ಮಂಗಳೂರು: ಸುಳ್ಯದಲ್ಲೂ ಕಂಪಿಸಿದ ಭೂಮಿ, ಗೋಡೆಗಳಲ್ಲಿ ಬಿರುಕು..!
* ಹಲವು ಗ್ರಾಮಗಳಲ್ಲಿ ಲಘು ಭೂಕಂಪನ
* ಬೆಳಗ್ಗೆ 9.10 ರಿಂದ 9.15 ರ ಆಸುಪಾಸಿನಲ್ಲಿ ಕಂಪಿಸಿದ ಭೂಮಿ
* ಸುಮಾರು 4 ರಿಂದ 5 ಸೆಕೆಂಡ್ ಭೂಮಿ ಕಂಪಿಸಿದ ಅನುಭವದ
ಮಂಗಳೂರು(ಜೂ.25): ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಹಲವು ಗ್ರಾಮಗಳಲ್ಲಿ ಭೂಕಂಪನದ ಅನುಭವವಾಗಿದ್ದು, ಹಲವು ಗ್ರಾಮಗಳಲ್ಲಿ ಲಘು ಭೂಕಂಪನದ ಬಗ್ಗೆ ಗ್ರಾಮಸ್ಥರು ಮಾಹಿತಿ ನೀಡಿದ್ದಾರೆ.
ಸುಳ್ಯ ತಾಲೂಕಿನ ಮರ್ಕಂಜ, ಕೊಡಪ್ಪಾಲ, ಗೂನಡ್ಕ, ಅರಂತೋಡು ಗ್ರಾಮಗಳಲ್ಲಿ ಭೂಮಿ ಕಂಪಿಸಿದ ಅನುಭವವಾಗಿದೆ. ಇಂದು(ಶನಿವಾರ) ಬೆಳಗ್ಗೆ 9.10 ರಿಂದ 9.15 ರ ಆಸುಪಾಸಿನಲ್ಲಿ ಭೂಮಿ ಕಂಪಿಸಿದ ಅನುಭವವಾಗಿದ್ದು, ಗ್ರಾಮದ ಹಲವರಿಗೆ ಕಂಪನದ ಅನುಭವದ ಬಗ್ಗೆ ಮಾಹಿತಿ ನೀಡಿದ್ದಾರೆ.
ವಿಜಯಪುರದಲ್ಲಿ ಮತ್ತೆ ಭೂಕಂಪನ: ಬೆಚ್ಚಿಬಿದ್ದ ಜನತೆ
ಸುಮಾರು 4 ರಿಂದ 5 ಸೆಕೆಂಡ್ ಭೂಮಿ ಕಂಪಿಸಿದ ಅನುಭವದ ಬಗ್ಗೆ ಮಾಹಿತಿ ಸಿಕ್ಕಿದ್ದು, ಕೆಲ ಮನೆಗಳ ಗೋಡೆಗಳಲ್ಲಿ ಸಣ್ಣಗೆ ಬಿರುಕು ಕಾಣಿಸಿಕೊಂಡಿದೆ. ಬಹುತೇಕ ಮಡಿಕೇರಿ ಗಡಿ ಭಾಗದ ಗ್ರಾಮಗಳಲ್ಲಿ ಈ ಕಂಪನದ ಅನುಭವ ಆಗಿದೆ. ಆದರೆ ಈ ಬಗ್ಗೆ ಅಧಿಕಾರಿಗಳಾಗಲೀ ಜಿಲ್ಲಾಡಳಿತವಾಗಲೀ ಯಾವುದೇ ಅಧಿಕೃತ ಮಾಹಿತಿ ನೀಡಿಲ್ಲ. ಹಲವರು ತಮಗಾದ ಅನುಭದ ಬಗ್ಗೆ ಮಾಹಿತಿ ನೀಡಿದ್ದಾರೆ.
ನಿನ್ನೆ ರಾತ್ರಿ ವಿಜಯಪುರ ನಗರ ಸೇರಿದಂತೆ ಜಿಲ್ಲೆಯ ವಿವಿಧೆಡೆ ಭೂಕಂಪನವಾಗಿದೆ.