ಮೈಸೂರು (ಸೆ.16): ‘ಕನ್ನಡ ಚಿತ್ರರಂಗದಲ್ಲಿ ಈ ರೀತಿ ನಡೆಯುತ್ತಿರುವುದು ನೋವಿನ ಸಂಗತಿ. ನಮ್ಮನ್ನು ನೋಡಿ ಸಮಾಜ ಮತ್ತು ಮಕ್ಕಳು ಕಲಿಯುವುದರಿಂದ ಮುಂದಿನ ಪೀಳಿಗೆಗೆ ನಾವು ಒಳ್ಳೆಯದನ್ನು ಬಿಟ್ಟು ಹೋಗಬೇಕು’ ಎಂದು ನಟ ಅನಿರುದ್ಧ ಹೇಳಿದ್ದಾರೆ. 

ಡ್ರಗ್ಸ್‌ ಮಾಫಿಯಾ ಪ್ರಕರಣಕ್ಕೆ ಸಂಬಂಧಿಸಿ ಮೈಸೂರಿನಲ್ಲಿ ಮಂಗಳವಾರ ಪ್ರತಿಕ್ರಿಯಿಸಿದ ಅವರು, ಡ್ರಗ್ಸ್‌ ಎಂಬುದು ಪ್ರಪಂಚದಾದ್ಯಂತ ಇದೆ. ಅದು ಕೇವಲ ಸ್ಯಾಂಡಲ್‌ವುಡ್‌ಗೆ ಮಾತ್ರ ಸಂಬಂಧಿಸಿಲ್ಲ. ಆದರೆ ಕನ್ನಡ ಚಿತ್ರರಂಗದಲ್ಲಿ ಈ ರೀತಿ ನಡೆಯುತ್ತಿರುವುದು ನೋವಿನ ವಿಷಯ ಎಂದು ಅಭಿಪ್ರಾಯಪಟ್ಟರು.

ಕಾಫಿ ನಾಡು ಚಿಕ್ಕಮಗಳೂರಿನಲ್ಲಿ ಮಡದಿ, ಮಕ್ಕಳ 'ಜೊತೆ ಜೊತೆಯಲಿ' ಆರ್ಯವರ್ಧನ್...!

ನಾವು ನಮ್ಮ ಹಿರಿಯರನ್ನು ಸ್ಪೂರ್ತಿಯಾಗಿಟ್ಟುಕೊಂಡು ಬೆಳೆಯಬೇಕು. ನಮ್ಮನ್ನು ನೋಡಿ ಸಮಾಜ ಮತ್ತು ಮಕ್ಕಳು ಕಲಿಯುತ್ತಾರೆ. ಮುಂದಿನ ಪೀಳಿಗೆಗೆ ನಾವು ಒಳ್ಳೆಯದನ್ನು ಬಿಟ್ಟು ಹೋಗಬೇಕು. ಹಿರಿಯರು ಹಾಕಿದ ಬುನಾದಿಯನ್ನು ನಾವು ಕೆಡಿಸಬಾರದು. 

ಹಾಗಾಗಿ ಆ ಹಾದಿಯಲ್ಲಿ ನಾವು ಸಾಗಬೇಕು ಎಂದು ಕಿವಿಮಾತು ಹೇಳಿದರು. ಸ್ಯಾಂಡಲ್‌ವುಡ್‌ನ ಜವಾಬ್ದಾರಿ ಕೇವಲ ಒಬ್ಬರದ್ದಲ್ಲ ಎಲ್ಲರದ್ದು. ಎಲ್ಲರೂ ಕೂಡ ಈಗ ಸ್ಯಾಂಡಲ್‌ವುಡ್‌ ಜವಾಬ್ದಾರಿ ತೆಗೆದುಕೊಳ್ಳಬೇಕು ಎಂದು ತಿಳಿಸಿದರು.

"