Asianet Suvarna News Asianet Suvarna News

ಚೌತಿ : ಚಿತ್ರಕಲಾ ಪರಿಷತ್‌ಲ್ಲಿ ಲೋಹದ ಗಣೇಶ ಮೂರ್ತಿಗಳ ಪ್ರದರ್ಶನ

  • ಗಣೇಶ ಚತುರ್ಥಿ ಪ್ರಯುಕ್ತ ಕರ್ನಾಟಕ ಚಿತ್ರಕಲಾ ಪರಿಷತ್ತಿನಲ್ಲಿ ವಿಶೇಷ ಕರಕುಶಲ ವಸ್ತುಗಳ ಪ್ರದರ್ಶನ ಹಾಗೂ ಮಾರಾಟ ಮೇಳ
  • ದ ಸೋಕ್‌ ಮಾರ್ಕೇಟ್‌ ನಲ್ಲಿ ವಿವಿಧ ಲೋಹಗಳ ಗಣೇಶ ಮೂರ್ತಿಗಳ ಪ್ರದರ್ಶನ  
Exhibition of metal Ganesha statues for Ganesh Chaturthi in Chitrakala Parishad snr
Author
Bengaluru, First Published Sep 3, 2021, 11:51 AM IST

ಬೆಂಗಳೂರು( ಸೆ.02): ಮುಂಬರುವ ಗೌರಿ ಹಾಗೂ ಗಣೇಶ ಚತುರ್ಥಿಯ ಪ್ರಯುಕ್ತ ಕರ್ನಾಟಕ ಚಿತ್ರಕಲಾ ಪರಿಷತ್ತಿನಲ್ಲಿ ವಿಶೇಷ ಕರಕುಶಲ ವಸ್ತುಗಳ ಪ್ರದರ್ಶನ ಹಾಗೂ ಮಾರಾಟ ಮೇಳ “ದ ಸೋಕ್‌ ಮಾರ್ಕೇಟ್” ನ್ನು ಆಯೋಜಿಸಲಾಗಿದೆ. ಸೆಪ್ಟೆಂಬರ್‌ 3 ರಿಂದ ಪ್ರಾರಂಭವಾಗಲಿರುವ ಈ ಮೇಳದಲ್ಲಿ ವಿವಿಧ ಲೋಹಗಳ ಗಣೇಶ ಮೂರ್ತಿಗಳ ಪ್ರದರ್ಶನ ಹಾಗೂ ಮಾರಾಟ ವಿಶೇಷವಾಗಿರಲಿದೆ. 

ಸೆಪ್ಟೆಂಬರ್‌ 12 ರ ವರೆಗೆ ಬೆಳಿಗ್ಗೆ 11 ರಿಂದ ಸಂಜೆ 7 ಗಂಟೆಯವರೆಗೆ ನಡೆಯಲಿರುವ ಈ ಮೇಳದಲ್ಲಿ ಕೋವಿಡ್‌ ಹರಡದಂತೆ ಎಲ್ಲಾ ರೀತಿಯ ಮುನ್ನೆಚರಿಕಾ ಕ್ರಮಗಳನ್ನು ಕೈಗೊಳ್ಳಲಾಗಿದ್ದು, ಪ್ರವೇಶ ಉಚಿತವಾಗಿದೆ. ಮುಂಬರುವ ಹಬ್ಬಗಳಿಗೆ ಬೇಕಾಗಿರುವ ಎಲ್ಲಾ ರೀತಿಯ ಸಾಮಗ್ರಿಗಳನ್ನು ಇಲ್ಲಿ ಕೊಳ್ಳಬಹುದಾಗಿದೆ. ಅಲಂಕಾರಿಕ ವಸ್ತುಗಳ ಜೊತೆಯಲ್ಲಿಯೇ ಮನೆ ಮಂದಿಗೆ ಬೇಕಾಗಿರುವ ಬಟ್ಟೆಗಳು ಹಾಗೂ ಇನ್ನಿತರೆ ವಸ್ತುಗಳನ್ನು ಕೊಳ್ಳಬಹುದಾಗಿದೆ. 80 ಕ್ಕೂ ಹೆಚ್ಚು ಅಂಗಡಿಗಳಿದ್ದು ದೇಶದ ಎಲ್ಲಾ ಭಾಗಗಳಿಂದ ಆಗಮಿಸಿರುವ ಕಲಾವಿದರುಗಳು ತಮ್ಮ ಕಲೆಯನ್ನು ಪ್ರದರ್ಶನಕ್ಕೆ ಇಡಲಿದ್ದಾರೆ. 

ಮಾಲಿನ್ಯ ಮಂಡಳಿಯಿಂದ ವಿಶೇಷವಾದ ಯೋಜನೆ : 10 ಲಕ್ಷ ಅರಿಶಿಣ ಗಣಪತಿ ಅಭಿಯಾನ

ಮಣ್ಣು, ಕಲ್ಲು, ಮರ ಹಾಗೂ ಲೋಹಗಳನ್ನು ಬಳಸಿ ತಯಾರಿಸಿರುವ ಗೊಂಬೆಗಳು ಅದರಲ್ಲೂ ಗಣೇಶನ ಮೂರ್ತಿಗಳು ಈ ಬಾರಿಯ ಪ್ರಮುಖ ಆಕರ್ಷಣೆಯಾಗಿರಲಿವೆ. ಇದರ ಜೊತೆಯಲ್ಲಿಯೇ, ದೇಶದ ವಿವಿಧ ಮೂಲೆಗಳ ಕಲಾವಿದರ ಕಲಾಕೃತಿಗಳು ಹಾಗೂ ಉತ್ಪನ್ನಗಳು ನೇರವಾಗಿ ಜನರಿಗೆ ತಲುಪಲಿವೆ. ನಿಮ್ಮ ಮನೆಯ ಗಾರ್ಡನ್‌ ಅಲಂಕರಿಸಲು, ನಿಮಗೊಪ್ಪುವ ಹ್ಯಾಂಡ್‌ ಲೂಮ್‌ ಸ್ಯಾರಿಯನ್ನು ಸೆಲೆಕ್ಟ್‌ ಮಾಡಲು, ಕುರ್ತಿಗಳು ಮತ್ತು ಆಭರಣಗಳನ್ನು ಕೊಳ್ಳಲು ಅತ್ಯುತ್ತಮ ಮೇಳ ಇದಾಗಿರಲಿದೆ.

ಈ ಮೇಳದಲ್ಲಿ ದೇಶದ ವಿವಿಧ ಭಾಗಗಳ ಕರಕುಶಲಕಾರರು ತಯಾರಿಸಿದ ತರಹೇವಾರಿ ಕರಕುಶಲ ವಸ್ತುಗಳು, ಆಟಿಕೆಗಳು, ಉಡುಪುಗಳು ಸೇರಿದಂತೆ ರಾಜಧಾನಿ ಬೆಂಗಳೂರಿನ ಜನತೆಗೆ ಮುದ ನೀಡುವಂತಹ ಉತ್ಪನ್ನಗಳು ಒಂದೇ ಸೂರಿನಡಿ ದೊರೆಯುತ್ತವೆ. ಮನೆಯನ್ನು ಅಲಂಕಾರ ಮಾಡುವ ಉತ್ಪನ್ನಗಳು, ಹ್ಯಾಂಡ್‍ಲೂಂಗಳು, ಕರಕುಶಲ ವಸ್ತುಗಳು, ಬಟ್ಟೆ, ಮರದ ಆಟಿಕೆಗಳು, ಹೆಂಗಳೆಯರ ಆಕರ್ಷಣೆಗೆಂದು ಆಭರಣಗಳು, ಬೆಡ್ ಲೆನಿನ್, ಕಲಾಕೃತಿಗಳು, ಪೀಠೋಪಕರಣಗಳು, ಮ್ಯಾಟ್‍ಗಳು, ಪಿಂಗಾಣಿ ವಸ್ತುಗಳು ಸೇರಿದಂತೆ ನೂರಾರು ಬಗೆಯ ಉತ್ಪನ್ನಗಳು ಈ ಪ್ರದರ್ಶನದಲ್ಲಿರಲಿವೆ.
ಚಿತ್ತಾರ ಹಾಗೂ ಗ್ರಾಂಡ್‌ ಫ್ಲಿಯಾ ಆಯೋಜಿಸಿರುವ ಈ ಮೇಳದ ಪ್ರಮುಖ ಉದ್ದೇಶ ಕುಶಲಕರ್ಮಿಗಳನ್ನು ಉತ್ತೇಜಿಸಿ ಅವರಿಗೊಂದು ಮಾರುಕಟ್ಟೆ ಕಲ್ಪಿಸುವುದಾಗಿದೆ. ಈ ನಿಟ್ಟಿನಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಲು ಕೋರಿದೆ. 

ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ : 96118 35597 / 6364 685 716

Follow Us:
Download App:
  • android
  • ios