Asianet Suvarna News Asianet Suvarna News

ಕುಡಿಯುವ ನೀರು ಪೂರೈಕೆ ವ್ಯತ್ಯಯವಾಗದಂತೆ ಗಮನಹರಿಸಿ: ಸಚಿವ ಬೋಸರಾಜು ಸೂಚನೆ

ಜಿಲ್ಲೆಯಲ್ಲಿ ಯಾವ ಗ್ರಾಮಗಳಲ್ಲಿಯು ಸಹ ಕುಡಿಯುವ ನೀರು ಪೂರೈಕೆಯಲ್ಲಿ ವ್ಯತ್ಯಯವಾಗದಂತೆ ಗಮನಹರಿಸುವಂತೆ ತಾ.ಪಂ.ಇಒಗಳಿಗೆ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್.ಬೋಸರಾಜು ಅವರು ಸೂಚಿಸಿದರು. 

Ensure that drinking water supply is not disrupted Minister Bosaraju instructs officials at kodagu rav
Author
First Published Aug 28, 2023, 7:29 PM IST

ವರದಿ: ರವಿ.ಎಸ್ ಹಳ್ಳಿ ಏಷ್ಯಾನೆಟ್ ಸುವರ್ಣ 

ಕೊಡಗು : ಜಿಲ್ಲೆಯಲ್ಲಿ ಯಾವ ಗ್ರಾಮಗಳಲ್ಲಿಯು ಸಹ ಕುಡಿಯುವ ನೀರು ಪೂರೈಕೆಯಲ್ಲಿ ವ್ಯತ್ಯಯವಾಗದಂತೆ ಗಮನಹರಿಸುವಂತೆ ತಾ.ಪಂ.ಇಒಗಳಿಗೆ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್.ಬೋಸರಾಜು ಅವರು ಸೂಚಿಸಿದರು. 

ಕುಡಿಯುವ ನೀರನ್ನು ಸಮರ್ಪಕವಾಗಿ ಪೂರೈಸಬೇಕು. ಯಾವುದೇ ಕಾರಣಕ್ಕೂ ಕುಡಿಯುವ ನೀರು ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಬಾರದು ಎಂದರು. ತಾ.ಪಂ.ಇಒಗಳಾದ ಶೇಖರ್, ಜಯಣ್ಣ, ಅಪ್ಪಣ್ಣ ಅವರು ಕುಡಿಯುವ ನೀರಿಗೆ ಸಂಬಂಧಿಸಿದಂತೆ ಮಾಹಿತಿ ನೀಡಿದರು. ಗ್ರಾಮೀಣ ಜನರಿಗೆ ಆರೋಗ್ಯ ಸೇವೆಗಳು ಸಮರ್ಪಕವಾಗಿ ತಲುಪಬೇಕು ಎಂದು ಸಹ ಜಿಲ್ಲಾ ಉಸ್ತುವಾರಿ ಸಚಿವರು ಹೇಳಿದರು.

 ಇತ್ತೀಚೆಗೆ ಕಂದಾಯ ಸಚಿವರು ಕೊಡಗು ಜಿಲ್ಲೆಗೆ ಭೇಟಿ ನೀಡಿದ ಸಂದರ್ಭದಲ್ಲಿ 94ಸಿ ಮತ್ತು 94ಸಿಸಿ ಅರ್ಜಿಗಳ ವಿಲೇವಾರಿ ಸಂಬಂಧ ತ್ವರಿತ ವಿಲೇವಾರಿ ಮಾಡಲು ಸೂಚಿಸಿದರು. ಅದರಂತೆ ವಿಲೇವಾರಿ ಮಾಡಲಾಗಿದೆ ಎಂದು ಹೇಳಿದರು. ಈ ಸಂದರ್ಭದಲ್ಲಿ ಮಾತನಾಡಿದ ಉಪ ವಿಭಾಗಾಧಿಕಾರಿ ಡಾ.ಯತೀಶ್ ಉಳ್ಳಾಲ್ ಅವರು 94ಸಿ ಮತ್ತು 94 ಸಿಸಿ ಅರ್ಜಿಗಳ ವಿಲೇವಾರಿ ಪ್ರಕ್ರಿಯೆ ಪ್ರಗತಿಯಲ್ಲಿದೆ ಎಂದು ಮಾಹಿತಿ ನೀಡಿದರು. ಭೂ ದಾಖಲೆಗಳ ಉಪ ನಿರ್ದೇಶಕರಾದ ಪಿ.ಶ್ರೀನಿವಾಸ್ ಅವರು ಪೊನ್ನಂಪೇಟೆಯಲ್ಲಿ ಶೇ. 60 ರಷ್ಟು ಅರ್ಜಿಗಳ ವಿಲೇವಾರಿಯಾಗಿದೆ. ಮಡಿಕೇರಿಯಲ್ಲಿ 50 ಅರ್ಜಿಗಳು ಬಾಕಿ ಇದ್ದು, ಪ್ರಗತಿಯಲ್ಲಿವೆ ಎಂದು ತಿಳಿಸಿದರು.

ರಾಜ್ಯದಲ್ಲಿ ಮೋದಿ ತಂತ್ರಗಾರಿಕೆ ನಡೆಯಲ್ಲ: ಸಚಿವ ಎನ್‌ಎಸ್ ಬೋಸರಾಜು

 ಶಾಸಕರಾದ ಡಾ.ಮಂತರ್ ಗೌಡ(Dr Manthargowda) ಅವರು ಮರಗೋಡು ಗ್ರಾಮದಲ್ಲಿ 66 ಕೆ.ವಿ. ವಿದ್ಯುತ್ ಘಟಕ ನಿರ್ಮಾಣ ಸಂಬಂಧ ಜಾಗವನ್ನು ತ್ವರಿತವಾಗಿ ಒದಗಿಸುವಂತೆ ತಹಶೀಲ್ದಾರರಿಗೆ ಸೂಚಿಸಿದರು. ಈ ಬಗ್ಗೆ ಮಾಹಿತಿ ನೀಡಿದ ತಹಶೀಲ್ದಾರ್ ಪ್ರವೀಣ್ ಕುಮಾರ್ ಅವರು ಜಾಗ ಸಂಬಂಧಿಸಿದಂತೆ ಸ್ಥಳೀಯರ ಜೊತೆ ಚರ್ಚಿಸಲಾಗಿದೆ ಎಂದು ಮಾಹಿತಿ ನೀಡಿದರು. ಇದರ ಜೊತೆಗೆ ಆ.30 ರಂದು ಮೈಸೂರಿನಲ್ಲಿ ‘ಗೃಹಲಕ್ಷ್ಮಿ’(Gruhalakshmi scheme mysuru) ಯೋಜನೆಗೆ ಮುಖ್ಯಮಂತ್ರಿ ಅವರಿಂದ ಚಾಲನೆ ನೀಡಲಿದ್ದು ಕಾರ್ಯಕ್ರಮಕ್ಕೆ ಮಹಿಳಾ ಫಲಾನುಭವಿಗಳನ್ನು ಕರೆದೊಯ್ಯುವ ಸಂಬಂಧ ಸೂಚಿಸಿದರು. 

ರಾಜ್ಯ ಮಟ್ಟದ ‘ಗೃಹಲಕ್ಷ್ಮಿ’ ಯೋಜನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ(CM Siddaramaiah) ಅವರು ಚಾಲನೆ ನೀಡಲಿದ್ದು, ಈ ಕಾರ್ಯಕ್ರಮ ಯಶಸ್ಸಿಗೆ ಅಧಿಕಾರಿಗಳು ಮುಂದಾಗುವಂತೆ ತಿಳಿಸಿದ್ದಾರೆ. ಗೃಹಲಕ್ಷ್ಮಿ ಯೋಜನೆಯಡಿ ಪ್ರತೀ ಕುಟುಂಬದ ಯಜಮಾನಿ ಮಹಿಳೆಗೆ 2 ಸಾವಿರ ರೂಪಾಯಿಯನ್ನು ನೇರ ನಗದು ಮೂಲಕ ತಲುಪಿಸುವ ಯೋಜನೆಗೆ ವಿದ್ಯುಕ್ತವಾಗಿ ಚಾಲನೆ ದೊರೆಯಲಿದೆ. ಇದೊಂದು ರಾಜ್ಯ ಮಟ್ಟದ ಸರ್ಕಾರಿ ಕಾರ್ಯಕ್ರಮವಾಗಿದ್ದು, ಕೊಡಗು, ಮೈಸೂರು, ಚಾಮರಾಜನಗರ, ಹಾಸನ, ಮಂಡ್ಯ ಈ ಐದು ಜಿಲ್ಲೆಯ ಫಲಾನುಭವಿಗಳು ಪಾಲ್ಗೊಳ್ಳಲಿದ್ದಾರೆ ಎಂದು ಸಚಿವರು ತಿಳಿಸಿದರು. 

ಸ್ತ್ರೀ ಸ್ವಾವಲಂಬನೆಯತ್ತ ಒಂದು ದಿಟ್ಟ ಹೆಜ್ಜೆ ‘ಗೃಹಲಕ್ಷ್ಮಿ’ ಪ್ರತಿ ಮನೆ ಯಜಮಾನಿಗೆ 2 ಸಾವಿರ ರೂ. ನೀಡುವ ‘ಯೋಜನೆ ಜಾರಿಯು ಇದೇ ಆಗಸ್ಟ್, 30 ರಂದು ಮೈಸೂರಿನಲ್ಲಿ ಚಾಲನೆಗೊಳ್ಳಲಿದ್ದು, ಈ ಕಾರ್ಯಕ್ರಮಕ್ಕೆ ಜಿಲ್ಲೆಯ 103 ಗ್ರಾ.ಪಂ. ಹಾಗೂ ಸ್ಥಳೀಯ ಸಂಸ್ಥೆಗಳಿಂದ ಫಲಾನುಭವಿಗಳನ್ನು ಸುರಕ್ಷಿತವಾಗಿ ಕರೆದುಕೊಂಡು ಹೋಗುವುದು ಮತ್ತು ಬರುವಂತಾಗಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್. ಭೋಸರಾಜು ಅವರು ಸೂಚಿಸಿದರು. 

ನೋಡಲ್ ಅಧಿಕಾರಿಗಳು ಹೆಚ್ಚಿನ ಜವಾಬ್ದಾರಿ ವಹಿಸಿಕೊಂಡು ‘ಗೃಹಲಕ್ಷ್ಮಿ ಯೋಜನೆ’ ಕಾರ್ಯಕ್ರಮವನ್ನು ಯಶಸ್ಸುಗೊಳಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಆಗಸ್ಟ್, 30 ರಂದು ಬೆಳಗ್ಗೆ 10 ಗಂಟೆಗೆ ಮೈಸೂರಿನಲ್ಲಿ ನಡೆಯುವ ಸಭಾ ಕಾರ್ಯಕ್ರಮದಲ್ಲಿ ಫಲಾನುಭವಿಗಳು ಇರಬೇಕು. ಆ ನಿಟ್ಟಿನಲ್ಲಿ ಪ್ರತೀ ಗ್ರಾ.ಪಂ.ನಿಂದ ಆಗಮಿಸುವ ಫಲಾನುಭವಿಗಳ ಪಟ್ಟಿಯನ್ನು ಖಾತರಿಪಡಿಸಿಕೊಳ್ಳುವಂತೆ ಸಚಿವರಾದ ಎನ್.ಎಸ್.ಬೋಸರಾಜು ಅವರು ಹೇಳಿದರು.

ಈಗಾಗಲೇ ನೋಡಲ್ ಅಧಿಕಾರಿಗಳನ್ನು ನಿಯೋಜಿಸಲಾಗಿದ್ದು, ಪ್ರತೀ ಗ್ರಾ.ಪಂ.ಹಂತದಲ್ಲಿ ಆಶಾ ಮತ್ತು ಅಂಗನವಾಡಿ ಕಾರ್ಯಕರ್ತರು, ಪಿಡಿಒಗಳು, ತಾ.ಪಂ.ಇಒಗಳು, ತಹಶೀಲ್ದಾರರು, ಸಿಡಿಪಿಒ ಹೀಗೆ ಎಲ್ಲಾ ಹಂತದ ಅಧಿಕಾರಿಗಳು ಗೃಹಲಕ್ಷ್ಮಿ ಯೋಜನಾ ಕಾರ್ಯಕ್ರಮ ಯಶಸ್ಸುಗೊಳಿಸುವ ನಿಟ್ಟಿನಲ್ಲಿ ಕೈಜೋಡಿಸುವಂತೆ ಸಚಿವರು ಹೇಳಿದರು.

ಕಾರ್ಯಕ್ರಮಕ್ಕೆ ಹೋಗುವ ಸಂದರ್ಭದಲ್ಲಿ ಬೆಳಗ್ಗಿನ ಉಪಾಹಾರ, ಮಧ್ಯಾಹ್ನದ ಊಟ ವ್ಯವಸ್ಥೆ ಮಾಡಬೇಕು. ಕುಡಿಯುವ ನೀರು ಕಲ್ಪಿಸುವಂತೆ ಸಚಿವರು ನಿರ್ದೇಶನ ನೀಡಿದರು.
  
ಯಾವುದೇ ರೀತಿ ತೊಂದರೆಯಾಗದಂತೆ ಸುರಕ್ಷಿತವಾಗಿ ಕರೆದುಕೊಂಡು ಹೋಗಿ ಬರಬೇಕು. ಪ್ರತೀ ಬಸ್‍ನಲ್ಲಿ 50 ಮಂದಿಯ ವಾಟ್ಸ್‍ಅಪ್ ಗ್ರೂಪ್‍ನ್ನು ಮಾಡಿಕೊಂಡು ಸಮನ್ವಯತೆ ಸಾಧಿಸಿ ಸುರಕ್ಷಿತವಾಗಿ ವಾಪಸ್ಸು ಬರಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವರು ಹೇಳಿದರು. 

‘ಶಾಸಕರಾದ ಡಾ.ಮಂತರ್ ಗೌಡ ಅವರು ಮಾತನಾಡಿ ‘ಗೃಹಲಕ್ಷ್ಮಿ’ ಯೋಜನೆಯು ಸರ್ಕಾರದ ಐತಿಹಾಸಿಕ ಕಾರ್ಯಕ್ರಮವಾಗಿದ್ದು, ಸರ್ಕಾರದ ಯೋಜನೆ ಪ್ರತೀ ಬಡವರಿಗೂ ತಲುಪಬೇಕು. ಆ ನಿಟ್ಟಿನಲ್ಲಿ ಬಡವರವನ್ನು ಕಾರ್ಯಕ್ರಮಕ್ಕೆ ಕರೆದುಕೊಂಡು ಬರುವಂತಾಗಬೇಕು ಎಂದು ಸಲಹೆ ಮಾಡಿದರು.’

ಗ್ರಾ.ಪಂ.ಜೊತೆಗೆ ಮಡಿಕೇರಿ ನಗರ, ಕುಶಾಲನಗರ ಮತ್ತು ಸೋಮವಾರಪೇಟೆ ಪಟ್ಟಣಗಳಿಂದಲೂ ಬಸ್ ವ್ಯವಸ್ಥೆ ಮಾಡುವಂತೆ ಶಾಸಕರು ಸಲಹೆ ಮಾಡಿದರು. 
ಹೆಚ್ಚುವರಿ ಜಿಲ್ಲಾಧಿಕಾರಿ ಬಿ.ಎನ್.ವೀಣಾ ಅವರು ನೋಡಲ್ ಅಧಿಕಾರಿಗಳಾಗಿ ಗ್ರಾ.ಪಂ. ಅಭಿವೃದ್ಧಿ ಅಧಿಕಾರಿ, ಪಂಚಾಯತ್ ಕಾರ್ಯದರ್ಶಿ ಮತ್ತು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳನ್ನು ನಿಯೋಜಿಸಲಾಗಿದೆ. 

ಕೆಎಸ್‍ಆರ್‍ಟಿಸಿ ಬಸ್‍ಗಳು ಆಯಾಯ ಗ್ರಾ.ಪಂ. ಕಾರ್ಯಾಲಯದಿಂದ ಹೊರಡಲಿದೆ. ಪ್ರತೀ ಬಸ್‍ಗೆ ಕನಿಷ್ಠ 50 ರಂತೆ ಫಲಾನುಭವಿಗಳನ್ನು ಈಗಾಗಲೇ ಗುರುತಿಸಲಾಗಿದ್ದು, ಜಿಲ್ಲೆಯಿಂದ 5,150 ಮಂದಿ ಫಲಾನುಭವಿಗಳನ್ನು ಸಿದ್ಧಪಡಿಸಲಾಗಿದೆ ಎಂದು ಮಾಹಿತಿ ನೀಡಿದರು. 

Karnataka Politics: ಆಪರೇಶನ್‌ ಹಸ್ತ ಟಾಸ್ಕ್ ಯಾರಿ​ಗೂ ಕೊಟ್ಟಿ​ಲ್ಲ: ಎನ್‌.ಎಸ್‌.ಬೋಸರಾಜ್

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರಾದ ನಟರಾಜ ಅವರು ಮಾಹಿತಿ ನೀಡಿ ಜಿಲ್ಲೆಯಲ್ಲಿ 1,31,863 ಗುರಿಯಲ್ಲಿ 1,05,122 ಮಂದಿ ಗೃಹಲಕ್ಷ್ಮಿ ಯೋಜನೆಯಡಿ ನೋಂದಣಿಯಾಗಿದ್ದು, ಶೇ.81.14 ರಷ್ಟು ಸಾಧನೆ ಮಾಡಲಾಗಿದೆ ಎಂದರು. ಜಿ.ಪಂ.ಸಿಇಒ ವರ್ಣಿತ್ ನೇಗಿ ಅವರು ಗೃಹಲಕ್ಷ್ಮಿ ಯೋಜನೆ ಕಾರ್ಯಕ್ರಮ ಯಶಸ್ಸುಗೊಳಿಸುವ ನಿಟ್ಟಿನಲ್ಲಿ ಸಿದ್ಧತೆ ಮಾಡಿಕೊಳ್ಳಲಾಗಿದೆ. ಪ್ರತೀ ಗ್ರಾ.ಪಂ.ನಿಂದ 50 ಮಂದಿ ಫಲಾನುಭವಿಗಳನ್ನು ಕಳುಹಿಸಲಾಗುತ್ತದೆ ಎಂದರು. 

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಅವರು ಗೃಹಲಕ್ಷ್ಮಿ ಯೋಜನೆ ಸಂಬಂಧ ಹಲವು ಮಾಹಿತಿ ನೀಡಿದರು.

Follow Us:
Download App:
  • android
  • ios