ಮಾಜಿ ಸಿಎಂ ಸಿದ್ದರಾಮಯ್ಯ ಹಾಸನಾಂಬ ದರ್ಶನ ಪಡೆದಿದ್ದಾರೆ. ದರ್ಶನ ಪಡೆದು ಮಾತನಾಡಿದ ಸಿದ್ದರಾಮಯ್ಯ ನಾನು ನಾಸ್ತಿಕನಲ್ಲ, ದೇವಸ್ಥಾನಕ್ಕೆ ಹೋಗುತ್ತೇನೆ ಎಂದು ಟೀಕೆಗಳಿಗೆ ಸ್ಪಷ್ಟನೆ ನೀಡಿದ್ದಾರೆ. ಸಿದ್ದರಾಮಯ್ಯ ಹೇಳಿದ್ದೇನು?

ಹಾಸನ (ನ.06) ಪವಿತ್ರ ಹಾಸನಾಂಬ ದರ್ಶನಕ್ಕೆ ರಾಜ್ಯದ ಮೂಲೆ ಮೂಲೆಗಳಿಂದ ಭಕ್ತರು ಆಗಮಿಸುತ್ತಿದ್ದಾರೆ. ಪ್ರತಿ ದಿನ ಸಾವಿರು ಭಕ್ತರು ಆಗಮಿಸಿ ದರ್ಶನ ಪಡೆಯುತ್ತಿದ್ದಾರೆ. ಇಂದು ಹಾಸನಾಂಬ ದರ್ಶನಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆಗಮಿಸಿದ್ದರು. ಹಾಸನಾಂಬ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದ್ದಾರೆ. ಇದೇ ವೇಳೆ ಮಾತನಾಡಿದ ಸಿದ್ದರಾಮಯ್ಯ ನಾನು ದೇವಸ್ಥಾನಕ್ಕೆ ಹೋಗುತ್ತೇನೆ. ನಾಸ್ತಿನಕಲ್ಲ ಎಂದಿದ್ದಾರೆ.

ನಾನು ನಾಸ್ತಿಕನಲ್ಲ, ದೇವಸ್ಥಾನಕ್ಕೆ ಹೋಗುತ್ತೇನೆ

ಹಾಸನಾಂಬ ದರ್ಶನ ಪಡೆದ ಬಳಿಕ ಕ್ರೀಡೋತ್ಸವದಲ್ಲಿ ಪಾಲ್ಗೊಂಡ ಸಿದ್ದರಾಮಯ್ಯ ಭಾಷಣ ಮಾಡಿದ್ದಾರೆ. ನಾನು ನಾಲ್ಕು ಬಾರಿ ಹಾಸನಾಂಬೆ ದರ್ಶನ ಪಡೆದಿದ್ದೇನೆ. ಮುಖ್ಯಮಂತ್ರಿ ಆಗಿ ಮೂರು ಬಾರಿ ಈಗ ಒಂದು ಬಾರಿ ದರ್ಶನ ಪಡೆದಿದ್ದೇನೆ. ನನ್ನನ್ನ ನಾಸ್ತಿಕ ಯಾಕೆ ದೇವಸ್ಥಾನಕ್ಕೆ ಹೋಗುತ್ತಾನೆ ಎಂದು ಪ್ರಶ್ನಿಸಿದ್ದರು. ನಾನು ನಾಸ್ತಿಕ ಅಲ್ಲ, ದೇವಸ್ಥಾನಕ್ಕೆ ಹೋಗುತ್ತೇನೆ. ಆದರೆ ಹೆಚ್ಚಿಲ್ಲ, ಆದರೆ ದೇವಸ್ಥಾನಕ್ಕೆ ಹೋಗುವುದು ಕಡಿಮೆ. ದೇವನೊಬ್ಬ ನಾಮ ಹಲವು ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಹಾಸನಾಂಬ ದರ್ಶನ ಪಡೆದು ದೇವರಲ್ಲಿ ಪ್ರಾರ್ಥಿಸಿದ್ದೇನೆ. ರಾಜ್ಯಕ್ಕೆ, ಜನರಿಗೆ, ನನಗೂ ಒಳ್ಳೆಯದಾಗಲಿ ಅಂತ ಪ್ರಾರ್ಥಿಸಿದ್ದೇನೆ. ಮೈಸೂರು ದಸರಾ ಮಾದರಿಯಲ್ಲಿ ಉತ್ಸವ ಮಾಡುತ್ತಿದ್ದಾರೆ. ಹಾಸನಾಂಬೆ ಭಕ್ತರ ಸಂಖ್ಯೆ ಹೆಚ್ಚಾಗುತ್ತಿದೆ. ಮುಂದಿನ ವರ್ಷ ಇನ್ನೂ ಚೆನ್ನಾಗಿ ನಡೆಯಲಿ ಎಂದು ಸಿದ್ದರಾಮಯ್ಯ ಹಾರೈಸಿದ್ದಾರೆ. ಪ್ರತಿ ವರ್ಷವೂ ಭಕ್ತರ ಸಂಖ್ಯೆ ಹೆಚ್ಚಾಗುತ್ತಿವೆ.

ಅಹಿತಕರ ಘಟನೆ ನಡೆಯದಂತೆ ನೋಡಿಕೊಳ್ಳುತ್ತಿದ್ದಾರೆ. ಅದಕ್ಕಾಗಿ ಭಕ್ತರ ಸಂಖ್ಯೆ ಹೆಚ್ಚಾಗುತ್ತಿದೆ. ಜಿಲ್ಲಾಡಳಿತ ಉತ್ತಮ‌ ರೀತಿ ವ್ಯವಸ್ಥೆ ಮಾಡಿಕೊಂಡಿದೆ. ಎಲ್ಲರಿಗೂ ಧನ್ಯವಾದ ಹೇಳಲು ಬಯಸುತ್ತೇನೆ. ಮುಂದೆಯೂ ಶಿವಲಿಂಗೇಗೌಡರ ಉಸ್ತುವಾರಿಯಲ್ಲಿ ಹಾಸನಾಂಬ ಉತ್ಸವ ಯಶಸ್ವಿಯಾಗಿ ನಡೆಯಲಿದೆ. ಎಲ್ಲರಿಗೂ ಶುಭವಾಗಲಿ, ಕ್ರೀಡಾಪಟುಗಳಿಗೆ, ಅಭಿಮಾನಿಗಳಿಗೆ ಶುಭವಾಗಲಿ . ಸ್ಕೌಟ್ ಅಂಡ್ ಗೈಡ್ ನ ಎಲ್ಲಾ ಮಕ್ಕಳಿಗೂ ದೇವರು ಆರೋಗ್ಯ ಕೊಡಲಿ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.