ಸೌಜನ್ಯ ಹತ್ಯೆ ಕೇಸ್‌ನಲ್ಲಿ ಡಾ.ಹೆಗ್ಗಡೆ ಹೆಸರು ಕೆಡಿಸುವ ಹುನ್ನಾರ: ಸಿದ್ದಸೇನ ಮುನಿ ಮಹಾರಾಜರು

ಕಾನೂನು ಪ್ರಕಾರ ನಿಜವಾದ ಆರೋಪಿಗೆ ಶಿಕ್ಷೆ ಆಗಬೇಕೆಂದು ಡಾ.ವೀರೇಂದ್ರ ಹೆಗಡೆ ಅವರು ಕೂಡ ಹೇಳಿದ್ದಾರೆ. ಹೈಕೋರ್ಟ್‌, ಸುಪ್ರೀಂ ಕೋರ್ಟ್‌ಗೆ ಹೋಗಿ ಆದರೂ ಸೌಜನ್ಯ ಕುಟುಂಬಕ್ಕೆ ನ್ಯಾಯ ದೊರಕಿಸಿಕೊಡಬೇಕು ಎಂದು ಆಗ್ರಹಿಸಿದ ಹಲಗಾ- ಬಸ್ತವಾಡ ಆಶ್ರಮದ ಬಾಲಾಚಾರ್ಯ ಸಿದ್ದಸೇನ ಮುನಿ ಮಹಾರಾಜರು

Dr. Veerendra Heggade Name Defamed in the Soujanya Murder Case grg

ಬೆಳಗಾವಿ(ಆ.04): ಧರ್ಮಸ್ಥಳದ ಸೌಜನ್ಯ ಕೊಲೆ ಪ್ರಕರಣದಲ್ಲಿ ವಿನಾಕಾರಣ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆ ಅವರ ಹೆಸರು ಕೆಡಿಸುವ ಹುನ್ನಾರ ನಡೆದಿದೆ ಎಂದು ಹಲಗಾ- ಬಸ್ತವಾಡ ಆಶ್ರಮದ ಬಾಲಾಚಾರ್ಯ ಸಿದ್ದಸೇನ ಮುನಿ ಮಹಾರಾಜರು ಆರೋಪಿಸಿದರು.

ಬೆಳಗಾವಿ ತಾಲೂಕಿನ ಹಲಗಾ-ಬಸ್ತವಾಡ ಗ್ರಾಮದ ಆಶ್ರಮದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಜೈನಮುನಿಗಳು, ಧರ್ಮಸ್ಥಳದ ಸೌಜನ್ಯ ಕೊಲೆ ಪ್ರಕರಣದ ಆರೋಪಿಗಳಿಗೆ ತಕ್ಕ ಶಿಕ್ಷೆ ಆಗಲೇಬೇಕು. ಮೃತ ವಿದ್ಯಾರ್ಥಿನಿ ಸೌಜನ್ಯ ನಮ್ಮ ತಂಗಿ, ತಾಯಿಯ ಸಮಾನ. ಸೌಜನ್ಯ ಹತ್ಯೆಯಾಗಿ 10 ವರ್ಷಗಳೇ ಕಳೆದಿವೆ. ಆದರೂ ಆಕೆಯ ಕುಟುಂಬಕ್ಕೆ ನ್ಯಾಯ ಸಿಕ್ಕಿಲ್ಲ. ಪ್ರಕರಣದ ತನಿಖಾಧಿಕಾರಿಗಳು ನಿಜವಾದ ಆರೋಪಿಗಳಿಗೆ ಶಿಕ್ಷೆ ಕೊಡಿಸಬೇಕು ಎಂದು ಆಗ್ರಹಿಸಿದರು.

ಈ ಸುದ್ದಿ ವಿಧಾನಸೌಧದಲ್ಲಿ ಸೌಂಡ್‌ ಮಾಡಿತ್ತು!: ಅಂಗನವಾಡಿ ಕಾರ್ಯಕರ್ತೆಯರು ಈಗ ಫುಲ್‌ ಖುಷ್‌..!

ಸೌಜನ್ಯ ಹತ್ಯೆ ಪ್ರಕರಣದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳದ ಹೆಸರನ್ನು ಎಳೆದು ತರಲಾಗುತ್ತಿದೆ. ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆ ಹೆಸರನ್ನು ಕೆಡಿಸುವ ಯತ್ನ ನಡೆದಿದೆ. ಧರ್ಮಸ್ಥಳ ಕ್ಷೇತ್ರಕ್ಕೆ ದೇಶದ ಎಲ್ಲ ಭಾಗಗಳ ಎಲ್ಲ ಧರ್ಮದ ಭಕ್ತರು ಬರುತ್ತಾರೆ. ಜಾತಿ-ಧರ್ಮ ಮೀರಿದ ದೇಶದ ಪ್ರಮುಖ ಶ್ರದ್ಧಾ ಕೇಂದ್ರ ಧರ್ಮಸ್ಥಳ. ಆದರೆ ವೀರೇಂದ್ರ ಹೆಗ್ಗಡೆ ಅವರ ಹೆಸರಿಗೆ ಕಪ್ಪು ಚುಕ್ಕಿ ತರುವ ಕೆಲಸ ಯಾರೂ ಮಾಡಬಾರದು ಎಂದು ಹೇಳಿದರು.

ಕಾನೂನು ಪ್ರಕಾರ ನಿಜವಾದ ಆರೋಪಿಗೆ ಶಿಕ್ಷೆ ಆಗಬೇಕೆಂದು ಡಾ.ವೀರೇಂದ್ರ ಹೆಗಡೆ ಅವರು ಕೂಡ ಹೇಳಿದ್ದಾರೆ. ಹೈಕೋರ್ಟ್‌, ಸುಪ್ರೀಂ ಕೋರ್ಟ್‌ಗೆ ಹೋಗಿ ಆದರೂ ಸೌಜನ್ಯ ಕುಟುಂಬಕ್ಕೆ ನ್ಯಾಯ ದೊರಕಿಸಿಕೊಡಬೇಕು ಎಂದು ಆಗ್ರಹಿಸಿದರು.

ಚಿಕ್ಕೋಡಿ ತಾಲೂಕಿನ ಹಿರೇಕೋಡಿಯ ನಂದಿ ಪರ್ವತ ಆಶ್ರಮದ ಕಾಮಕುಮಾರ ನಂದಿ ಮಹಾರಾಜರ ಹತ್ಯೆ ಪ್ರಕರಣವನ್ನು ರಾಜ್ಯ ಸರ್ಕಾರ ಸಿಐಡಿ ತನಿಖೆಗೆ ಒಪ್ಪಿಸಿದೆ. ತಪ್ಪಿಸತ್ಥರ ವಿರುದ್ಧ ಕ್ರಮ ಆಗುವ ವಿಶ್ವಾಸವಿದೆ ಎಂದು ಹೇಳಿದರು.

Latest Videos
Follow Us:
Download App:
  • android
  • ios