ತುರುವೇಕೆರೆ (ಅ.08): ಉತ್ತರ ಪ್ರದೇಶದಲ್ಲಿ ದಲಿತ ಯುವತಿಯ ಮೇಲಿನ ಅತ್ಯಾಚಾರದ ಪೈಶ್ಯಾಚಿಕ ಕೃತ್ಯವನ್ನು ಖಂಡಿಸಿ ತಾಲೂಕಿನ ವಿವಿಧ ಸಂಘಟನೆಗಳ ನೇತೃತ್ವದಲ್ಲಿ ಅ.9ರಂದು ಸಾಯಂಕಾಲ ಅರೆಬೆತ್ತೆಲೆ ಮೆರವಣಿಗೆ ಮತ್ತು ಪಂಜಿನ ಮೆರವಣಿಗೆಯನ್ನು ನಡೆಸಲಾಗುವುದು ಎಂದು ತಾಲೂಕು ಡಿಎಸ್‌ಎಸ್‌ ನ ಸಂಚಾಲಕ ಡಾ.ಚಂದ್ರಯ್ಯ ತಿಳಿಸಿದ್ದಾರೆ.

ಪತ್ರಕರ್ತರೊಂದಿಗೆ ಮಾತನಾಡಿದ ಅವರು ಉತ್ತರ ಪ್ರದೇಶದಲ್ಲಿ ದಲಿತರ ಮೇಲೆ ನಿರಾತಂಕವಾಗಿ ದಬ್ಬಾಳಿಕೆ ನಡೆಯುತ್ತಲೇ ಇದೆ. ಯೋಗಿನಾಥರ ಸರ್ಕಾರದಲ್ಲಿ ದಲಿತರಿಗೆ ರಕ್ಷಣೆಯೇ ಇಲ್ಲದಾಗಿದೆ. 

ಉತ್ತರ ಪ್ರದೇಶದ ಬಿಜೆಪಿ ಸರ್ಕಾರ ವಜಾಕ್ಕೆ ಆಗ್ರಹ ...

ಕೂಡಲೇ ಮುಖ್ಯಮಂತ್ರಿ ಯೋಗಿನಾಥ್‌ ರಾಜೀನಾಮೆ ಸಲ್ಲಿಸಬೇಕು. ಇಲ್ಲವೇ ಉತ್ತರ ಪ್ರದೇಶದ ಸರ್ಕಾರವನ್ನು ರಾಷ್ಟ್ರಪತಿಗಳು ವಜಾ ಮಾಡಬೇಕೆಂದು ಆಗ್ರಹಿಸಿದರು. ಪತ್ರಿಕಾಗೋಷ್ಠಿಯಲ್ಲಿ ವಾಲ್ಮೀಕಿ ಸಮಾಜದ ಅಧ್ಯಕ್ಷ ವಸಂತಕುಮಾರ್‌, ಉಪಾಧ್ಯಕ್ಷ ಕೃಷ್ಣಪ್ಪ ಇದ್ದರು.