Asianet Suvarna News Asianet Suvarna News

Mysuru 282 ಕೋಟಿ ವೆಚ್ಚದಲ್ಲಿ 164 ಗ್ರಾಮಕ್ಕೆ ಕುಡಿಯುವ ನೀರು

ತಾಲೂಕಿನ ಬಾಚಹಳ್ಳಿ ಮತ್ತು ಇತರೆ 164 ಗ್ರಾಮದ 277 ಜನವಸತಿ ಪ್ರದೇಶಗಳಿಗೆ ಬಹುಗ್ರಾಮ ಕುಡಿಯುವ ನೀರಿನ ಯೋಜನೆಯಡಿ ನೀರು ಪೂರೈಸುವ . 282 ಕೋಟಿ ವೆಚ್ಛದ ಕಾಮಗಾರಿಗೆ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ದೊರಕಿದೆ ಎಂದು ಸಂಸದ ಪ್ರತಾಪ ಸಿಂಹ ತಿಳಿಸಿದ್ದಾರೆ.

Drinking water for 164 villages at a cost of 282 crores snr
Author
First Published Dec 13, 2022, 5:38 AM IST

  ಮೈಸೂರು (ಡಿ.13): ತಾಲೂಕಿನ ಬಾಚಹಳ್ಳಿ ಮತ್ತು ಇತರೆ 164 ಗ್ರಾಮದ 277 ಜನವಸತಿ ಪ್ರದೇಶಗಳಿಗೆ ಬಹುಗ್ರಾಮ ಕುಡಿಯುವ ನೀರಿನ ಯೋಜನೆಯಡಿ ನೀರು ಪೂರೈಸುವ . 282 ಕೋಟಿ ವೆಚ್ಛದ ಕಾಮಗಾರಿಗೆ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ದೊರಕಿದೆ ಎಂದು ಸಂಸದ ಪ್ರತಾಪ ಸಿಂಹ ತಿಳಿಸಿದ್ದಾರೆ.

ಹುಣಸೂರಿನ ಜನತೆ ನನ್ನನ್ನು ಎರಡು ಬಾರಿ ಚುನಾವಣೆಯಲ್ಲಿ (Election)  ಗೆಲ್ಲಲು ಸಹಕರಿಸಿದ್ದು, ಜನತೆಯ ಋುಣವನ್ನು ತೀರಿಸುವ ನಿಟ್ಟಿನಲ್ಲಿ ತಾಲೂಕಿನಲ್ಲಿ 184 ಹಳ್ಳಿಗಳಿದ್ದು, ಒಟ್ಟಾರೆಯಾಗಿ 310 ಜನವಸತಿ ಗಳಿವೆ. ಇವುಗಳಿಗೆ ಜಲ ಜೀವನ್‌ ಮಿಷನ್‌ ಯೋಜನೆಯಡಿ ಪ್ರತಿ ಮನೆಗೆ ಕಾರ್ಯಾತ್ಮಕ ನಳ ನೀರು ಸಂಪರ್ಕ ಅಳವಡಿಸಲು ಕ್ರಮ ವಹಿಸಲಾಗಿದ್ದು, ಕಾಮಗಾರಿ ಪ್ರಗತಿಯಲ್ಲಿದೆ.

ತಾಲೂಕಿನಲ್ಲಿ 2011ರ ಜನಗಣತಿಯಂತೆ ಗ್ರಾಮೀಣ (Rurak)  ಪ್ರದೇಶದಲ್ಲಿ ಒಟ್ಟು 2,69,207 ಜನಸಂಖ್ಯೆ ಇದ್ದು, ಇದರಲ್ಲಿ ಈಗಾಗಲೇ ಕೆ.ಆರ್‌. ನಗರದಿಂದ ಹುಣಸೂರು ನಗರಕ್ಕೆ ಕುಡಿಯುವ ನೀರು ಸರಬರಾಜು ಯೋಜನೆಯಿಂದ ಹುಣಸೂರು ತಾಲೂಕಿನ 5 ಜನವಸತಿಗಳಿಗೆ ಹಾಗೂ ಇಲವಾಲ ಬಹುಗ್ರಾಮ ಕುಡಿಯುವ ನೀರು ಸರಬರಾಜು ಯೋಜನೆಯಿಂದ ತಾಲೂಕಿನ 23 ಜನವಸತಿಗಳಿಗೆ ಒಟ್ಟು 28 ಜನವಸತಿಗಳಿಗೆ ಕಾರ್ಯಾತ್ಮಕ ನಳ ನೀರು ಸಂಪರ್ಕ ಯೋಜನೆ ಕಾಮಗಾರಿ ಅನುಷ್ಠಾನಗೊಳ್ಳುತ್ತಿದೆ ಎಂದು ಅವರು ಹೇಳಿದ್ದಾರೆ.

ತಾಲೂಕು ವ್ಯಾಪ್ತಿಯ ಸುಮಾರು 277 ಜನವಸತಿಗಳಿಗೆ ಕಾರ್ಯಾತ್ಮಕ ನಳ ನೀರು ಸರಬರಾಜು ಯೋಜನೆ ಕಾರ್ಯಗತಗೊಳಿಸಲು ಜಲಜೀವನ್‌ ಮಿಷನ್‌ ಯೋಜನೆಯಡಿ . 282.26 ಕೋಟಿ ಅಂದಾಜುಪಟ್ಟಿಸಿದ್ಧಪಡಿಸಲಾಗಿತ್ತು. ಈ ಯೋಜನೆಯನ್ನು 2024ನೇ ಸಾಲಿನ ಅಂತ್ಯದೊಳಗೆ ಪೂರ್ಣಗೊಳಿಸಬೇಕಿರುವುದರಿಂದ ಸಂಪುಟ ಸಭೆಯಲ್ಲಿ ಮಂಡಿಸಿ ಅನುಮೋದನೆ ನೀಡುವಂತೆ ಸಂಸದ ಪ್ರತಾಪ್‌ ಸಿಂಹ ಹಲವು ಬಾರಿ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ಮನವಿ ಮಾಡಲಾಗಿತ್ತು. ಇದಕ್ಕೆ ಅನುಗುಣವಾಗಿ ಕಳೆದ ಕ್ಯಾಬಿನೆಟ್‌ನಲ್ಲಿ ಮೈಸೂರು ತಾಲೂಕು ಹಳೆ ಉಂಡವಾಡಿಯ ಕಾವೇರಿ ಮೂಲದಿಂದ ಹುಣಸೂರು ತಾಲೂಕಿನ ಬಾಚಹಳ್ಳಿ ಮತ್ತು ಇತರೆ 164 ಗ್ರಾಮದ 277 ಜನವಸತಿ ಪ್ರದೇಶಗಳಿಗೆ ಬಹುಗ್ರಾಮ ಕುಡಿಯುವ ನೀರಿನ ಯೋಜನೆಯಡಿ ನೀರು ಪೂರೈಸುವ . 282 ಕೋಟಿ ವೆಚ್ಚದ ಕಾಮಗಾರಿಗೆ ಅನುಮೋದನೆ ನೀಡಿದ್ದು, ಹುಣಸೂರು ತಾಲೂಕಿನ ಜನತೆಯ ಪರವಾಗಿ ಮುಖ್ಯಮಂತ್ರಿ ಬಸವರಾಜ್‌ ಬೊಮ್ಮಾಯಿ ಹಾಗೂ ಸಹಕರಿಸಿದ ಜಿಲ್ಲಾ ಉಸ್ತುವಾರಿ ಸಚಿವ ಎಸ್‌.ಟಿ. ಸೋಮಶೇಖರ್‌ ಅವರಿಗೆ ಧನ್ಯವಾದ ಅರ್ಪಿಸುವುದಾಗಿ ಅವರು ತಿಳಿಸಿದ್ದಾರೆ.

7 ಸಾವಿರ ಮನೆಗಳಿಗೆ ನೀರು ಸಂಪರ್ಕ

ಬೆಂಗಳೂರು(ಆ.06):  ಕೊಳಾಯಿ ಮೂಲಕ ಮನೆಗಳಿಗೆ ನೀರು ಸಂಪರ್ಕ ಕಲ್ಪಿಸುವ ‘ಜಲಜೀವನ್‌ ಮಿಷನ್‌’ ಯೋಜನೆ ಮಹತ್ವಾಕಾಂಕ್ಷೆಯ ಕಾರ್ಯಕ್ರಮವಾಗಿದೆ. ಈ ಯೋಜನೆಯನ್ನು ನಿಗದಿತ ಕಾಲಮಿತಿಯಲ್ಲಿ ಅನುಷ್ಠಾನಗೊಳಿಸಲು ವಿಶೇಷ ಆಸಕ್ತಿ ವಹಿಸಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೂಚಿಸಿದರು. ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ ರಾಜ್ಯ ಮಟ್ಟದ ಪ್ರಗತಿ ಪರಿಶೀಲನಾ ಸಭೆ ‘ದಿಶಾ’ದಲ್ಲಿ ಮಾತನಾಡಿದ ಅವರು, ಯೋಜನೆಯಡಿ ಕಳೆದ ವರ್ಷ 19 ಲಕ್ಷ ಮನೆಗಳಿಗೆ ಕೊಳಾಯಿ ಸಂಪರ್ಕ ನೀಡಲಾಗಿದೆ. ಪ್ರಸ್ತುತ ಪ್ರತಿ ದಿನ ಸರಾಸರಿ 7 ಸಾವಿರ ಮನೆಗೆ ಸಂಪರ್ಕ ನೀಡಲಾಗುತ್ತಿದೆ. ಅನುಮೋದನೆಯಾದ ಕಾಮಗಾರಿಗಳಿಗೆ ತ್ವರಿತವಾಗಿ ಕಾರ್ಯಾದೇಶ ನೀಡಬೇಕು, ಕಾರ್ಯಾದೇಶ ನೀಡಿದ ಕಾಮಗಾರಿಗಳು ಪ್ರಾರಂಭಗೊಳಿಸುವುದನ್ನು ಖಾತರಿ ಪಡಿಸಬೇಕು ಎಂದು ತಿಳಿಸಿದರು.

ಕೆಲವು ಯೋಜನೆಗಳಲ್ಲಿ ನಿರೀಕ್ಷಿತ ಗುರಿ ತಲುಪಿಲ್ಲ. ಉದ್ಯೋಗ ಖಾತರಿ ಯೋಜನೆಯಡಿ ಒಟ್ಟಾರೆ ಸಾಧನೆ ಉತ್ತಮವಾಗಿದ್ದರೂ, ಕೆಲವು ಜಿಲ್ಲೆಗಳ ಸಾಧನೆ ಕಡಿಮೆ ಇದೆ. ಇದನ್ನು ಸರಿ ಪಡಿಸಿ ಈ ವರ್ಷದ ಗುರಿಯನ್ನು ನಿಗದಿತ ಅವಧಿಯಲ್ಲಿ ಸಾಧಿಸಬೇಕು. ಸದಸ್ಯರು ಕ್ಷೇತ್ರ ಭೇಟಿ ನೀಡಲು ವ್ಯವಸ್ಥೆ ಮಾಡಿ ವರದಿ ಸಲ್ಲಿಸಬೇಕು. ಪ್ರತಿ ಜಿಲ್ಲೆಯಲ್ಲೂ ಮೂರು ತಿಂಗಳಿಗೊಮ್ಮೆ ದಿಶಾ ಸಮಿತಿ ಸಭೆ ಕಡ್ಡಾಯವಾಗಿ ನಡೆಸಬೇಕು ಎಂದು ನಿರ್ದೇಶನ ನೀಡಿದರು.

ಕುಡಿಯುವ ನೀರಿನ ಯೋಜನೆಗೆ 1810 ಕೋಟಿ: ಸಂಪುಟ ಸಭೆಯಲ್ಲಿ ಆಡಳಿತಾತ್ಮಕ ಅನುಮೋದನೆ

ವಿಮಾ ಕ್ಲೇಮು ಇತ್ಯರ್ಥಪಡಿಸಿ:

ಐಟಿಐ, ಜಿಟಿಟಿಸಿ, ಡಿಪ್ಲೊಮಾ ಕಾಲೇಜುಗಳು ವರ್ಷದಲ್ಲಿ ಎರಡು ಸಲ ಮೂರು ತಿಂಗಳ ಕೋರ್ಸ್‌ ಆಯೋಜಿಸಬೇಕು. ಇದಕ್ಕೆ ಗುರಿ ನಿಗದಿ ಪಡಿಸಬೇಕು. ಫಸಲ… ಬಿಮಾ ಯೋಜನೆಯಲ್ಲಿ ವಿಮಾ ಕಂಪನಿಗಳ ನ್ಯೂನತೆ ಸರಿಪಡಿಸಲು ಜಿಲ್ಲಾಧಿಕಾರಿಗಳು ಸಭೆ ನಡೆಸಿ ಕ್ಲೇಮುಗಳು ಬಾಕಿ ಇದ್ದರೆ ಕೂಡಲೇ ಇತ್ಯರ್ಥಪಡಿಸಬೇಕು. ಯಾದಗಿರಿ, ರಾಯಚೂರು, ಬೀದರ್‌ನಲ್ಲಿ ಅಪೌಷ್ಟಿಕತೆ ನಿವಾರಣೆಗೆ ಕೇಂದ್ರ ಸರ್ಕಾರದ ಯೋಜನೆಯೊಂದಿಗೆ, ರಾಜ್ಯ ಸರ್ಕಾರದಿಂದಲೂ ಪೂರಕ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ವಿವರಿಸಿದರು.

Follow Us:
Download App:
  • android
  • ios