗೆ ಶ್ರಮಿಸಬೇಕು ಎಂದು ಮನವಿ ಮಾಡಿದರು.

ಸಭೆಯಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಆನಂದಸ್ವಾಮಿ, ತಾಲೂಕು ಅಧ್ಯಕ್ಷ ತೂಬಿನಕೆರೆ ರಾಜು, ನಗರ ಅಧ್ಯಕ್ಷ ಶಿವಕುಮಾರ್, ಜೆಡಿಎಸ್ ಮುಖಂಡ ಬೋರ್‌ವೆಲ್ ರಾಮಚಂದ್ರು ಮುಂತಾದವರು ಇದ್ದರು.

Latest Videos
Follow Us:
Download App:
  • android
  • ios