Asianet Suvarna News Asianet Suvarna News

Earthquake in Vijayapura: ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಸಭೆ

ಜಿಲ್ಲೆಯಲ್ಲಿ ಸರಣಿ ಭೂಕಂಪಗಳು ಜನರನ್ನ ಕಂಗೆಡಿಸಿವೆ. ಜನರು ಭಯಭೀತರಾಗಿದ್ದಾರೆ. ಜನರಲ್ಲಿನ ಆತಂಕ ಹೋಗಲಾಡಿಸಲು  ಜಿಲ್ಲಾಧಿಕಾರಿಗಳಾದ ಡಾ.ವಿಜಯಮಹಾಂತೇಶ ದಾನಮ್ಮನವರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ಸಭೆ ನಡೆಸಿ, ಭೂಕಂಪನಕ್ಕೆ ಸಂಬಂಧಿಸಿದಂತೆ ಚರ್ಚಿಸಿದರು.

Earthquake background Meeting with district level officials at Vijayapura
Author
Bangalore, First Published Aug 24, 2022, 8:01 PM IST

ವಿಜಯಪುರ (ಆಗಸ್ಟ್ 24): ಜಿಲ್ಲೆಯಲ್ಲಿ ಸರಣಿ ಭೂಕಂಪಗಳು ಜನರನ್ನ ಕಂಗೆಡಿಸಿವೆ. ಜನರು ಭಯಭೀತರಾಗಿದ್ದಾರೆ. ಜನರಲ್ಲಿನ ಆತಂಕ ಹೋಗಲಾಡಿಸಲು  ಜಿಲ್ಲಾಧಿಕಾರಿಗಳಾದ ಡಾ.ವಿಜಯಮಹಾಂತೇಶ ದಾನಮ್ಮನವರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ಸಭೆ ನಡೆಸಿ, ಭೂಕಂಪನಕ್ಕೆ ಸಂಬಂಧಿಸಿದಂತೆ ಚರ್ಚಿಸಿದರು.

ವಿಜಯಪುರದಲ್ಲಿ ಪದೇ ಪದೇ ಭೂಕಂಪ: 4 ಸೆಪ್ಟೆಂಬರ್ 2021ರಿಂದ ಈವರೆಗೆ 21ಬಾರಿ ಭೂಕಂಪನ

ಸಭೆಯಲ್ಲಿ ಮಾತನಾಡಿದ  ಜಿಲ್ಲಾಧಿಕಾರಿಗಳು, ಭೂಗರ್ಭದಲ್ಲಿ ಚಿಕ್ಕ ಪ್ರಮಾಣದಲ್ಲಿ ಆಗುವ ಭೂಕಂಪನಗಳು ಕೆಲವೊಮ್ಮೆ ಗೊತ್ತಾಗುವುದಿಲ್ಲ. ಕೆಲವೊಮ್ಮೆ ಭೂಕಂಪನದ ಬಗ್ಗೆ ಅನುಭವಕ್ಕೆ ಬಂದರೂ ಅದರಿಂದ ಜನತೆಗೆ ತೊಂದರೆಯೂ ಇರುವುದಿಲ್ಲ ಎಂಬುದು ತಜ್ಞರ ಅಭಿಪ್ರಾಯವಾಗಿದೆ. ಆದರೆ, ಭೂಕಂಪನದ ಬಗ್ಗೆ ವಿವಿಧ ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆಯಾಗಿ ಜನರು ಅನವಶ್ಯಕ ಭಯಪಡುವಂತಾಗಿದೆ. ಆದಾಗ್ಯೂ ಕಳೆದ ಒಂದೂವರೆ ವರ್ಷದಲ್ಲಿ ಜಿಲ್ಲೆಯಲ್ಲಿ ಆಗಾಗ ಅನುಭವಕ್ಕೆ ಬರುತ್ತಿರುವ ಭೂಕಂಪನದ ಬಗ್ಗೆ ಅಧ್ಯಯನ ನಡೆಸಬೇಕು. ಜಿಲ್ಲಾಡಳಿತಕ್ಕೆ ಅಗತ್ಯ ಮಾರ್ಗದರ್ಶನ ಮಾಡಬೇಕು ಎಂದು ಕೋರಿ ಈಗಾಗಲೇ ಜಿಲ್ಲಾಡಳಿತದಿಂದ ಸರ್ಕಾರಕ್ಕೆ ಪತ್ರ ಬರೆಯಲಾಗಿದೆ. ಅಧ್ಯಯನ ವರದಿ ಬರುವವರೆಗೆ ಮತ್ತು ತಜ್ಞರ ತಂಡ ಜಿಲ್ಲೆಗೆ ಆಗಮಿಸಿ ತರಬೇತಿ ಮತ್ತು ಮಾರ್ಗದರ್ಶನ ಮಾಡುವವರೆಗೆ ಸದಾಕಾಲ ಸನ್ನದ್ಧರಾಗಿರಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಸಾರ್ವಜನಿಕರಲ್ಲಿ ಮಹತ್ವದ ಮನವಿ:

ಭೂಗರ್ಭದಲ್ಲಿ ಸಣ್ಣ ಮಟ್ಟದಲ್ಲಿ ಭೂಕಂಪನವು ಆಗುವುದು ಸ್ವಾಭಾವಿಕವಾಗಿದೆ ಎಂಬುದು ತಜ್ಞರ ಅಭಿಪ್ರಾಯವಾಗಿದೆ. ಭೂಕಂಪನಕ್ಕೆ ಸಂಬಂಧಿಸಿದಂತೆ ಈ ಹಿಂದೆ ವಿಜಯಪುರಕ್ಕೆ ಭೇಟಿ ನೀಡಿದ ತಜ್ಞರನ್ನೊಳಗೊಂಡ ತಂಡದ ವರದಿಯ ಬಗ್ಗೆ ಅಧ್ಯಯನ ಮಾಡುತ್ತೇವೆ. ಭೂಕಂಪನದ ಬಗ್ಗೆ ಜಿಲ್ಲಾಡಳಿತ ಸಾಕಷ್ಟು ಮುನ್ನೆಚ್ಚರಿಕೆ ವಹಿಸಿದೆ. ಹೀಗಾಗಿ ಸಾರ್ವಜನಿಕರು ಭಯಪಡಬಾರದು ಎಂದು ಸಭೆಯ ಮೂಲಕ ಜಿಲ್ಲಾಧಿಕಾರಿಗಳು ಮನವಿ ಮಾಡಿದರು.

ಭಯ ದೂರ ಮಾಡಿ:

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಹೆಚ್.ಡಿ.ಆನಂದಕುಮಾರ ಅವರು ಮಾತನಾಡಿ, ಕೆಲ ಸಂದರ್ಭದಲ್ಲಿ ಸಾಮಾನ್ಯವಾಗಿ ಘಟಿಸುವ ಸಾಧಾರಣ ಪ್ರಮಾಣದ ಭೂಕಂಪನದಿಂದ ಯಾವುದೇ ರೀತಿಯ ತೊಂದರೆಯಾಗದು ಎಂಬುದರ ಬಗ್ಗೆ ಅಧಿಕಾರಿಗಳು ಜನತೆಗೆ ತಿಳಿಸಬೇಕು ಎಂದು ಸಲಹೆ ಮಾಡಿದರು.

ವಿಜಯಪುರ ಜಿಲ್ಲೆಯಲ್ಲಿ ಸತತ ಮೂರನೇ ದಿನವೂ ಭೂಕಂಪನ

ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಾಹುಲ್ ಶಿಂಧೆ, ಅಪರ ಜಿಲ್ಲಾಧಿಕಾರಿ ರಮೇಶ ಕಳಸದ, ಸಹಾಯಕ ಆಯುಕ್ತರಾದ ಕ್ಯಾಪ್ಟನ್ ಮಹೇಶ ಮಾಲಗಿತ್ತಿ, ಮಹಾನಗರ ಪಾಲಿಕೆಯ ಆಯುಕ್ತರಾದ ವಿಜಯಕುಮಾರ ಮೆಕ್ಕಳಕೆ, ನಗರಾಭಿವೃದ್ದಿ ಕೋಶದ ಯೋಜನಾ ನಿರ್ದೇಶಕರಾದ ರಾಜಶೇಖರ ಡಂಬಳ, ವಿಜಯಪುರ ತಹಸೀಲ್ದಾರ ಸಿದ್ಧರಾಯ ಬೋಸಗಿ, ಜಿಲ್ಲಾ ಮಟ್ಟದ ಅಧಿಕಾರಿಗಳಾದ ಡಾ.ರಾಜಕುಮಾರ ಯರಗಲ್, ಈರಪ್ಪ ಆಶಾಪುರ, ಯಲ್ಲಮ್ಮ, ಜಿಲ್ಲಾ ವಿಪತ್ತು ನಿರ್ವಹಣಾ ಘಟಕದ ಅಧಿಕಾರಿ ರಾಕೇಶ ಜೈನಾಪುರೆ ಹಾಗೂ ಇತರರು ಇದ್ದರು.

Follow Us:
Download App:
  • android
  • ios