ಗೆಲುವಿನ ಸ್ಫೂರ್ತಿಯಿಂದ ಕ್ರೀಡೆಯಲ್ಲಿ ಪಾಲ್ಗೊಳ್ಳಿ: ಸಿಎಂ ಬೊಮ್ಮಾಯಿ

ಕ್ರೀಡೆಯಲ್ಲಿ ಸೋಲು-ಗೆಲುವು ಸಹಜ. ಸೋತಾಗ ಬೇಸರಗೊಳ್ಳದೇ ಪುನಃ ಗೆಲುವಿಗಾಗಿ ಪ್ರಯತ್ನಿಸಬೇಕು. ಪ್ರತಿಯೊಬ್ಬರಿಗೂ ಹಲವಾರು ಅವಕಾಶಗಳಿವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. 

Engage in sports with the spirit of winning says cm basavaraj bommai gvd

ಭದ್ರಾವತಿ (ಡಿ.02): ಕ್ರೀಡೆಯಲ್ಲಿ ಸೋಲು-ಗೆಲುವು ಸಹಜ. ಸೋತಾಗ ಬೇಸರಗೊಳ್ಳದೇ ಪುನಃ ಗೆಲುವಿಗಾಗಿ ಪ್ರಯತ್ನಿಸಬೇಕು. ಪ್ರತಿಯೊಬ್ಬರಿಗೂ ಹಲವಾರು ಅವಕಾಶಗಳಿವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ತಾಲೂಕಿನ ಕಾರೇಹಳ್ಳಿ ಬಿಜಿಎಸ್‌ ಕೇಂದ್ರೀಯ ವಿದ್ಯಾಲಯದಲ್ಲಿ ಶ್ರೀ ಆದಿಚುಂಚನಗಿರಿ ಶಿಕ್ಷಣ ಟ್ರಸ್ಟ್‌ ವತಿಯಿಂದ ಗುರುವಾರ ಹಮ್ಮಿಕೊಳ್ಳಲಾಗಿದ್ದ ಅಂತರ ಶಾಲಾ-ಕಾಲೇಜುಗಳ ರಜತ ಚುಂಚಾದ್ರಿ ಕ್ರೀಡೋತ್ಸವ, 25ನೇ ರಾಜ್ಯಮಟ್ಟದ ಕ್ರೀಡಾಕೂಟಕ್ಕೆ ಅವರು ಚಾಲನೆ ನೀಡಿ ಮಾತನಾಡಿದರು.

ಪ್ರತಿಯೊಬ್ಬರು ಗೆಲುವಿನ ಸ್ಪೂರ್ತಿಯಿಂದ ಕ್ರೀಡೆಯಲ್ಲಿ ಭಾಗವಹಿಸಬೇಕು. ಕ್ರೀಡೆ ಸಹ ಒಂದು ಬದುಕು ಎಂಬುದನ್ನು ಭಾವಿಸಿಕೊಳ್ಳಬೇಕು. ಭಗವಂತ ಗೆಲುವಿಗೆ ಹತ್ತಾರು ಅವಕಾಶಗಳನ್ನು ನೀಡಿರುತ್ತಾನೆ. ನಿರಂತರ ಪ್ರಯತ್ನದಿಂದ ಗೆಲುವು ಸಾಧ್ಯ. ಸೋತಾಗ ಬೇಸರಪಡಬಾರದು. ಪ್ರತಿಯೊಬ್ಬರಲ್ಲೂ ಕ್ರೀಡಾಸ್ಪೂರ್ತಿ ನಿರಂತರವಾಗಿರಬೇಕೆಂದರು.

Chamarajanagar: ಮುಖ್ಯಮಂತ್ರಿಗಳ ಜಿಲ್ಲಾ ಭೇಟಿ ಹಿನ್ನೆಲೆ ಪೂರ್ವ ಸಿದ್ದತಾ ಸಭೆ

ಶ್ರೀ ಕ್ಷೇತ್ರ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಡಾ. ನಿರ್ಮಲಾನಂದನಾಥ ಸ್ವಾಮೀಜಿ ದಿವ್ಯ ಸಾನಿಧ್ಯ ವಹಿಸಿದ್ದರು. ಶ್ರೀ ಕ್ಷೇತ್ರದ ಕಾರ್ಯದರ್ಶಿ ಶ್ರೀ ಪ್ರಸನ್ನನಾಥ ಸ್ವಾಮೀಜಿ, ಗೃಹ ಸಚಿವ ಆರಗ ಜ್ಞಾನೇಂದ್ರ, ಆರೋಗ್ಯ ಸಚಿವ ಡಾ. ಡಿ.ಸುಧಾಕರ್‌, ಶಿಕ್ಷಣ ಸಚಿವ ಬಿ.ಸಿ. ನಾಗೇಶ್‌, ಸಂಸದ ಬಿ.ವೈ. ರಾಘವೇಂದ್ರ, ಶಾಸಕ ಬಿ.ಕೆ. ಸಂಗಮೇಶ್ವರ್‌, ವಿಧಾನ ಪರಿಷತ್ತು ಸದಸ್ಯರಾದ ಎಸ್‌.ಎಸ್‌. ಭೋಜೇಗೌಡ, ಡಿ.ಎಸ್‌. ಅರುಣ್‌, ಜಿಲ್ಲಾಧಿಕಾರಿ ಡಾ.ಸೆಲ್ವಮಣಿ, ಶ್ರೀ ಆದಿಚುಂಚನಗಿರಿ ಶಿಕ್ಷಣ ಟ್ರಸ್ಟ್‌ ಪ್ರಮುಖರು, ವಿವಿಧ ಶಾಲೆಗಳ ಆಡಳಿತ ಮಂಡಳಿಯವರು, ವಿವಿಧ ಸಂಘ ಸಂಸ್ಥೆಗಳ ಪ್ರಮುಖರು, ಇನ್ನಿತರರು ಉಪಸ್ಥಿತರಿದ್ದರು.

25ನೇ ರಾಜ್ಯಮಟ್ಟದ ಕ್ರೀಡಾಕೂಟಕ್ಕೆ ಸಿಎಂ ಚಾಲನೆ: ತಾಲೂಕಿನ ಕಾರೇಹಳ್ಳಿ ಬಿಜಿಎಸ್‌ ಕೇಂದ್ರೀಯ ವಿದ್ಯಾಲಯದಲ್ಲಿ ಶ್ರೀ ಆದಿಚುಂಚನಗಿರಿ ಶಿಕ್ಷಣ ಟ್ರಸ್ಟ್‌ ವತಿಯಿಂದ ಗುರುವಾರ ಹಮ್ಮಿಕೊಳ್ಳಲಾಗಿದ್ದ ಅಂತರ್‌ ಶಾಲಾ-ಕಾಲೇಜುಗಳ ರಜತ ಚುಂಚಾದ್ರಿ ಕ್ರೀಡೋತ್ಸವ, 25ನೇ ರಾಜ್ಯಮಟ್ಟದ ಕ್ರೀಡಾಕೂಟಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಚಾಲನೆ ನೀಡಿದರು.

ಡಿ.3ರವರೆಗೆ ನಡೆಯಲಿರುವ ಕ್ರೀಡಾಕೂಟಕ್ಕೆ ಚಾಲನೆ ನೀಡಿ ಶುಭ ಹಾರೈಸಿದರು. ಇದಕ್ಕೂ ಮೊದಲು ವಿದ್ಯಾರ್ಥಿ ವಸತಿ ನಿಲಯದ ನಿರ್ಮಾಣಕ್ಕೆ ಭೂಮಿಪೂಜೆ ನೆರವೇರಿಸಿದರು. ಅನಂತರ ಕ್ರೀಡಾಕೂಟದ ವೇದಿಕೆಗೆ ಯಕ್ಷಗಾನ ಕಲಾತಂಡ, ಕೇರಳ ಚಂಡೆ ವಾದ್ಯ, ನವಿಲು ಕುಣಿತ ಸೇರಿದಂತೆ ವಿವಿಧ ಕಲಾತಂಡಗಳೊಂದಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ಗಣ್ಯರನ್ನು ಅದ್ಧೂರಿಯಾಗಿ ಬರಮಾಡಿಕೊಳ್ಳಲಾಯಿತು.

ನಾವು ರೌಡಿಗಳಿಗೆ ಅವಕಾಶ ನೀಡಲ್ಲ: ಸಿಎಂ ಬೊಮ್ಮಾಯಿ

ಶ್ರೀ ಕ್ಷೇತ್ರ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಡಾ. ನಿರ್ಮಲಾನಂದನಾಥ ಸ್ವಾಮೀಜಿ ದಿವ್ಯ ಸಾನ್ನಿಧ್ಯ ವಹಿಸಿದ್ದರು. ಶ್ರೀ ಕ್ಷೇತ್ರದ ಕಾರ್ಯದರ್ಶಿ ಶ್ರೀ ಪ್ರಸನ್ನನಾಥ ಸ್ವಾಮೀಜಿ, ಗೃಹ ಸಚಿವ ಆರಗ ಜ್ಞಾನೇಂದ್ರ, ಆರೋಗ್ಯ ಸಚಿವ ಡಾ. ಡಿ.ಸುಧಾಕರ್‌, ಶಿಕ್ಷಣ ಸಚಿವ ಬಿ.ಸಿ. ನಾಗೇಶ್‌, ಸಂಸದ ಬಿ.ವೈ. ರಾಘವೇಂದ್ರ, ಶಾಸಕ ಬಿ.ಕೆ. ಸಂಗಮೇಶ್ವರ್‌, ವಿಧಾನ ಪರಿಷತ್ತು ಸದಸ್ಯ ಎಸ್‌.ಎಸ್‌. ಭೋಜೇಗೌಡ, ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಇನ್ನಿತರರು ಉಪಸ್ಥಿತರಿದ್ದರು. ರಾಜ್ಯದ ವಿವಿಧೆಡೆಗಳಿಂದ ಕ್ರೀಡಾಕೂಟಕ್ಕೆ ಕ್ರೀಡಾಪಟುಗಳು ಆಗಮಿಸಿದ್ದು, ಡಿ.3ರಂದು ಮಧ್ಯಾಹ್ನ 12 ಗಂಟೆಗೆ ಸಮಾರೋಪ ಸಮಾರಂಭ ನಡೆಯಲಿದೆ.

Latest Videos
Follow Us:
Download App:
  • android
  • ios