ಕೋಲಾರ (ಫೆ.07):  ಮಾಜಿ ಕೇಂದ್ರ ಸಚಿವ ಆರ್.ಎಲ್ ಜಾಲಪ್ಪ ಆರೋಗ್ಯದಲ್ಲಿ ಏರು ಪೇರಾಗಿದ್ದು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. 

ಜಾಲಪ್ಪ ಅವರಿಗೆ  97 ವರ್ಷ ವಯಸ್ಸಾಗಿದ್ದು, ಕೋಲಾರದ  ಜಾಲಪ್ಪ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. 

ತಲೆಯಲ್ಲಿ ರಕ್ತದೊತ್ತಡದ ಹಿನ್ನೆಲೆ  ಜಾಲಪ್ಪ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. 

ಕೋಲಾರದಲ್ಲಿ ಜಾಲಪ್ಪ ಸಂಸ್ಥೆಗಳ ಮೇಲೆ ಐಟಿ ದಾಳಿ ..

ಅನಾರೋಗ್ಯ ಹಿನ್ನೆಲೆ ಜಾಲಪ್ಪ ಅವರಿಗೆ ಸುಮಾರು ಎರಡು ಗಂಟೆಗಳ ಕಾಲ ಶಸ್ತ್ರಚಿಕಿತ್ಸೆ ನಡೆಯಲಿದೆ. 

ಈ ಬಗ್ಗೆ ಸುವರ್ಣ ನ್ಯೂಸ್ ಡಾಟ್‌ ಕಾಮ್‌ಗೆ  ಮಾಹಿತಿ ಲಭ್ಯವಾಗಿದೆ.

ಕರ್ನಾಟಕದ ಪ್ರಮುಖ ರಾಜಕಾರಣಿಯಾಗಿದ್ದ ಜಾಲಪ್ಪ 4 ಬಾರಿ ಲೋಕಸಭಾ ಸದಸ್ಯರು ಹಾಗೂ ಕೇಂದ್ರ ಸಚಿವರಾಗಿದ್ದರು. ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರ ಪ್ರತಿನಿಧಿಸುತ್ತಿದ್ದರು.