Chikkamagaluru: ಕಾಫಿನಾಡಿಗೆ ನೂತನ ಜಿಲ್ಲಾಧಿಕಾರಿಯಾಗಿ ಮೀನಾ ನಾಗರಾಜ್ ನೇಮಕ

ಚಿಕ್ಕಮಗಳೂರು ಜಿಲ್ಲಾಧಿಕಾರಿ ಕೆ.ಎನ್. ರಮೇಶ್ ಅವರನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದ್ದು, ನೂತನ ಜಿಲ್ಲಾಧಿಕಾರಿಗಳಾಗಿ ಡಾ. ಮೀನಾ ನಾಗರಾಜ್ ಸಿ.ಎನ್ ಅವರನ್ನು ಸರ್ಕಾರ ನೇಮಕ ಮಾಡಿದೆ.

Dr Meena Nagaraj CN has been appointed as the new district collector of Chikkamagaluru gvd

ವರದಿ: ಆಲ್ದೂರು ಕಿರಣ್, ಏಷ್ಯಾನೆಟ್ ಸುವರ್ಣ ನ್ಯೂಸ್, ಚಿಕ್ಕಮಗಳೂರು 

ಚಿಕ್ಕಮಗಳೂರು (ಜೂ.28): ಚಿಕ್ಕಮಗಳೂರು ಜಿಲ್ಲಾಧಿಕಾರಿ ಕೆ.ಎನ್. ರಮೇಶ್ ಅವರನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದ್ದು, ನೂತನ ಜಿಲ್ಲಾಧಿಕಾರಿಗಳಾಗಿ ಡಾ.ಮೀನಾ ನಾಗರಾಜ್ ಸಿ.ಎನ್ ಅವರನ್ನು ಸರ್ಕಾರ ನೇಮಕ ಮಾಡಿದೆ. ರಾಜ್ಯ ಮಾಹಿತಿ ತಂತ್ರಜ್ಞಾನ ಮತ್ತು ಬಯೋ ಟೆಕ್ನಾಲಜಿ ಇಲಾಖೆಯ ನಿರ್ದೇಶಕರಾಗಿ ಕಾರ್ಯನಿರ್ವಹಿಸುತ್ತಿದ್ದ ಡಾ. ಮೀನಾ ಅವರನ್ನು ಚಿಕ್ಕಮಗಳೂರು ಜಿಲ್ಲಾಧಿಕಾರಿಯಾಗಿ ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.

ಕರ್ನಾಟಕ ಮೂಲದ ಐಎಎಸ್ ಅಧಿಕಾರಿ ಮೀನಾ ಅವರು ಈ ಹಿಂದೆ ಕಾರ್ಯನಿರ್ವಹಿಸಿದ್ದ ಇಲಾಖೆಗಳಲ್ಲಿ ಉತ್ತಮ ಹೆಸರು ಮಾಡಿದ್ದಾರೆ. ಚಿಕ್ಕಮಗಳೂರು ಜಿಲ್ಲಾಧಿಕಾರಿಗಳಾಗಿದ್ದ ಕೆ.ಎನ್. ರಮೇಶ್ ಅವರನ್ನು ವರ್ಗಾವಣೆ ಮಾಡಲಾಗಿದ್ದು, ಅವರಿಗೆ ಯಾವುದೇ ಸ್ಥಾನವನ್ನು ಸೂಚಿಸಿಲ್ಲ. ಇತ್ತೀಚೆಗೆ ಚಿಕ್ಕಮಗಳೂರು ಜಿ.ಪಂ. ಸಿಇಓ ಸ್ಥಾನದಿಂದ ರಾಜ್ಯ ವಿಪತ್ತು ನಿರ್ವಹಣಾ ವಿಭಾಗದ ಮುಖ್ಯಸ್ಥರಾಗಿ ವರ್ಗಾವಣೆಯಾಗಿದ್ದ ಜಿ.ಪ್ರಭು ಅವರನ್ನು ಇದೀಗ ತುಮಕೂರು ಜಿ.ಪಂ. ಸಿಇಓ ಆಗಿ ನೇಮಕ ಮಾಡಲಾಗಿದೆ.

ಅಕ್ಕಿ ವಿಚಾರದಲ್ಲಿ ಸಿ.ಟಿ.ರವಿ ಯಾಕೆ ಮೈ ಪರಿಚಿಕೊಳ್ಳುತ್ತಿದ್ದಾರೋ ಗೊತ್ತಿಲ್ಲ: ಸಚಿವ ಎಂ.ಸಿ.ಸುಧಾಕರ್‌

ತರೀಕೆರೆ ಉಪವಿಭಾಗಾಧಿಕಾರಿ ಸಿದ್ದಲಿಂಗಾರೆಡ್ಡಿ ಅವರನ್ನೂ ವರ್ಗಾವಣೆ ಮಾಡಲಾಗಿದ್ದು, ಅವರ ಜಾಗಕ್ಕೆ ಹೊಸದಾಗಿ ಕೆ.ಜೆ.ಕಾಂತರಾಜ್ ಅವರನ್ನು ನೇಮಿಸಲಾಗಿದೆ. ಕೆ.ಜೆ ಕಾಂತರಾಜ್ ಈ ಹಿಂದೆ ಚಿಕ್ಕಮಗಳೂರು ತಾಲೂಕಿನ ತಹಶೀಲ್ದಾರ್ ಆಗಿ ಸಾಕಷ್ಟು ಜನಪರ ಕೆಲಸಗಳನ್ನು ಮಾಡುವ ಮೂಲಕ ಜನಮನ್ನಣೆಗೆ ಪಾತ್ರರಾಗಿದ್ದರು. ಇದೀಗ ತರೀಕೆರೆ ಉಪ ವಿಭಾಗದ ಉಪವಿಭಾಗಾಧಿಕಾರಿಯಾಗಿ ಮರಳಿ ಚಿಕ್ಕಮಗಳೂರು ಜಿಲ್ಲೆಗೆ ಬರುತ್ತಿದ್ದು ಸಾರ್ವಜನಿಕರು ಮತ್ತಷ್ಟು ಉತ್ತಮ ಜನಪರ ಕಾರ್ಯಗಳ ನಿರೀಕ್ಷೆಯಲ್ಲಿದ್ದಾರೆ.

Latest Videos
Follow Us:
Download App:
  • android
  • ios