Asianet Suvarna News

ತಮ್ಮ ಕ್ಷೇತ್ರದಲ್ಲಿ ಕೊರೋನಾದಿಂದ ಮೃತಪಟ್ಟವರ ಕುಟುಂಬಕ್ಕೆ ಪರಿಹಾರ ಘೋಷಿಸಿದ ಸುಧಾಕರ್

* ಕೊರೊನಾದಿಂದ ಮೃತಪಟ್ಟವರ ಕುಟುಂಬಕ್ಕೆ 1 ಲಕ್ಷ ರೂ. ಪರಿಹಾರ ಘೋಷಿಸಿದ ಸಚಿವ ಸುಧಾಕರ್‌
* ತಮ್ಮ ಕ್ಷೇತ್ರದಲ್ಲಿ ಕೊರೋನಾದಿಂದ ಮೃತಪಟ್ಟವರ ಕುಟುಂಬಕ್ಕೆ 1 ಲಕ್ಷ ರೂ.
* ಶ್ರೀ ಸಾಯಿ ಕೃಷ್ಣ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಪರಿಹಾರ

dr sudhakar announces RS 1 lakh for corona death family in his-chikkaballapur constituency rbj
Author
Bengaluru, First Published Jun 13, 2021, 10:16 PM IST
  • Facebook
  • Twitter
  • Whatsapp

ಬೆಂಗಳೂರು, (ಜೂನ್.13): ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಅವರು ತಾವು ಪ್ರತಿನಿಧಿಸುವ ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದಲ್ಲಿ ಕೋವಿಡ್ ಸೋಂಕಿಗೊಳಗಾಗಿ ಮೃತಮಟ್ಟವರ ಕುಟುಂಬಕ್ಕೆ 1 ಲಕ್ಷ ಪರಿಹಾರ ನೀಡುವುದಾಗಿ  ಘೋಷಿಸಿದ್ದಾರೆ.

ಇಂದು (ಭಾನುವಾರ) ಸುದ್ದಿಗಾರರೊಂದಿಗೆ ಮಾತನಾಡಿದ ಡಾ.ಸುಧಾಕರ್​​, ಮೃತಪಟ್ಟವರ ಕುಟುಂಬಕ್ಕೆ‌ ತೆರಳಿ ಸಾಂತ್ವನ ಹೇಳಿ ಧೈರ್ಯ ತುಂಬುವ ಕೆಲಸ ಮಾಡಲಾಗುತ್ತಿದೆ. ಜೊತೆಗೆ ಶ್ರೀ ಸಾಯಿ ಕೃಷ್ಣ ಚಾರಿಟೇಬಲ್ ಟ್ರಸ್ಟ್ ವತಿಯಿಂದ 1 ಲಕ್ಷ ರೂ. ಪರಿಹಾರವನ್ನು ನೀಡಲಾಗುವುದು. ಎಂದು ಹೇಳಿದರು.

ತಮ್ಮ ಕ್ಷೇತ್ರದಲ್ಲಿ ಪ್ರತಿಯೊಬ್ಬರಿಗೂ ವ್ಯಾಕ್ಸಿನೇಷನ್‌ ಮಾಡಿಸಲು ಡಿಸಿಎಂ ಸಂಕಲ್ಪ

ಈಗಾಗಲೇ ರಾಜ್ಯದಲ್ಲಿ ಸಚಿವರು ತಮ್ಮದೇ ರೀತಿ ಸಹಾಯವನ್ನು ಮಾಡುತ್ತಿದ್ದಾರೆ. ಅದೇ ರೀತಿ ನಾನು ಕೂಡ ಮಾಡುತ್ತಿರುವೆ. ಕೋವಿಡ್‌ ಮೊದಲನೇ ಅಲೆಯಲ್ಲಿ ಕ್ಷೇತ್ರದಾದ್ಯಂತ ಸುಮಾರು 80 ಸಾವಿರಕ್ಕೂ ಅಧಿಕ ದಿನಸಿ ಕಿಟ್‌ಗಳನ್ನು ಕೊಡಲಾಗಿದೆ.‌ ಈ ಬಾರಿಯೂ ಅದೇ ರೀತಿ ಕೊಡಲಾಗುವುದೆಂದು ತಿಳಿಸಿದರು.

ಮೃತರಿಗೆ ಪರಿಹಾರ ನೀಡಲು ಡಾ.ಸುಧಾಕರ್​ ಅವರು 'ಜನಪ್ರತಿನಿಧಿಗಳ ಪರಿಹಾರ ನಿಧಿ'ಯ ಹಣವನ್ನ ಬಳಸಿಕೊಳ್ಳಲಿದ್ದಾರೆ. ಈ ಕಾರ್ಯದ ಜವಾಬ್ದಾರಿಯನ್ನ ಶ್ರೀ ಸಾಯಿ ಕೃಷ್ಣ ಚಾರಿಟೇಬಲ್ ಟ್ರಸ್ಟ್ ವಹಿಸಿಕೊಳ್ಳಲಿದೆ.

Follow Us:
Download App:
  • android
  • ios