ಶಿವಾನಂದ ವೃತ್ತದ ಮೇಲ್ಸೇತುವೆ ಬಳಿಯಲ್ಲಿ ಫುಟ್‌ಪಾತ್ ಒತ್ತುವರಿ
- ಶಿವಾನಂದ ವೃತ್ತದ ಮೇಲ್ಸೇತುವೆ ಬಳಿಯಲ್ಲಿ ಫುಟ್‌ಪಾತ್ ಒತ್ತುವರಿ
- ಪಾದಚಾರಿಗಳಿಗೆ ರಸ್ತೆಯಲ್ಲೇ ಸಂಚರಿಸುವ ಸಂಕಷ್ಟ
- ಪಾದಚಾರಿ ಮಾರ್ಗವನ್ನು ವ್ಯಾಪಾರಿಗಳು ಶಾಶ್ವತವಾಗಿ ಒತ್ತುವರಿ ಮಾಡಿಕೊಂಡಿದ್ಧಾರೆ.
ಬೆಂಗಳೂರು (ಜು.11): ಶಿವಾನಂದ ವೃತ್ತದ ಮೇಲ್ಸೇತುವೆ ಬಳಿಯ ವ್ಯಾಪಾರಿಗಳು ಪಾದಚಾರಿ ಮಾರ್ಗ ಸಂಪೂರ್ಣವಾಗಿ ಒತ್ತುವರಿ ಮಾಡಿಕೊಂಡಿದ್ದು, ಜನರು ಓಡಾಡಲು ಪರದಾಡಬೇಕಾದ ಸ್ಥಿತಿ ನಿರ್ಮಾಣವಾಗಿದೆ.
ಶೇಷಾದ್ರಿಪುರ ರೈಲ್ವೆ ಅಂಡರ್ ಪಾಸ್ ಕಡೆಯಿಂದ ಶಿವಾನಂದ ವೃತ್ತದ ಕಡೆ ಸಾಗುವ ಮಾರ್ಗದಲ್ಲಿನ ಪಾದಚಾರಿ ಮಾರ್ಗವನ್ನು ಬೇಕರಿ, ಹೋಟೆಲ್ ಸೇರಿದಂತೆ ವಿವಿಧ ವ್ಯಾಪಾರಿಗಳು ಸಂಪೂರ್ಣವಾಗಿ ಅತಿಕ್ರಮಣ ಮಾಡಿಕೊಂಡಿದ್ದಾರೆ. ಪಾದಚಾರಿ ಮಾರ್ಗದಲ್ಲಿ ಮೆಟ್ಟಿಲು ನಿರ್ಮಾಣ ಮಾಡಲಾಗಿದೆ. ಹೂವಿನ ಕುಂಡ, ಕಸದ ಬುಟ್ಟಿ, ಚೇರು, ಟೇಬಲ್‌ಗಳನ್ನು ಇಡಲಾಗಿದೆ. ಈ ಮೂಲಕ ಸಾರ್ವಜನಿಕರು ಓಡಾಡದಂತೆ ಮಾಡಲಾಗಿದೆ. ಅನಿವಾರ್ಯವಾಗಿ ಜನರು ವಾಹನ ಸಂಚಾರಿಸುವ ರಸ್ತೆಯಲ್ಲಿಯೇ ನಡೆದು ಸಾಗಬೇಕಾಗಿದೆ.
ಶಿವಾನಂದ ವೃತ್ತದ ಸಮೀಪದಲ್ಲಿ ಗಾಂಧಿ ಭವನ, ಕುಮಾರಕೃಪಾ ಅತಿಥಿ ಗೃಹ, ಮುಖ್ಯಮಂತ್ರಿಗಳ ಗೃಹ ಕಚೇರಿ, ಚಲನಚಿತ್ರ ವಾಣಿಜ್ಯ ಮಂಡಳಿ ಹಾಗೂ ರೇಸ್ ಕೋರ್ಸ್ ಸೇರಿದಂತೆ ಮೊದಲಾದ ಪ್ರಸಿದ್ಧ ಸ್ಥಳಗಳಿದ್ದು, ಸಾಕಷ್ಟುಜನರು ರಾಜ್ಯದ ವಿವಿಧ ಭಾಗದಿಂದ ಆಗಮಿಸುತ್ತಾರೆ. ಮಳೆ ಬಂದಾಗ ಈ ರಸ್ತೆಯಲ್ಲಿ ಪಾದಚಾರಿಗಳು ಓಡಾಡಲು ತೀವ್ರ ಸಮಸ್ಯೆ ಆಗುತ್ತಿದೆ ಎಂದು ಸ್ಥಳೀಯರು ದೂರಿದ್ದಾರೆ.
ಶೀಘ್ರ ತೆರವು: ಈ ಕುರಿತು ಪ್ರತಿಕ್ರಿಯೆ ನೀಡಿದ ಬಿಬಿಎಂಪಿ ಯೋಜನಾ ವಿಭಾಗದ ಮುಖ್ಯ ಎಂಜಿನಿಯರ್ ಲೋಕೇಶ್, ಶೀಘ್ರದಲ್ಲಿ ಒತ್ತುವರಿ ತೆರವು ಮಾಡಿ ಮೇಲ್ಸೇತುವೆ ಕಾಮಗಾರಿ ಮುಗಿದ ಬಳಿಕ ಪಾದಚಾರಿ ಮಾರ್ಗ ಹಾಗೂ ಮಳೆ ನೀರು ಚರಂಡಿ ನಿರ್ಮಿಸಲಾಗುವುದು ಎಂದು ಮಾಹಿತಿ ನೀಡಿದ್ದಾರೆ.
Hebbal Flyover ಬಳಿ ಸಂಚಾರ ದಟ್ಟಣೆ ತಪ್ಪಿಸಲು ಇಂದಿನಿಂದ ಹೊಸ ನಿಯಮ
ಶಿವಾನಂದ ಫ್ಲೈಓವರ್ ಆ.15ರ ವೇಳಗೆ ಸಿದ್ಧ: ಶಿವಾನಂದ ವೃತ್ತದಲ್ಲಿ ನಿರ್ಮಾಣವಾಗುತ್ತಿರುವ ಮೇಲ್ಸೇತುವೆ ಕಾಮಗಾರಿ ಮುಂದುವರಿಸಲು ಹೈಕೋರ್ಟ್ ಹಸಿರು ನಿಶಾನೆ ನೀಡಿದ ಹಿನ್ನೆಲೆಯಲ್ಲಿ ಶನಿವಾರದಿಂದ ಕಾಮಗಾರಿ ಮುಂದುವರಿಸಲಾಗಿದ್ದು, ಆಗಸ್ಟ್ 15ರ ವೇಳೆ ಕಾಮಗಾರಿ ಪೂರ್ಣಗೊಳಿಸಿ ವಾಹನ ಸಂಚಾರಕ್ಕೆ ಮುಕ್ತಗೊಳಿಸಲು ಪಾಲಿಕೆ ಉದ್ದೇಶಿಸಿದೆ.
ಶೇಷಾದ್ರಿಪುರ ರೈಲ್ವೆ ಅಂಡರ್ ಪಾಸ್ ಕಡೆಯ ಡೌನ್ ರಾರಯಂಪ್ ನಿರ್ಮಾಣ ಅವೈಜ್ಞಾನಿಕವಾಗಿದೆ ಎಂದು ಸಾರ್ವಜನಿಕರು ಹೈಕೋರ್ಚ್ ಮೊರೆ ಹೋದ ಹಿನ್ನೆಲೆಯಲ್ಲಿ ಕಾಮಗಾರಿ ಸ್ಥಗಿತಗೊಳಿಸಲಾಗಿತ್ತು. ಇದೀಗ ತಜ್ಞರಿಂದ ವರದಿ ಪಡೆದ ಹೈಕೋರ್ಚ್ ಕಾಮಗಾರಿ ಮುಂದುವರಿಸಲು ಅನುಮತಿ ನೀಡಿದ ಹಿನ್ನೆಲೆಯಲ್ಲಿ ಕಾಮಗಾರಿ ಭರದಿಂದ ಸಾಗಿದೆ.
ಗ್ರೇಡ್ ಸಪರೇಟರ್ ಸೇರಿ ಒಟ್ಟಾರೆ 493 ಮೀ. ಉದ್ದದ ಮೇಲ್ಸೇತುವೆಯ ನಿರ್ಮಾಣ ಕಾರ್ಯ ಶೇ.90 ಪೂರ್ಣಗೊಂಡಿದೆ. ಶೇಷಾದ್ರಿಪುರ ಕಡೆಗೆ ಸಂಪರ್ಕಿಸುವ ಡೌನ್‌ರಾರಯಂಪ್ ಬಳಿ ಕಾಲುವೆ ಅಭಿವೃದ್ಧಿ ಮತ್ತು ಇಳಿಜಾರು ರಸ್ತೆ ನಿರ್ಮಿಸಿ ಡಾಂಬರೀಕರಣ ಮಾತ್ರ ಬಾಕಿಯಿದೆ. ಕಾಮಗಾರಿ ಪೂರ್ಣಗೊಳಿಸಲು 30 ದಿನ ಬೇಕಾಗಲಿದೆ. ಈ ಅವಧಿಯಲ್ಲಿ ಮಳೆ ಬಂದರೂ ಒಂದು ವಾರ ತಡವಾಗಬಹುದು. ಆದರೆ, ಆ.15ರ ವೇಳೆಗೆ ವಾಹನಗಳ ಸಂಚಾರಕ್ಕೆ ಮುಕ್ತಗೊಳಿಸಲಾಗುವುದು ಎಂದು ಬಿಬಿಎಂಪಿ ಯೋಜನಾ ವಿಭಾಗದ ಮುಖ್ಯ ಎಂಜಿನಿಯರ್ ಲೋಕೇಶ್ ಮಾಹಿತಿ ನೀಡಿದ್ದಾರೆ.
Shivananda Circle flyover ಕಾಮಗಾರಿ ಪೂರ್ಣಕ್ಕೆ ಹೈಕೋರ್ಟ್ ಒಪ್ಪಿಗೆ
5 ವರ್ಷ ವಿಳಂಬ :ಜೂನ್ 2017ರಲ್ಲಿ ಮೇಲ್ಸೇತುವೆ ಕಾಮಗಾರಿ ಆರಂಭಿಸಿ ಕೇವಲ 9 ತಿಂಗಳಲ್ಲಿ ಪೂರ್ಣಗೊಳಿಸಬೇಕಾಗಿತ್ತು. ಆದರೆ ಮರಗಳ ತೆರವು, ಭೂಸ್ವಾಧೀನ, ಮೇಲ್ಸೇತುವೆಯ ವಿಸ್ತೀರ್ಣ ಹೆಚ್ಚಳ ಹಾಗೂ ಗುತ್ತಿಗೆದಾರರಿಂದ ಕಾಮಗಾರಿ ದರ ಪರಿಷ್ಕರಣೆ ಸೇರಿ ವಿವಿಧ ಕಾರಣಗಳಿಂದ ನಿರ್ಮಾಣ ಕಾರ್ಯ ಐದು ವರ್ಷ ವಿಳಂಬವಾಗಿದೆ.
ವೆಚ್ಚ 19ರಿಂದ 60 ಕೋಟಿಗೆ ಏರಿಕೆ: ಬಿಬಿಎಂಪಿಯು 2017ರಲ್ಲಿ ಯೋಜನೆ ರೂಪಿಸಿದಂತೆ 326 ಮೀ. ಉದ್ದದ ಗ್ರೇಡ್ ಸಪರೇಟರ್ ನಿರ್ಮಾಣಕ್ಕೆ .19.85 ಕೊಟಿ ವೆಚ್ಚ ನಿಗದಿಗೊಳಿಸಲಾಗಿತ್ತು. ತದನಂತರ ಕರ್ನಾಟಕ ಚಲನಚಿತ್ರ ವಾಜ್ಯ ಮಂಡಳಿ ಹಾಗೂ ಇತರೆ ಸಾರ್ವಜನಿಕರಿಂದ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಗ್ರೇಡ್ ಸಪರೇಟರ್‌ನ ಉದ್ದವನ್ನು 493 ಮೀ.ಗೆ ವಿಸ್ತರಿಸಲಾಯಿತು. ಇದರೊಂದಿಗೆ ಕಂಬಗಳ ಸಂಖ್ಯೆಯನ್ನು 6ರಿಂದ 16ಕ್ಕೆ ಹೆಚ್ಚಿಸಲಾಯಿತು. ಆಗ ಯೋಜನಾ ವೆಚ್ಚವನ್ನು 2018ರ ಜುಲೈನಲ್ಲಿ .42.45 ಕೋಟಿಗೆ ಹೆಚ್ಚಿಸಲಾಯಿತು. ಪುನಃ ವಿವಿಧ ಗಡುವುಗಳ ವಿಸ್ತರಣೆಯ ನಂತರವೂ ಮೇಲ್ಸೇತುವೆ ಕಾಮಗಾರಿ ಪೂರ್ಣಗೊಳಿಸಲು ಸಮಸ್ಯೆ ಉಂಟಾದ ಹಿನ್ನೆಲೆಯಲ್ಲಿ ಸಾಮಗ್ರಿಗಳ ಬೆಲೆ ಏರಿಕೆಯನ್ನು ಪರಿಗಣಿಸಿ ಮತ್ತೊಮ್ಮೆ ಯೋಜನಾ ವೆಚ್ಚವನ್ನು .60 ಕೋಟಿಗೆ ಪರಿಷ್ಕರಿಸಲಾಗಿದೆ.