Asianet Suvarna News Asianet Suvarna News

900 ಕೋಟಿ ಅಕ್ರಮ: ಬಿಬಿಎಂಪಿ ಅಧಿಕಾರಿಗಳಿಗೆ ಇಡಿ ತನಿಖೆ ಬಿಸಿ

ಶೇ.25ರಷ್ಟು ಕೊಳವೆಬಾವಿ ಕೊರೆಯಲಾಗಿದೆ ಹಾಗೂ ಶುದ್ಧ ಕುಡಿಯುವ ನೀರಿನ ಘಟಕ ಸ್ಥಾಪಿಸಲಾಗಿದೆ. ಇದರಲ್ಲಿ ಭಾರಿ ಪ್ರಮಾಣದ ಅವ್ಯವಹಾರವಾಗಿದ್ದು, ಈ ಬಗ್ಗೆ ತನಿಖೆ ನಡೆಸುವಂತೆ 2019ರ ಮೇ ತಿಂಗಳಲ್ಲಿ ಎಸಿಬಿಗೆ ದೂರು ನೀಡಿದ್ದ ಎನ್‌.ಆರ್‌.ರಮೇಶ್‌. 

ED Questioned the BBMP Officials on 900 Crore Scam in Bengaluru grg
Author
First Published Dec 28, 2022, 7:30 AM IST

ಬೆಂಗಳೂರು(ಡಿ.28):  ಶುದ್ಧ ಕುಡಿಯುವ ನೀರಿನ ಘಟಕ ನಿರ್ಮಾಣಕ್ಕೆ ಹಾಗೂ ಕೊಳವೆಬಾವಿ ಕೊರೆಯುವ ಸಂಬಂಧ 900 ಕೋಟಿಗೂ ಹೆಚ್ಚಿನ ಅವ್ಯವಹಾರವಾಗಿದೆ ಎಂಬ ದೂರಿನ ಹಿನ್ನೆಲೆಯಲ್ಲಿ ಜಾರಿ ನಿರ್ದೇಶನಾಲಯವು ಬಿಬಿಎಂಪಿ ಅಧಿಕಾರಿಗಳನ್ನು ವಿಚಾರಣೆಗೆ ಒಳಪಡಿಸಿದೆ.

2016-17 ಮತ್ತು 2017-18ನೇ ಸಾಲಿನಲ್ಲಿ ರಾಜರಾಜೇಶ್ವರಿ ನಗರ, ಯಲಹಂಕ, ಮಹದೇವಪುರ, ದಾಸರಹಳ್ಳಿ ಮತ್ತು ಮಹದೇವಪುರ ವಲಯ ವ್ಯಾಪ್ತಿಯಲ್ಲಿ 9,588 ಕೊಳವೆ ಬಾವಿಗಳನ್ನು ಕೊರೆಸಲಾಗಿದೆ ಹಾಗೂ 697 ಶುದ್ಧ ಕುಡಿಯುವ ನೀರಿನ ಘಟಕ ಸ್ಥಾಪಿಸಿರುವ ಬಗ್ಗೆ ಬಿಬಿಎಂಪಿ ದಾಖಲೆಯಲ್ಲಿ ಉಲ್ಲೇಖಿಸಲಾಗಿದೆ. ಆದರೆ, ಕೇವಲ ಶೇ.25ರಷ್ಟು ಕೊಳವೆಬಾವಿ ಕೊರೆಯಲಾಗಿದೆ ಹಾಗೂ ಶುದ್ಧ ಕುಡಿಯುವ ನೀರಿನ ಘಟಕ ಸ್ಥಾಪಿಸಲಾಗಿದೆ. ಇದರಲ್ಲಿ ಭಾರಿ ಪ್ರಮಾಣದ ಅವ್ಯವಹಾರವಾಗಿದ್ದು, ಈ ಬಗ್ಗೆ ತನಿಖೆ ನಡೆಸುವಂತೆ ಬಿಬಿಎಂಪಿ ಆಡಳಿತದ ಪಕ್ಷದ ಮಾಜಿ ನಾಯಕ ಎನ್‌.ಆರ್‌.ರಮೇಶ್‌, 2019ರ ಮೇ ತಿಂಗಳಲ್ಲಿ ಎಸಿಬಿಗೆ ದೂರು ನೀಡಿದ್ದರು.

ಕಾರ್ಡ್ ರಸ್ತೆ ಫ್ಲೈ ಓವರ್ ಜನವರಿಗೆ ಲೋಕಾರ್ಪಣೆ, ಸ್ವಕ್ಷೇತ್ರದಲ್ಲಿ ಸೋಮಣ್ಣ ಸುತ್ತಾಟ

ಈ ದೂರಿನ ಆಧಾರದಲ್ಲಿ ವಿಚಾರಣೆ ನಡೆಸಿದ್ದ ಎಸಿಬಿ, ಅಕ್ರಮದ ಆರೋಪದ ಮೊತ್ತ ದೊಡ್ಡದಾದ ಕಾರಣ ಪ್ರಕರಣದ ಕುರಿತಂತೆ ಜಾರಿ ನಿರ್ದೇಶನಾಲಯಕ್ಕೆ ಮಾಹಿತಿ ನೀಡಿತ್ತು. ಆ ಹಿನ್ನೆಲೆಯಲ್ಲಿ ಇದೀಗ ಜಾರಿ ನಿರ್ದೇಶನಾಲಯ 2016-17 ಮತ್ತು 2017-18ನೇ ಸಾಲಿನಲ್ಲಿನ ವಲಯ ಜಂಟಿ ಆಯುಕ್ತರು, ಮುಖ್ಯ ಎಂಜಿನಿಯರ್‌ಗಳು, ಎಇ, ಎಇಇ, ಕೆಲ ಕೆಆರ್‌ಐಡಿಎಲ್‌ ಅಧಿಕಾರಿಗಳು, ಬಿಬಿಎಂಪಿ ಕೇಂದ್ರ ಕಚೇರಿಯ ಹಿರಿಯ ಅಧಿಕಾರಿಗಳನ್ನು ವಿಚಾರಣೆಗೆ ಒಳಪಡಿಸಿದೆ. ಅಲ್ಲದೆ ದೂರುದಾರ ಎನ್‌.ಆರ್‌.ರಮೇಶ್‌ ಅವರನ್ನೂ ವಿಚಾರಣೆ ನಡೆಸಿದೆ. ಜತೆಗೆ ಬಿಬಿಎಂಪಿ ಲೆಕ್ಕದಲ್ಲಿ ತೋರಿಸಲಾಗಿರುವಂತೆ ಕೊಳವೆಬಾವಿ ಕೊರೆಯಲಾದ ಸ್ಥಳಗಳಿಗೂ ಭೇಟಿ ನೀಡಲು ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಮುಂದಾಗಿದ್ದಾರೆ.

Follow Us:
Download App:
  • android
  • ios