ಶಾಲಾ ಮಕ್ಕಳಲ್ಲಿ ಪೌಷ್ಟಿಕತೆ ಹೆಚ್ಚಿಸುವ ಸಲುವಾಗಿ 1ರಿಂದ 10ನೇ ತರಗತಿಯವರಿಗೆ ಸರ್ಕಾರಿ ಶಾಲಾ ಮಕ್ಕಳಿಗೆ ವಾರದಲ್ಲಿ ಎರಡು ದಿನ ಮೊಟ್ಟೆ, ಮೊಟ್ಟೆ ಸೇವಿಸದವರಿಗೆ ಬಾಳೆಹಣ್ಣು ಅಥವಾ ಶೇಂಗಾ ಚಿಕ್ಕಿ ನೀಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗಿದ್ದು, ಅದರಂತೆ ಶಿವಮೊಗ್ಗದಲ್ಲೂ ಶುಕ್ರವಾರ ಚಾಲನೆ ನೀಡಲಾಗಿದೆ. 

ಶಿವಮೊಗ್ಗ (ಆ.19): ಶಾಲಾ ಮಕ್ಕಳಲ್ಲಿ ಪೌಷ್ಟಿಕತೆ ಹೆಚ್ಚಿಸುವ ಸಲುವಾಗಿ 1ರಿಂದ 10ನೇ ತರಗತಿಯವರಿಗೆ ಸರ್ಕಾರಿ ಶಾಲಾ ಮಕ್ಕಳಿಗೆ ವಾರದಲ್ಲಿ ಎರಡು ದಿನ ಮೊಟ್ಟೆ, ಮೊಟ್ಟೆ ಸೇವಿಸದವರಿಗೆ ಬಾಳೆಹಣ್ಣು ಅಥವಾ ಶೇಂಗಾ ಚಿಕ್ಕಿ ನೀಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗಿದ್ದು, ಅದರಂತೆ ಶಿವಮೊಗ್ಗದಲ್ಲೂ ಶುಕ್ರವಾರ ಚಾಲನೆ ನೀಡಲಾಗಿದೆ. 

ಜಿಲ್ಲಾ ಪಂಚಾಯಿತಿ ಸಿಇಒ ಸ್ನೇಹಲ್‌ ಸುಧಾಕರ ಲೋಖಂಡೆ ಅವರು ತಾಲೂಕಿನ ಪಿಳ್ಳಂಗಿರಿಯ ಸರ್ಕಾರಿ ಪ್ರೌಢಶಾಲೆಯಲ್ಲಿ ಈ ಯೋಜನೆಗೆ ಚಾಲನೆ ನೀಡಿ, ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟದೊಂದಿಗೆ ಮೊಟ್ಟೆ, ಬಾಳೆಹಣ್ಣು, ಶೇಂಗಾ ಚಿಕ್ಕಿಯನ್ನು ವಿತರಿಸಿ ಮಾತನಾಡಿ, ಇಷ್ಟು ದಿನ 1ರಿಂದ 8ನೇ ತರಗತಿವರೆಗೆ ವಾರದಲ್ಲಿ 1 ದಿನ ಮಾತ್ರ ವಿತರಣೆ ಮಾಡಲಾಗುತ್ತಿತ್ತು. ಈಗ ವಾರದಲ್ಲಿ 2 ದಿನ ಮೊಟ್ಟೆವಿತರಣೆ ಮಾಡಲಾಗುತ್ತಿದೆ. ಇದು 9 ಮತ್ತು 10ನೇ ತರಗತಿ ವಿದ್ಯಾರ್ಥಿಗಳೂ ವಿಸ್ತರಿಸಲಾಗಿದೆ. ಮೊಟ್ಟೆತಿನ್ನದವರಿಗೆ ಬಾಳೆಹಣ್ಣು ಅಥವಾ ಶೇಂಗಾ ಚಿಕ್ಕಿ ನೀಡಲಾಗುವುದು ಎಂದು ತಿಳಿಸಿದರು.

3 ತಿಂಗಳಲ್ಲೇ ಸಿದ್ದು ಸರ್ಕಾರದ ವರ್ಚಸ್ಸು ಕಡಿಮೆ: ಶಾಸಕ ವಿಜಯೇಂದ್ರ ಟೀಕೆ

9 ಮತ್ತು 10ನೇ ತರಗತಿ ಮಕ್ಕಳಿಗೂ ಕೂಡ ಪೌಷ್ಟಿಕಾಂಶವುಳ್ಳ ಪೂರಕ ಆಹಾರವನ್ನು ನೀಡಬೇಕೆಂದು ನಿರ್ಧರಿಸಿ ಸರ್ಕಾರ ಪ್ರಸಕ್ತ ಸಾಲಿನ ಇಂದಿನಿಂದ ಈ ಮಕ್ಕಳಿಗೂ ಯೋಜನೆಯನ್ನು ವಿಸ್ತರಿಸಿದೆ. ಮಕ್ಕಳಿಗೆ ಅದರಲ್ಲೂ ವಿಶೇಷವಾಗಿ ಹೆಣ್ಣುಮಕ್ಕಳಿಗೆ ಪೌಷ್ಟಿಕಾಂಶ ಆಹಾರ ಅಗತ್ಯವಾಗಿದೆ. ರೋಗ ನಿರೋಧಕ ಶಕ್ತಿಯನ್ನು ವೃದ್ಧಿಸುವಲ್ಲಿ ಇದು ಸಹಕಾರಿಯಾಗಿದೆ. ದೈಹಿಕ ಮತ್ತು ಮಾನಸಿಕವಾಗಿ ಸದೃಢರಾಗಲು ಇದು ಸಹಕರಿಸುತ್ತದೆ. ವಿದ್ಯಾರ್ಥಿಗಳ ಇದ​ರ ಸದುಪಯೋಗ ಪಡೆದು ಉತ್ತಮ ವಿದ್ಯಾಭ್ಯಾಸ ಪಡೆದು ಉತ್ತಮ ನಾಗರಿಕರಾಗಬೇಕು ಎಂದು ಕರೆ ನೀಡಿದರು.

ಬಿಜೆಪಿ ಬಿಟ್ಟು ಜೆಡಿ​ಎಸ್‌ ಸೇರಿದ್ದ ಆಯನೂರು ಮಂಜುನಾಥ್‌ ಈಗ ಕಾಂಗ್ರೆಸ್‌ಗೆ?

ಡಿಡಿಪಿಐ ಸಿ.ಆರ್‌. ಪರಮೇಶ್ವರಪ್ಪ ಮಾತನಾಡಿ, ಜಿಲ್ಲೆಯಲ್ಲಿ ಒಟ್ಟು 15,9507 ವಿದ್ಯಾರ್ಥಿಗಳಿದ್ದು, ವಾರ್ಷಿಕವಾಗಿ . 7.65 ಕೋಟಿ ಅನುನಾದ ಈ ಯೋಜನೆಯಡಿ ನಿಗದಿಯಾಗಿದೆ. ಶುಕ್ರವಾರ ಪಿಳ್ಳಂಗಿರಿ ಪ್ರೌಢಶಾಲೆಯಲ್ಲಿ ಹಾಜರಿದ್ದ 254 ಮಕ್ಕಳ ಪೈಕಿ 224 ಮಕ್ಕಳು ಮೊಟ್ಟೆ, 29 ಮಕ್ಕಳು ಶೇಂಗಾ ಚಿಕ್ಕಿ ಮತ್ತು 1 ಮಗುವಿಗೆ ಬಾಳೆಹಣ್ಣನ್ನು ನೀಡಲಾಗಿದೆ ಎಂದು ತಿಳಿಸಿದರು. ಕಾರ್ಯಕ್ರಮದಲ್ಲಿ ಬಿಇಒ ನಾಗರಾಜ್‌, ಅಕ್ಷರ ದಾಸೋಹ ಯೋಜನೆ ಸಹಾಯಕ ನಿರ್ದೇಶಕ ದಾದಾಪೀರ್‌, ಪ್ರಾಥಮಿಕ ಮತ್ತು ಪ್ರೌಢಶಾಲಾ ಎಸ್‌ಡಿಎಂಸಿ ಅಧ್ಯಕ್ಷರು, ಶಾಲಾ ಮುಖ್ಯೋಪಾಧ್ಯಾಯಿನಿ ವಿಶಾಲಾಕ್ಷಿ, ಸಹಶಿಕ್ಷಕರು, ಶಿಕ್ಷಣ ಸಂಯೋಜನಾಧಿಕಾರಿಗಳು, ಸಿಬ್ಬಂದಿ, ವಿದ್ಯಾರ್ಥಿಗಳು ಹಾಜರಿದ್ದರು.