ಸಂಕಷ್ಟದಲ್ಲಿ ಸಹಕಾರ ನೀಡಿದವರಿಗೆ ಶೀಘ್ರ ಸನ್ಮಾನಿಸಿ ಅಭಿನಂದನೆ : ಎಸ್.ಟಿ.ಸೋಮಶೇಖರ್
- ಸಂಕಷ್ಟದ ಕಾಲದ ನಡುವೆಯೂ ಸಹಾಯ ಮಾಡುತ್ತಿರುವವರಿಗೆಲ್ಲರಿಗೂ ಲಾಕ್ ಡೌನ್ ಮುಗಿದ ನಂತರ ಅಭಿನಂದನೆ
- ಏಷಿಯನ್ ಪೆಂಟ್ಸ್ ಹಾಗೂ ನೆಸ್ಲೆ ಕಂಪನಿಯಿಂದ ಸ್ಯಾನಿಟೈಸರ್ ಹಾಗೂ ಆಕ್ಸಿಜನ್ ಕಾನ್ಸನ್‌ಟ್ರೇಟರ್ ಕೊಡುಗೆ
- ಸರ್ಕಾರದ ನಿಯಮದಂತೆ ಸೋಂಕು ಹೆಚ್ಚಿರುವ ಹಿನ್ನೆ ಜಿಲ್ಲೆಯಲ್ಲಿ ಲಾಕ್ ಡೌನ್ ವಿಸ್ತರಣೆ
ಮೈಸೂರು(ಜೂ.11): ಕೋವಿಡ್ ನಂತಹ ಸಂಕಷ್ಟದ ಕಾಲದ ನಡುವೆಯೂ ಸಿ.ಎಸ್.ಆರ್ ವತಿಯಿಂದ ಜಿಲ್ಲೆಗೆ ಸಹಾಯ ಮಾಡುತ್ತಿರುವವರಿಗೆಲ್ಲರಿಗೂ ಲಾಕ್ ಡೌನ್ ಮುಗಿದ ನಂತರ ಸರ್ಕಾರದಿಂದ ಅಭಿನಂದನೆ ಸಲ್ಲಿಸಲಾಗುವುದು ಎಂದು ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಹೇಳಿದರು.
ಶುಕ್ರವಾರ ಮೈಸೂರು ನಗರದ ಸರ್ಕಾರಿ ಅತಿಥಿ ಗೃಹದಲ್ಲಿ ಏಷಿಯನ್ ಪೆಂಟ್ಸ್ ಹಾಗೂ ನೆಸ್ಲೆ ಕಂಪನಿಯಿಂದ ಸ್ಯಾನಿಟೈಸರ್ ಹಾಗೂ ಆಕ್ಸಿಜನ್ ಕಾನ್ಸನ್‌ಟ್ರೇಟರ್ ಸ್ವೀಕರಿಸಿದ ಬಳಿಕ ಮಾತನಾಡಿದ ಅವರು ಕೋವಿಡ್ ಸಂಕಷ್ಟದ ಕಾಲದಲ್ಲಿ ಜಿಲ್ಲೆಗೆ ಹಲವಾರು ಮಂದಿ ಸಹಾಯ ಮಾಡುತ್ತಿದ್ದಾರೆ. ಅವರನ್ನೆಲ್ಲಾ ಅಭಿನಂದಿಸಲಾಗುವುದು ಎಂದು ಹೇಳಿದರು.
ಇನ್ನು ಸರ್ಕಾರದ ನಿಯಮದಂತೆ ಸೋಂಕು ಹೆಚ್ಚಿರುವ ಹಿನ್ನೆಲೆ ಜಿಲ್ಲೆಯಲ್ಲಿ ಲಾಕ್ ಡೌನ್ ವಿಸ್ತರಣೆಯಾಗಿದೆ. ಇದರ ಬಗ್ಗೆ ಮೊದಲೆ 11 ವಿಧಾನ ಸಭಾ ಕ್ಷೇತ್ರಗಳ ಶಾಸಕರು ಹಾಗೂ ಸಂಸದರ ಜೊತೆ ಚರ್ಚಿಸಿದ ನಂತರವೇ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದರು.
ಮೈಸೂರು ಜನತೆ ಮೈಮರೆಯದಿರಿ : ನೂತನ ಡೀಸಿ ಬಗಾದಿ ಗೌತಮ್ ಎಚ್ಚರಿಕೆ .
ಕೋವಿಡ್ ನಂತಹ ಕಷ್ಟಕಾಲದಲ್ಲಿ ಮೃಗಾಲಯಕ್ಕೆ ಸಾಕಷ್ಟು ನಷ್ಟವಾಗಿದೆ. ಆದರೆ ಚಿತ್ರನಟ ದರ್ಶನ್ ಅವರ ಅಭಿಮಾನಿಗಳು ಒಂದು ಕೋಟಿ ಹಣ ನೀಡಿದ್ದಾರೆ. ಹೀಗಾಗಿ ಜಿಲ್ಲಾಡಳಿತದ ಪರವಾಗಿ ಅಭಿನಂದನೆ ತಿಳಿಸುತ್ತೇವೆ ಎಂದು ಸಚಿವ ಸೋಮಶೇಖರ್ ಹೇಳಿದರು.
ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆಯಿಂದ ಆಹಾರ ಕಿಟ್ ವಿತರಣೆ : ಸಚಿವ ಎಸ್.ಟಿ.ಎಸ್ ಚಾಲನೆ ...
ಬಳಿಕ ನಗರ ಬನ್ನಿಮಂಟಪದ ಯಲ್ಲಮ್ಮ ಕಾಲೋನಿಯಲ್ಲಿ ಆರ್ಥಿಕವಾಗಿ ಹಿಂದುಳಿದವರಿಗೆ ಆಹಾರದ ಕಿಟ್ ವಿತರಿಸಿ ಬಳಿಕ ಅರಗು ಮತ್ತು ಬಣ್ಣದ ಕಾರ್ಖಾನೆಗೆ ತೆರಳಿ ಕಾರ್ಮಿಕರಿಗೆ ಲಸಿಕೆ ನೀಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಶಾಸಕ ಎಲ್.ನಾಗೇಂದ್ರ, ಸಂಸದ ಪ್ರತಾಪ್ ಸಿಂಹ, ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ರಾಜೀವ್, ಅರಗು ಮತ್ತು ಬಣ್ಣದ ಕಾರ್ಖಾನೆಯ ಅಧ್ಯಕ್ಷ ಫಣೀಶ್, ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್, ಜಿಲ್ಲಾಪಂಚಾಯಿತಿ ಸಿಇಒ ಎ.ಎಂ.ಯೋಗೀಶ್ ಮೈಸೂರು ನಗರ ಪಾಲಿಕೆ ಆಯುಕ್ತ ಜಿ.ಲಕ್ಷ್ಮಿಕಾಂತ್ ರೆಡ್ಡಿ, ಅಪರ ಜಿಲ್ಲಾಧಿಕಾರಿ ಡಾ.ಬಿ.ಎಸ್.ಮಂಜುನಾಥ ಸ್ವಾಮಿ ಸೇರಿದಂತೆ ಇತರರು ಹಾಜರಿದ್ದರು.