ಭೀಕರ ಬರಗಾಲದಿಂದ ರಾಜ್ಯದಲ್ಲಿ ರೈತ ಕಂಗಾಲಾಗಿದ್ದಾನೆ

ರಾಜ್ಯದೆಲ್ಲೆಡೆ ಭೀಕರ ಬರಗಾಲ ಇದೆ. ರೈತರು ಬೆಳೆದ ಬೆಳೆ ಸಂಪೂರ್ಣ ನಾಶವಾಗಿದೆ. ವಿದ್ಯುತ್ ಅಭಾವದಿಂದ ರೈತ ಕಂಗಾಲಾಗಿದ್ದಾನೆ. ರೈತರಿಗೆ ಸಮರ್ಪಕ ವಿದ್ಯುತ್ ನೀಡದೆ ರಾಜ್ಯದ ಕಾಂಗ್ರೆಸ್ ಸರ್ಕಾರ ಜನರ ಜೀವನದ ಜೊತೆ ಚೆಲ್ಲಾಟವಾಡುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಆಕ್ರೋಶ ವ್ಯಕ್ತಪಡಿಸಿದರು.

Due to severe drought, the farmer in the state is distressed snr

  ಶಿರಾ :  ರಾಜ್ಯದೆಲ್ಲೆಡೆ ಭೀಕರ ಬರಗಾಲ ಇದೆ. ರೈತರು ಬೆಳೆದ ಬೆಳೆ ಸಂಪೂರ್ಣ ನಾಶವಾಗಿದೆ. ವಿದ್ಯುತ್ ಅಭಾವದಿಂದ ರೈತ ಕಂಗಾಲಾಗಿದ್ದಾನೆ. ರೈತರಿಗೆ ಸಮರ್ಪಕ ವಿದ್ಯುತ್ ನೀಡದೆ ರಾಜ್ಯದ ಕಾಂಗ್ರೆಸ್ ಸರ್ಕಾರ ಜನರ ಜೀವನದ ಜೊತೆ ಚೆಲ್ಲಾಟವಾಡುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಆಕ್ರೋಶ ವ್ಯಕ್ತಪಡಿಸಿದರು.

ತಾಲೂಕಿನ ಓಜಗುಂಟೆ, ಲಿಂಗದಹಳ್ಳಿಗಳ ರೈತರ ಜಮೀನುಗಳಿಗೆ ಭೇಟಿ ನೀಡಿ ರಾಗಿ ಬೆಳೆಯನ್ನು ವೀಕ್ಷಣೆ ಮಾಡಿ ಮಾಧ್ಯ ಮದವರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಯಾವುದೇ ರೈತ ನೆಮ್ಮದಿಯಾಗಿಲ್ಲ. ಆದ್ದರಿಂದ ಜನ ಜಾಗೃತರಾಗಬೇಕು. ಸರ್ಕಾರದ ವಿರುದ್ಧ ಹೋರಾಟ ಮಾಡಬೇಕು ಎಂದರು.

ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಸರ್ಕಾರ ಬಹುಮತ ಬಂದಿದೆ. ನಮ್ಮನ್ನು ಯಾರೂ ಕೇಳುವವರಿಲ್ಲ ಎಂದು ರಾಜ್ಯವನ್ನು ಲೂಟಿ ಮಾಡುತ್ತ, ಭ್ರಷ್ಟಾಚಾರದಲ್ಲಿ ಮುಳುಗಿ ತುಘಲಕ್ ದರ್ಬಾರ್ ನಡೆಸುತ್ತಿದ್ದಾರೆ. ಸರ್ಕಾರದ ವಿರುದ್ಧ ಬೆಳಗಾವಿ ಅಧಿವೇಶನದಲ್ಲಿ ಬರಗಾಲದ ಬಗ್ಗೆ ಪ್ರಶ್ನಿಸುವುದಕ್ಕೆ ಹೋರಾಟ ಮಾಡುವುದಕ್ಕೆ. ಅನುಕೂಲವಾಗುತ್ತದೆ ಎಂಬ ಉದ್ದೇಶದಿಂದ ರಾಜ್ಯಾದ್ಯಂತ ಬರ ವೀಕ್ಷಣೆ ಮಾಡಲು ಬಂದಿದ್ದೇನೆ. ಸರ್ಕಾರದ ವೈಫಲ್ಯತೆ ವಿರುದ್ದ ಧರಣಿ ಸತ್ಯಾಗ್ರಹ ಹೋರಾಟ ಮಾಡುತ್ತೇನೆ. ಎಲ್ಲಾ ಕಡೆಯಿಂದ ಸಾವಿರಾರು ಜನ ರೈತರು ಬಂದು ಕಾರ್ಯಕ್ರಮದಲ್ಲಿ ಭಾಗವಹಿಸಬೇಕು. ಮುಂದಿನ ದಿನಗಳಲ್ಲಿ ಹೋರಾಟದ ರೂಪರೇಷೆ ಬಗ್ಗೆ ತಿಳಿಸುತ್ತೇನೆ ಎಂದರು.

ರಾಜ್ಯದಲ್ಲಿ ರೈತನ ಬೆಳೆಯನ್ನು ನೋಡಿದರೆ ಕಣ್ಣೀರು ಬರುತ್ತದೆ. ಸರ್ಕಾರ ಇದನ್ನೆಲ್ಲಾ ನೋಡದೆ ಕಣ್ಮುಚ್ಚಿ ಕುಳಿತಿದೆ. ಆದ್ದರಿಂದ ನಾವು ಬೀದಿಗಿಳಿದು ಹೋರಾಟ ಮಾಡವುದು ಅನಿವಾರ್ಯ. ಮುಖ್ಯಮಂತ್ರಿ ಮತ್ತು ಉಪ ಮುಖ್ಯಮಂತ್ರಿ ಬರ ಅದ್ಯಯನದ ಬಗ್ಗೆ ಹಗುರವಾಗಿ ಮಾತಾಡಿದ್ದಾರೆ. ವಾಸ್ತವವನ್ನು ತಿಳಿದುಕೊಳ್ಳುವ ಬದಲು ಹಗುರವಾಗಿ ಮಾತನಾಡಿದ್ದಾರೆ. ಎಲ್ಲದಕ್ಕೂ ಕೇಂದ್ರದ ಕಡೆ ಬೊಟ್ಟು ಮಾಡಿ ತೋರಿಸಿ ಜನರ ಜೊತೆ ಚೆಲ್ಲಾಟವಾಡುತ್ತಿದ್ದಾರೆ. ಜನರಿಗೆ ಇಲ್ಲಸಲ್ಲದ ಭರವಸೆಗಳನ್ನು ನೀಡಿ ಸರ್ಕಾರದ ಬೊಕ್ಕಸವನ್ನು ಖಾಲಿ ಮಾಡಿ ಸರ್ಕಾರ ದಿವಾಳಿಯಾಗಿ ಎಲ್ಲಾರ ಮೇಲೆ ಪ್ರಹಾರ ಮಾಡುತ್ತಿದ್ದಾರೆ. ಒಂದಾದಮೇಲೊಂದರಂತೆ ಬೆಲೆಗಳನ್ನು ಹೆಚ್ಚಿಸುತ್ತಿದ್ದಾರೆ. ರೈತರು ಟ್ರಾನ್ಸ್ಫಾರ್ಮರ್ಗಳಿಗೂ ಹಣ ಕಟ್ಟಬೇಕಾಗಿದೆ ಎಂದರು.

ಈ ಸಂದರ್ಭದಲ್ಲಿ ಶಾಸಕ ಸುರೇಶ್ ಗೌಡ, ವಿಧಾನಪರಿಷತ್ ಸದಸ್ಯ ಚಿದಾನಂದ್ ಎಂ.ಗೌಡ, ಮಾಜಿ ಶಾಸಕ ಡಾ.ಸಿ.ಎಂ.ರಾಜೇಶ್ ಗೌಡ, ಮಧುಗಿರಿ ವಿಭಾಗದ ಬಿಜೆಪಿ ಅಧ್ಯಕ್ಷ ಬಿ.ಕೆ.ಮಂಜುನಾಥ್, ಗ್ರಾಮಾಂತರ ಬಿಜೆಪಿ ಅಧ್ಯಕ್ಷ ರಂಗಸ್ವಾಮಿ, ನಗರ ಅಧ್ಯಕ್ಷ ನಟರಾಜು, ಮಾಜಿ ಅಧ್ಯಕ್ಷ ವಿಜಯರಾಜ್, ಕೃಷ್ಣಮೂರ್ತಿ, ನಗರಸಭೆ ಸದಸ್ಯೆ ಉಮಾ ವಿಜಯರಾಜ್, ಸ್ವಾತಿ ಮಂಜೇಶ್, ಮಧು ಯಾದವ್, ಬಸವರಾಜು, ಕರಿಯಣ್ಣ, ಧನುಷ್, ರಂಗರಾಜು, ನರಸಿಂಹರಾಜು ಸೇರಿದಂತೆ ಹಲವರು ಹಾಜರಿದ್ದರು.

Latest Videos
Follow Us:
Download App:
  • android
  • ios