ಮೈಸೂರು (ಸೆ.13):  ನಂಜನಗೂಡು ತಾಲೂಕು ಆರೋಗ್ಯಾಧಿಕಾರಿಯಾಗಿದ್ದ ಡಾ.ಎಸ್‌.ಆರ್‌.ನಾಗೇಂದ್ರ ಆತ್ಮಹತ್ಯೆ ಪ್ರಕರಣದ ತನಿಖೆ ನಡೆಸಿದ ಮೈಸೂರು ವಿಭಾಗದ ಪ್ರಾದೇಶಿಕ ಆಯುಕ್ತ ಜಿ.ಸಿ.ಪ್ರಕಾಶ್‌ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ತನಿಖಾ ವರದಿ ಸಲ್ಲಿಸಿದ್ದಾರೆ. 

ಡಾ.ನಾಗೇಂದ್ರ ಆತ್ಮಹತ್ಯೆ ಹಿನ್ನೆಲೆಯಲ್ಲಿ ಜಿಪಂ ಸಿಇಒ ವಿರುದ್ಧ ಸರ್ಕಾರಿ ವೈದ್ಯಾಧಿಕಾರಿಗಳ ಸಂಘದಿಂದ ಮುಷ್ಕರ ನಡೆಸಿ ಸೂಕ್ತ ತನಿಖೆಗೆ ಒತ್ತಾಯಿಸಿದ್ದರು. ಮುಷ್ಕರಕ್ಕೆ ಮಣಿದ ಸರ್ಕಾರವು ಜಿಪಂ ಸಿಇಒ ವರ್ಗಾವಣೆಗೊಳಿಸಿ, ಪ್ರಾದೇಶಿಕ ಆಯುಕ್ತರನ್ನು ತನಿಖೆಗೆ ನಿಯೋಜಿಸಿ, ವಾರದೊಳಗೆ ವರದಿ ನೀಡಲು ಸೂಚಿಸಿತ್ತು. 

ಜಿಪಂ ಸಿಇಒ ಪ್ರಶಾಂತ್ ಮಿಶ್ರಾ ಪರ ನಿಂತ ಪಿಡಿಒಗಳು ...

ಅದರಂತೆ ಪ್ರಾದೇಶಿಕ ಆಯುಕ್ತರು ಮತ್ತು ತಂಡ ಡಾ.ನಾಗೇಂದ್ರರ ಕುಟುಂಬ ಸದಸ್ಯರು, ಜಿಲ್ಲಾಧಿಕಾರಿ, ಜಿಪಂ ಸಿಇಒ ಸೇರಿದಂತೆ ಸುಮಾರು 150 ಜನರ ಅಭಿಪ್ರಾಯ ಸಂಗ್ರಹಿಸಿ, ವಿಭಿನ್ನ ದೃಷ್ಟಿಕೋನದಲ್ಲಿ ತನಿಖಾ ತಂಡವು ವರದಿ ಸಿದ್ಧಪಡಿಸಿ ಸರ್ಕಾರಕ್ಕೆ ಸಲ್ಲಿಸಿದೆ ಎನ್ನಲಾಗಿದೆ.