Asianet Suvarna News Asianet Suvarna News

ವಂದೇ ಭಾರತ್ ಎಕ್ಸಪ್ರೆಸ್‌ ರೈಲು ಬೆಳಗಾವಿಗೆ ವಿಸ್ತರಣೆ

ವಂದೇ ಭಾರತ್‌ ಎಕ್ಸ್‌ಪ್ರೆಸ್‌ ರೈಲು ಬೆಂಗಳೂರಿನಿಂದ ರೈಲು ಸಂಖ್ಯೆ (20661) ಬೆಳಗ್ಗೆ 05.45 ಕ್ಕೆ ಬೆಂಗಳೂರು ನಿಲ್ದಾಣದಿಂದ ಹೊರಟು ಮಧ್ಯಾಹ್ನ 01.30 ಕ್ಕೆ ಬೆಳಗಾವಿ ತಲುಪಲಿದೆ. ಬೆಳಗಾವಿಯಿಂದ ರೈಲು ಸಂಖ್ಯೆ (20662) ಮಧ್ಯಾಹ್ನ 2 ಕ್ಕೆ ಬೆಳಗಾವಿಯಿಂದ ಹೊರಟು ರಾತ್ರಿ 10.10ಕ್ಕೆ ಬೆಂಗಳೂರು ನಿಲ್ದಾಣ ತಲುಪಲಿದೆ. 

Extension of Vande Bharat Express Train to Belagavi grg
Author
First Published Nov 16, 2023, 12:30 AM IST

ಬೆಳಗಾವಿ(ನ.16): ಜಿಲ್ಲೆಯ ಜನರ ಬಹು ದಿನಗಳ ಬೇಡಿಕೆಯಾದ ವಂದೇ ಭಾರತ್‌ ಎಕ್ಸ್‌ಪ್ರೆಸ್‌ ರೈಲ್‌ನ್ನು ಬೆಂಗಳೂರು- ಧಾರವಾಡದಿಂದ ಬೆಳಗಾವಿಯವರೆಗೆ ವಿಸ್ತರಣೆ ಮಾಡಿ ರೈಲ್ವೆ ಸಚಿವಾಲಯ ಆದೇಶ ನೀಡಿದೆ. 

ವಂದೇ ಭಾರತ್‌ ಎಕ್ಸ್‌ಪ್ರೆಸ್‌ ರೈಲು ಬೆಂಗಳೂರಿನಿಂದ ರೈಲು ಸಂಖ್ಯೆ (20661) ಬೆಳಗ್ಗೆ 05.45 ಕ್ಕೆ ಬೆಂಗಳೂರು ನಿಲ್ದಾಣದಿಂದ ಹೊರಟು ಮಧ್ಯಾಹ್ನ 01.30 ಕ್ಕೆ ಬೆಳಗಾವಿ ತಲುಪಲಿದೆ. ಬೆಳಗಾವಿಯಿಂದ ರೈಲು ಸಂಖ್ಯೆ (20662) ಮಧ್ಯಾಹ್ನ 2 ಕ್ಕೆ ಬೆಳಗಾವಿಯಿಂದ ಹೊರಟು ರಾತ್ರಿ 10.10ಕ್ಕೆ ಬೆಂಗಳೂರು ನಿಲ್ದಾಣ ತಲುಪಲಿದೆ. ಶ್ರೀಘ್ರದಲ್ಲಿ ವಂದೇ ಭಾರತ್‌ ಎಕ್ಸ್‌ಪ್ರೆಸ್‌ ರೈಲು ಸಂಚಾರದ ದಿನಾಂಕ ನಿಗದಿಯಾಗಲಿದೆ. 

ಲೋಕಸಭೆ ಚುನಾವಣೆಗೆ ಅಭ್ಯರ್ಥಿ ಆಯ್ಕೆ ಇನ್ನು ಅಂತಿಮವಾಗಿಲ್ಲ: ಸಚಿವ ಸತೀಶ್ ಜಾರಕಿಹೊಳಿ

ನನ್ನ ಮನವಿಗೆ ಸ್ಪಂದಿಸಿ ಶೀಘ್ರ ರೈಲಿನ ವ್ಯವಸ್ಥೆ ಮಾಡಿದ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ ಅವರಿಗೆ ಹಾಗೂ ರೈಲ್ವೆ ಇಲಾಖೆಗೆ ಪ್ರಕಟಣೆ ಮೂಲಕ ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಧನ್ಯವಾದ ತಿಳಿಸಿದ್ದಾರೆ.

Follow Us:
Download App:
  • android
  • ios