Asianet Suvarna News Asianet Suvarna News

Dharwad: ಆ.12ರಂದು ಸ್ವಾತಂತ್ರ‍್ಯೋತ್ಸವದ ಅಂಗವಾಗಿ ಐತಿಹಾಸಿಕ ದಾಖಲೆಗಳ ಹಾಗೂ ಛಾಯಾಚಿತ್ರಗಳ ಪ್ರದರ್ಶನ!

ಜಿಲ್ಲಾಡಳಿತ, ಪ್ರಾದೇಶಿಕ ಪತ್ರಾಗಾರ ಕಚೇರಿ ಹಾಗೂ ಕರ್ನಾಟಕ ವಿದ್ಯಾವರ್ಧಕ ಸಂಘದ ಸಹಯೋಗದಲ್ಲಿ ಭಾರತದ ಸ್ವಾತಂತ್ರ‍್ಯೋತ್ಸವದ ಅಂಗವಾಗಿ ಐತಿಹಾಸಿಕ ದಾಖಲೆಗಳ ಹಾಗೂ ಛಾಯಾಚಿತ್ರಗಳ ಪ್ರದರ್ಶನ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.

Exhibition of historical documents and photographs as part of Independence Day on August 12th gvd
Author
First Published Aug 8, 2024, 7:23 PM IST | Last Updated Aug 8, 2024, 7:23 PM IST

ವರದಿ: ಪರಮೇಶ್ ಅಂಗಡಿ ಏಷ್ಯಾನೆಟ್ ಸುವರ್ಣ ನ್ಯೂಸ್, ಧಾರವಾಡ

ಧಾರವಾಡ (ಆ.08): ಜಿಲ್ಲಾಡಳಿತ, ಪ್ರಾದೇಶಿಕ ಪತ್ರಾಗಾರ ಕಚೇರಿ ಹಾಗೂ ಕರ್ನಾಟಕ ವಿದ್ಯಾವರ್ಧಕ ಸಂಘದ ಸಹಯೋಗದಲ್ಲಿ ಭಾರತದ ಸ್ವಾತಂತ್ರ‍್ಯೋತ್ಸವದ ಅಂಗವಾಗಿ ಐತಿಹಾಸಿಕ ದಾಖಲೆಗಳ ಹಾಗೂ ಛಾಯಾಚಿತ್ರಗಳ ಪ್ರದರ್ಶನ ಕಾರ್ಯಕ್ರಮವನ್ನು ಆಗಸ್ಟ್ 12, 13 ಹಾಗೂ 14, 2024 ರಂದು ಬೆಳಿಗ್ಗೆ 10: 30 ಗಂಟೆಗೆ ಕರ್ನಾಟಕ ವಿದ್ಯಾವರ್ಧಕ ಸಂಘದ ಚಿತ್ರಕಲಾ ಪ್ರದರ್ಶನ ಭವನದಲ್ಲಿ ಆಯೋಜಿಸಲಾಗಿದೆ. ಗ್ರಾಹಕರ ವ್ಯವಹಾರಗಳ, ಆಹಾರ ಮತ್ತು ಸಾರ್ವಜನಿಕ ವಿತರಣೆ ಮತ್ತು ಹೊಸ ಹಾಗೂ ನವೀಕರಿಸಬಹುದಾದ ಇಂಧನ ಸಚಿವ ಪ್ರಲ್ಹಾದ ಜೋಶಿ ಹಾಗೂ ವಿಧಾನ ಪರಿಷತ್ತಿನ ಸಭಾಪತಿ ಬಸವರಾಜ ಹೊರಟ್ಟಿ ಅವರು ಕಾರ್ಯಕ್ರಮದಲ್ಲಿ ಘನ ಉಪಸ್ಥಿತಿ ವಹಿಸುವರು.

ಕಾರ್ಮಿಕ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ ಎಸ್. ಲಾಡ್ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವರಾದ ಶಿವರಾಜ ತಂಗಡಗಿ ಅವರು ಕಾರ್ಯಕ್ರಮವನ್ನು ಉದ್ಘಾಟಿಸುವರು. ಶಾಸಕರಾದ ಅರವಿಂದ ಬೆಲ್ಲದ ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ಕರ್ನಾಟಕ ವಿಧಾನ ಪರಿಷತ್ತಿನ ಸರ್ಕಾರಿ ಮುಖ್ಯ ಸಚೇತಕ ಸಲೀಂ ಅಹ್ಮದ, ಶಾಸಕರು ಹಾಗೂ ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳ ಚರಂಡಿ ಮಂಡಳಿಯ ಅಧ್ಯಕ್ಷ ವಿನಯ ಕುಲಕರ್ಣಿ.

ವಿಜಯಪುರ ಪಾಲಿಕೆಯಲ್ಲಿ ಸದ್ದು ಮಾಡಿದ ಏಷ್ಯಾನೆಟ್ ಸುವರ್ಣ ನ್ಯೂಸ್ ವರದಿ: ಸಭೆಯಲ್ಲಿ ಶಾಕಿಂಗ್ ವರದಿ

ಶಾಸಕ ಹಾಗೂ ಕರ್ನಾಟಕ ಕೊಳಚೆ ಅಭಿವೃದ್ಧಿ ಮಂಡಳಿ ಅಧ್ಯಕ್ಷ  ಅಬ್ಬಯ್ಯ ಪ್ರಸಾದ, ಶಾಸಕ ಹಾಗೂ ವಾಯುವ್ಯ ಸಾರಿಗೆ ನಿಗಮದ ಅಧ್ಯಕ್ಷ ಭರಮಗೌಡ ಅಲಗೌಡ ಕಾಗೆ, ಶಾಸಕರು ಹಾಗೂ ಕರ್ನಾಟಕ ಕೈಮಗ್ಗ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಜೆ.ಎನ್.ಗಣೇಶ, ಶಾಸಕರಾದ ಎನ್.ಎಚ್ ಕೋನರಡ್ಡಿ, ಎಸ್.ವ್ಹಿ.ಸಂಕನೂರ, ಪ್ರದೀಪ ಶೆಟ್ಟರ, ಮಹೇಶ ಟೆಂಗಿನಕಾಯಿ, ಎಂ.ಆರ್.ಪಾಟೀಲ್, ಕರ್ನಾಟಕ ಬಾಲವಿಕಾಸ ಅಕಾಡೆಮಿಯ ಅಧ್ಯಕ್ಷ ಸಂಗಮೇಶ ಅಪ್ಪಾಸಿ ಬಬಲೇಶ್ವರ, ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ಮಹಾಪೌರರಾದ ರಾಮಣ್ಣ ಕೆ. ಬಡಿಗೇರ, ಹುಬ್ಬಳ್ಳಿ ಧಾರವಾಡ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಶಾಕಿರ್ ಸನದಿ ಅವರು ಭಾಗವಹಿಸುವರು.

ಸಂಡೂರು ಬೆಟ್ಟಗಳಲ್ಲಿನ ಗುಹೆಯೊಳಗೆ ನಿಧಿ ಶೋಧ: ಹೊಸ ಟೆಕ್ನಾಲಜಿ ಬಳಸಿ ಖದೀಮರಿಂದ ಶೋಧನೆ

ಕಾರ್ಯಕ್ರಮದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸರ್ಕಾರದ ಕಾರ್ಯದರ್ಶಿ ಡಾ. ಎಂ.ಎನ್. ಅಜಯ ನಾಗಭೂಷಣ, ಕರ್ನಾಟಕ ರಾಜ್ಯ ಪತ್ರಾಗಾರ ನಿರ್ದೇಶನಾಲಯದ ನಿರ್ದೇಶಕ ಡಾ. ಗವಿಸಿದ್ದಯ್ಯ, ಜಿಲ್ಲಾಧಿಕಾರಿ ದಿವ್ಯ ಪ್ರಭು, ಹುಬ್ಬಳ್ಳಿ ಧಾರವಾಡ ಮಹಾನಗರ ಪೊಲೀಸ್ ಆಯುಕ್ತ ಎನ್.ಶಶಿಕುಮಾರ, ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸ್ವರೂಪ ಟಿ.ಕೆ., ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಗೋಪಾಲ ಎಂ. ಬ್ಯಾಕೋಡ್, ಹುಬ್ಬಳ್ಳಿ-ಧಾರವಾಡ  ಮಹಾನಗರ ಪಾಲಿಕೆ ಆಯುಕ್ತ ಈಶ್ವರ ಉಳ್ಳಾಗಡ್ಡಿ ಹಾಗೂ ಕರ್ನಾಟಕ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಚಂದ್ರಕಾ0ತ ಬೆಲ್ಲದ ಅವರು ಭಾಗವಹಿಸುವರೆಂದು ಪ್ರಾದೇಶಿಕ ಪತ್ರಾಗಾರ ಕಚೇರಿಯ ಹಿರಿಯ ಸಹಾಯಕ ನಿರ್ದೇಶಕಿ ಡಾ. ಮಂಜುಳಾ ಯಲಿಗಾರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Latest Videos
Follow Us:
Download App:
  • android
  • ios