Asianet Suvarna News Asianet Suvarna News

ಪ್ರತಿ ವರ್ಷ 10 ಸಾವಿರ ಉದ್ಯೋಗಾಕಾಂಕ್ಷಿಗಳಿಗೆ ಉದ್ಯೋಗ

ಶಿರಾದಲ್ಲಿ ಇಂದು ನಡೆಯುವ ಉದ್ಯೋಗಮೇಳದಲ್ಲಿ ಸುಮಾರು 8 ರಿಂದ 10 ಸಾವಿರ ಉದ್ಯೋಗಾಕಾಂಕ್ಷಿಗಳಿಗೆ ಉದ್ಯೋಗ ದೊರೆತರೆ ನಮ್ಮ ಶ್ರಮ ಸಾರ್ಥಕವಾಗಲಿದೆ. ಈ ಉದ್ಯೋಗಮೇಳವನ್ನು ಪ್ರತಿ ವರ್ಷವೂ ನಡೆಸುವ ಕೆಲಸ ಮಾಡುತ್ತೇನೆ ಎಂದು ರಾಜ್ಯ ಸರಕಾರದ ದೆಹಲಿ ವಿಶೇಷ ಪ್ರತಿನಿಧಿಗಳು ಹಾಗೂ ಶಾಸಕರಾದ ಟಿ.ಬಿ.ಜಯಚಂದ್ರ ಹೇಳಿದರು.

Employment for 10 thousand job seekers every year snr
Author
First Published Sep 13, 2023, 9:26 AM IST

  ಶಿರಾ :  ಶಿರಾದಲ್ಲಿ ಇಂದು ನಡೆಯುವ ಉದ್ಯೋಗಮೇಳದಲ್ಲಿ ಸುಮಾರು 8 ರಿಂದ 10 ಸಾವಿರ ಉದ್ಯೋಗಾಕಾಂಕ್ಷಿಗಳಿಗೆ ಉದ್ಯೋಗ ದೊರೆತರೆ ನಮ್ಮ ಶ್ರಮ ಸಾರ್ಥಕವಾಗಲಿದೆ. ಈ ಉದ್ಯೋಗಮೇಳವನ್ನು ಪ್ರತಿ ವರ್ಷವೂ ನಡೆಸುವ ಕೆಲಸ ಮಾಡುತ್ತೇನೆ ಎಂದು ರಾಜ್ಯ ಸರಕಾರದ ದೆಹಲಿ ವಿಶೇಷ ಪ್ರತಿನಿಧಿಗಳು ಹಾಗೂ ಶಾಸಕರಾದ ಟಿ.ಬಿ.ಜಯಚಂದ್ರ ಹೇಳಿದರು.

ಸೋಮವಾರ ನಗರದ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಏರ್ಪಡಿಸಿದ್ದ ಬೃಹತ್ ಉದ್ಯೋಗ ಮೇಳವನ್ನು ಉದ್ಘಾಟಿಸಿ ಮಾತನಾಡಿದ ಅವರು, ಇಂದು ನಡೆಯುವ ಉದ್ಯೋಗಮೇಳಕ್ಕೆ ಸುಮಾರು 80ಕ್ಕೂ ಹೆಚ್ಚು ಕಂಪನಿಗಳು ಆಗಮಿಸಿದ್ದು, ಸುಮಾರು 11 ಸಾವಿರ ಉದ್ಯೋಗಾಕಾಂಕ್ಷಿಗಳು ಉದ್ಯೋಗಕ್ಕಾಗಿ ನೊಂದಾಯಿಸಿದ್ದಾರೆ. ಉದ್ಯೋಗಾಕಾಂಕ್ಷಿಗಳು ಕಂಪನಿಯವರು ನಡೆಸುವ ಸಂದರ್ಶನವನ್ನು ಧೈರ್ಯವಾಗಿ ಎದುರಿಸಿ ಉದ್ಯೋಗ ಪಡೆದುಕೊಳ್ಳಿ. ಒಂದು ಕಂಪನಿಯಲ್ಲಿ ಆಯ್ಕೆಯಾಗದಿದ್ದರೆ ಮತ್ತೊಂದು ಕಂಪನಿಗೆ ಪ್ರಯತ್ನಿಸಿ ಎಂದರು.

ಕೆಪಿಸಿಸಿ ಕಾರ್ಯಾಧ್ಯಕ್ಷ ಹಾಗೂ ಮಾಜಿ ಸಂಸದ ಬಿ.ಎನ್.ಚಂದ್ರಪ್ಪ ಅವರು ಮಾತನಾಡಿ, ರಾಜ್ಯ ಸರಕಾರದ ದೆಹಲಿ ವಿಶೇಷ ಪ್ರತಿನಿಧಿಗಳಾ ಟಿ.ಬಿ.ಜಯಚಂದ್ರ ಅವರು ರಾಜ್ಯದಲ್ಲಿಯೇ ಹೆಚ್ಚು ಕ್ರಿಯಾಶೀಲವಾಗಿ ಕೆಲಸ ಮಾಡುವ ರಾಜಕಾರಣಿಯಾಗಿದ್ದಾರೆ. ಹಿರಿಯ ವಿಧಾನಸಭಾ ಸದಸ್ಯರೂ ಆಗಿರುವ ಅವರು ತಮ್ಮ ಈ ವಯಸ್ಸಿನಲ್ಲೂ ಯುವಕರಂತೆ ಕಾರ್ಯ ಮಾಡುತ್ತಿದ್ದು, ಎಲ್ಲರಿಗೂ ಸ್ಫೂರ್ತಿಯಾಗಿದ್ದಾರೆ. ಶಿರಾದಂತಹ ಬರದ ನಾಡಿನಲ್ಲಿ ಈಗಾಗಲೇ ನೀರಾವರಿ ಕಾರ್ಯ ಮಾಡಿ ಅಂತರ್ಜಲ ಹೆಚ್ಚಳಕ್ಕೆ ಕಾರಣರಾಗಿರುವ ಟಿ.ಬಿ.ಜಯಚಂದ್ರ ಅವರು ನಿರುದ್ಯೋಗ ನಿವಾರಣೆಗೆ ಉದ್ಯೋಗ ಮೇಳ ಮಾಡುವ ಮೂಲಕ ಸಾವಿರಾರು ಮಂದಿಗೆ ಉದ್ಯೋಗ ದೊರಕಿಸುವ ಕಾರ್ಯ ಮಾಡುತ್ತಿರುವುದು ಶ್ಲಾಘನೀಯ ಕಾರ್ಯ. ನಿರುದ್ಯೋಗಿಗಳು ಈ ಉದ್ಯೋಗಮೇಳವನ್ನು ಸದ್ಬಳಕೆ ಮಾಡಿಕೊಂಡು ಉದ್ಯೋಗ ಪಡೆದುಕೊಳ್ಳಿ ಎಂದರು.

ಅಪರ ಜಿಲ್ಲಾಧಿಕಾರಿ ಶಿವಾನಂದ ಕರಾಳೆ ಮಾತನಾಡಿ ಉದ್ಯೋಗಮೇಳದಲ್ಲಿ ಹಲವಾರು ಕಂಪನಿಗಳು ಪಾಲ್ಗೊಂಡಿವೆ. ಯುವಕ ಯುವತಿಯರು ತಮ್ಮ ವಿದ್ಯಾಭ್ಯಾಸದ ಜೊತೆಗೆ ಕೌಶಲ್ಯವನ್ನು ಪಡೆದುಕೊಂಡರೆ. ಉದ್ಯೋಗ ಪಡೆಯಲು ಸಹಕಾರಿಯಾಗಲಿದೆ. ಈ ನಿಟ್ಟಿನಲ್ಲಿ ಸರಕಾರವು ಕೌಶಲ್ಯಾಭಿವೃದ್ಧಿ ನಿಗಮವನ್ನು ಸ್ಥಾಪಿಸಿ ಹಲವು ರೀತಿಯಲ್ಲಿ ತರಬೇತಿ ನೀಡುತ್ತಿದ್ದೆ. ಇದರ ಸದುಪಯೋಗಪಡೆದುಕೊಳ್ಳಬೇಕು. ಹಾಗೂ ಇಂದು ನಡೆಯುತ್ತಿರುವ ಉದ್ಯೋಗಮೇಳದಲ್ಲಿ ಭಾಗವಹಿಸಿರುವ ಉದ್ಯೋಗಾಕಾಂಕ್ಷಿಗಳು ಯಶಸ್ವಿಯಾಗಿ ಸಂದರ್ಶನ ಎದುರಿಸಿ ಉದ್ಯೋಗ ಪಡೆದುಕೊಳ್ಳಿ ಎಂದರು.

ಕಾರ್ಯಕ್ರಮದಲ್ಲಿ ತಹಶೀಲ್ದಾರ್ ಎಲ್.ಮರುಳೀಧರ, ತಾ.ಪಂ. ಇಓ ಅನಂತರಾಜು, ನಗರಸಭೆ ಅಧ್ಯಕ್ಷೆ ಪೂಜಾ ಪೆದ್ದರಾಜು, ಸ್ಥಾಯಿ ಸಮಿತಿ ಅಧ್ಯಕ್ಷ ಎಸ್.ಎಲ್.ರಂಗನಾಥ್, ಕೆಪಿಸಿಸಿ ಅಲ್ಪಸಂಖ್ಯಾತರ ಘಟಕದ ರಾಜ್ಯ ಉಪಾಧ್ಯಕ್ಷ ಅಬ್ದುಲ್ಲಾ ಖಾನ್, ಮಾಜಿ ನಗರಸಭಾ ಅಧ್ಯಕ್ಷ ಅಮಾನುಲ್ಲಾ ಖಾನ್, ಪ್ರಾಂಶುಪಾಲ ಅನಿಲ್ಕುಮಾರ್, ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಿ.ಆರ್.ಮಂಜುನಾಥ್, ಉಪಾಧ್ಯಕ್ಷ ರೂಪೇಶ್ ಕೃಷ್ಣಯ್ಯ, ಗ್ರಾಮಾಂತರ ಅಧ್ಯಕ್ಷ ನಟರಾಜ್ ಬರಗೂರು, ತುಮಕೂರು ವಿವಿ ಮಾಜಿ ಸಿಂಡಿಕೇಟ್ ಸದಸ್ಯ ಕೊಟ್ಟ ಶಂಕರ್, ನಗರಸಭಾ ಸದಸ್ಯ ಅಜಯ್ ಕುಮಾರ್ ಸೇರಿದಂತೆ ಹಲವರು ಭಾಗವಹಿಸಿದ್ದರು. 

Follow Us:
Download App:
  • android
  • ios