Asianet Suvarna News Asianet Suvarna News

ಶಕ್ತಿ ಯೋಜನೆಯ ಎಫೆಕ್ಟ್: ಬಸ್ ನಿಲ್ದಾಣ ಬಟ್ಟೆ ಒಣಗಿಸುವ ತಾಣವನ್ನಾಗಿ ಪರಿವರ್ತನೆ

ಜಿಲ್ಲೆಯ ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರದ ಸರ್ಕಾರಿ ಬಸ್ ನಿಲ್ದಾಣವನ್ನ ಮಹಿಳೆಯರು ಬಟ್ಟೆ ಒಣಗಿಸುವ ತಾಣವನ್ನಾಗಿ ಪರಿವರ್ತನೆ ಮಾಡಿಕೊಂಡಿದ್ದಾರೆ. ಬಸ್ ನಿಲ್ದಾಣದಲ್ಲೇ  ಬಟ್ಟೆ ಒಣಗಿಸಿಕೊಂಡು ಬಸ್ ಗಾಗಿ ಕಾಯ್ತಾ ಕೆಲ ಕಾಲ ಆರಾಮಾಗಿದ್ದಾರೆ. 

Effect of Shakti Yojana Conversion of bus stand into clothes drying area at chikkamagaluru gvd
Author
First Published Oct 14, 2023, 12:30 AM IST

ವರದಿ: ಆಲ್ದೂರು ಕಿರಣ್, ಏಷ್ಯಾನೆಟ್ ಸುವರ್ಣ ನ್ಯೂಸ್, ಚಿಕ್ಕಮಗಳೂರು 

ಚಿಕ್ಕಮಗಳೂರು (ಅ.14): ಜಿಲ್ಲೆಯ ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರದ ಸರ್ಕಾರಿ ಬಸ್ ನಿಲ್ದಾಣವನ್ನ ಮಹಿಳೆಯರು ಬಟ್ಟೆ ಒಣಗಿಸುವ ತಾಣವನ್ನಾಗಿ ಪರಿವರ್ತನೆ ಮಾಡಿಕೊಂಡಿದ್ದಾರೆ. ಬಸ್ ನಿಲ್ದಾಣದಲ್ಲೇ  ಬಟ್ಟೆ ಒಣಗಿಸಿಕೊಂಡು ಬಸ್ ಗಾಗಿ ಕಾಯ್ತಾ ಕೆಲ ಕಾಲ ಆರಾಮಾಗಿದ್ದಾರೆ. ಶಕ್ತಿ ಯೋಜನೆಯಡಿ ಸರ್ಕಾರ ಫ್ರೀ ಬಸ್ ಬಿಟ್ಟ ಮೇಲೆ ಧಾರ್ಮಿಕ ಕ್ಷೇತ್ರಗಳಿಗೆ ಹೋಗುವ ಮಹಿಳೆಯರ ಸಂಖ್ಯೆ ಹೆಚ್ಚಾಗಿದೆ. ಹೀಗೆ ಕಳಸ ತಾಲೂಕಿನ ಹೊರನಾಡು ಅನ್ನಪೂರ್ಣೇಶ್ವರಿ ದರ್ಶನಕ್ಕೆ ಬರುವ ಮಹಿಳೆಯರು ಕೊಟ್ಟಿಗೆಹಾರದಲ್ಲಿ ಬಸ್ ಕಾಯುತ್ತಾ ಅಲ್ಲೇ ಬಟ್ಟೆ ತೊಳೆದುಕೊಂಡು ಬಸ್ ನಿಲ್ದಾಣದಲ್ಲೇ ಒಣಗಿಸಿಕೊಂಡು ಕಾಲ ಕಳೆಯುತ್ತಿದ್ದಾರೆ. 

ಹೊರನಾಡಿಗೆ ಸರ್ಕಾರಿ ಬಸ್ ಗಳ ಸಂಚಾರ ಕಡಿಮೆ: ರಾಜ್ಯದ ಯಾವುದೇ ಭಾಗದಿಂದ ಸರ್ಕಾರ ಬಸ್ಸಿನಲ್ಲಿ ಬಂದರೂ ಕೊಟ್ಟಿಗೆಹಾರದಲ್ಲಿ ಇಳಿಯಲೇಬೇಕು. ಫ್ರೀ ಬಸ್ಸಿನಲ್ಲಿ ಹೊರನಾಡಿಗೆ ಹೋಗಬೇಕಂದ್ರೆ ಕೊಟ್ಟಿಗೆಹಾರಕ್ಕೆ ಬಂದೇ ಹೋಗಬೇಕು. ಆದ್ರೆ, ಕೊಟ್ಟಿಗೆಹಾರದಿಂದ ಹೊರನಾಡಿಗೆ ಸರ್ಕಾರಿ ಬಸ್‍ಗಳ ಸಂಖ್ಯೆ ತೀರಾ ಕಡಿಮೆ. ದಿನಕ್ಕೆ ಹೆಚ್ಚೆಂದ್ರೆ ನಾಲ್ಕೈದು ಬಸ್ ಅಷ್ಟೆ ಸಂಚರಿಸೋದು. ಹಾಗಾಗಿ, ರಾಜ್ಯದ ನಾನಾ ಭಾಗಗಳಿಂದ ಬರುವ ಮಹಿಳೆಯರು ಫ್ರೀ ಬಸ್ ಕಾಯುತ್ತಾ ಕೊಟ್ಟಿಗೆಹಾರದ ಬಸ್ ನಿಲ್ದಾಣದಲ್ಲಿ ಜಮಾಯಿಸಿರುತ್ತಾರೆ. 

ಹಿಂದೂಗಳ ಹತ್ಯೆ ಕಂಡು ಹೊಟ್ಟೆ ಉರಿಯುತ್ತಿದೆ: ಕೆ.ಎಸ್‌.ಈಶ್ವರಪ್ಪ

ಹೀಗೆ ಬಂದವರು, ಕೊಟ್ಟಿಗೆಹಾರದಲ್ಲಿ ನೀರಿನ ಸೌಲಭ್ಯ ಚೆನ್ನಾಗಿರೋದ್ರಿಂದ ಅಲ್ಲೇ ಬಟ್ಟೆ ತೊಳೆದು ಅಲ್ಲೇ ಒಣಹಾಕುತ್ತಿದ್ದಾರೆ. ಬಸ್ ನಿಲ್ಲು ಜಾಗ ನೆಲದ ಮೇಲೂ ಬಟ್ಟೆ ಹಾಕುತ್ತಿದ್ದಾರೆ. ಬಸ್ ನಿಲ್ದಾಣದ ಕಾಂಪೌಂಡ್ ಮೇಲೂ ಬಟ್ಟೆ ಹಾಕುತ್ತಿದ್ದಾರೆ. ಇಡೀ ದಿನ ಬಸ್ ಕಾಯುವ ಮಹಿಳೆಯರು ಕೊಟ್ಟಿಗೆಹಾರದ ಸರ್ಕಾರಿ ಬಸ್ ನಿಲ್ದಾಣವನ್ನೇ ಬಚ್ಚಲು ಮನೆ ಮಾಡ್ಕೊಂಡು ಬಟ್ಟೆ ತೊಳೆದುಕೊಂಡು, ಒಣಗಿಸಿಕೊಂಡು ಬಸ್ ಬಂದ ಕೂಡಲೇ ಅವಸರವಸವಾಗಿ ಬಟ್ಟೆಯನ್ನ ಬ್ಯಾಗಿಗೆ ತುಂಬಿಕೊಂಡು ಹೋಗುತ್ತಿದ್ದಾರೆ.

ರಾಗಿಗುಡ್ಡ ಗಲಾಟೆ ಹಿಂದೆ ಉಗ್ರವಾದ ಕರಿನೆರಳು: ಸಂಸದ ರಾಘವೇಂದ್ರ ಆರೋಪ

ಮಹಿಳಾ ಪ್ರಯಾಣಿಕರ ವರ್ತನೆ ಕಿಡಿ: ಪ್ರಯಾಣಿಕರ ಈ ವರ್ತನೆಗೆ ಸ್ಥಳಿಯರು ಅಸಮಾಧಾನ ಹೊರಹಾಕಿದ್ದಾರೆ. ಕೆ.ಎಸ್.ಆರ್.ಟಿ.ಸಿ. ಸಿಬ್ಬಂದಿಗಳು ಕೂಡ ಮಹಿಳೆಯರಿಗೆ ತಿಳಿ ಹೇಳುತ್ತಿದ್ದಾರೆ. ಆದರೆ, ಉತ್ತರ ಕರ್ನಾಟಕದ ಮಹಿಳೆಯರು ಅಧಿಕಾರಿಗಳ ಅಥವ ಸ್ಥಳಿಯರ ಮಾತನ್ನ ಕೇಳುತ್ತಿಲ್ಲ. ಒಬ್ಬರಾದ ಮೇಲೊಬ್ಬರು ಬಟ್ಟೆ ತೊಳೆದು ಕಣ್ಣಿಗೆ ಕಂಡ ಜಾಗದಲ್ಲೆಲ್ಲಾ ಒಣ ಹಾಕುತ್ತಿದ್ದಾರೆ.ಈ ಬಗ್ಗೆ ಸ್ಥಳೀಯರಾದ ಸಂತೋಷ್ ತೀವ್ರ ಅಸಮಾಧನ ಹೊರಹಾಕಿದ್ದಾರೆ.

Follow Us:
Download App:
  • android
  • ios