ದೇಶದಲ್ಲೇ ಮೊದಲ ಮಲತ್ಯಾಜ್ಯ ಸಂಸ್ಕರಣಾ ಘಟಕವನ್ನು ಬೆಂಗಳೂರು ನಗರ ಜಿಲ್ಲಾ ಪಂಚಾಯಿತಿ ವ್ಯಾಪ್ತಿಯ ರಾಜಾನುಕುಂಟೆ ಗ್ರಾಮ ಪಂಚಾಯಿತಿಯಲ್ಲಿ ರಾಜ್ಯ ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಇಲಾಖೆಯ ಸಚಿವ ಕೋಟ ಶ್ರೀನಿವಾಸ್ ಪೂಜಾರಿ ಲೋಕಾರ್ಪಣೆ ಮಾಡಿದರು.
ಯಲಹಂಕ (ಜು.07): ದೇಶದಲ್ಲೇ ಮೊದಲ ಮಲತ್ಯಾಜ್ಯ ಸಂಸ್ಕರಣಾ ಘಟಕವನ್ನು ಬೆಂಗಳೂರು ನಗರ ಜಿಲ್ಲಾ ಪಂಚಾಯಿತಿ ವ್ಯಾಪ್ತಿಯ ರಾಜಾನುಕುಂಟೆ ಗ್ರಾಮ ಪಂಚಾಯಿತಿಯಲ್ಲಿ ರಾಜ್ಯ ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಇಲಾಖೆಯ ಸಚಿವ ಕೋಟ ಶ್ರೀನಿವಾಸ್ ಪೂಜಾರಿ ಲೋಕಾರ್ಪಣೆ ಮಾಡಿದರು.
ನಂತರ ಮಾತನಾಡಿದ ಅವರು ಪಂಚಾಯಿತಿ ವ್ಯಾಪ್ತಿಯ ಹಳ್ಳಿಗಳನ್ನು ಕೇಂದ್ರೀಕರಿಸಿ ಈ ಯೋಜನೆ ರೂಪಿಸಿದ್ದೇವೆ. ನಗರದಲ್ಲಿ ಇರುವಂತೆ ಗ್ರಾಮೀಣ ಪ್ರದೇಶಗಳಲ್ಲಿ ಮಲ ತ್ಯಾಜ್ಯ ನಿರ್ವಹಣೆ ಸಂಪರ್ಕ ಕೊಳವೆ ಮಾರ್ಗಗಳಿಲ್ಲ. ಈ ಹಿನ್ನಲೆಯಲ್ಲಿ ಹಳ್ಳಿಗಳಲ್ಲಿ ಶೌಚಾಲಯಗಳನ್ನು ಗಮನದಲ್ಲಿಟ್ಟುಕೊಂಡು ಕೇಂದ್ರ ಸರ್ಕಾರದ ಸ್ವಸ್ತ ಭಾರತ ಮಿಷನ್ ಮತ್ತು ಗ್ರಾಮೀಣ ಕುಡಿಯುವ ನೀರು ನೈರ್ಮಲ್ಯ ಇಲಾಖೆ ಸಿಡಿಡಿ ಸಂಸ್ಥೆಯ ಸಹಯೋಗದಲ್ಲಿ ಹೊಸ ಪ್ರಯತ್ನಕ್ಕೆ ಹೆಜ್ಜೆ ಇರಿಸಿದೆ ಎಂದು ಹೇಳಿದರು.
ಬಕ್ರೀದ್ ಹಬ್ಬದಲ್ಲಿ ಗೋವುಗಳ ಸಾಗಾಟಕ್ಕೆ ಕಡಿವಾಣ: ಸಚಿವ ಪ್ರಭು ಚವ್ಹಾಣ್
ರಾಜಾನುಕುಂಟೆಯಲ್ಲಿ 1 ಎಕರೆ 15 ಗುಂಟೆ ಪ್ರದೇಶದಲ್ಲಿ .44 ಲಕ್ಷ ವೆಚ್ಚದಲ್ಲಿ ಮಲತ್ಯಾಜ್ಯ ಸಂಸ್ಕರಣಾ ಘಟಕ ನಿರ್ಮಿಸಲಾಗಿದೆ. ಕೇಂದ್ರ ಸರ್ಕಾರದ ಸ್ವಚ್ಛ ಭಾರತ್ ಮಿಷನ್ ಮತ್ತು ರಾಜ್ಯ ಸರ್ಕಾರದ ಗ್ರಾಮೀಣ ಕುಡಿಯುವ ನೀರು ನೈರ್ಮಲ್ಯ ಇಲಾಖೆಯಡಿ ಯೋಜನೆ ರೂಪಿಸಲಾಗಿದೆ. ಘಟಕ ನಿರ್ಮಾಣಕ್ಕೆ ಕೇಂದ್ರ ಸರ್ಕಾರ ಶೇಕಡ 70, ರಾಜ್ಯ ಸರ್ಕಾರ ಶೇ.30 ಅನುದಾನ ನೀಡಿದೆ ಎಂದರು.
ಯಲಹಂಕ ಕ್ಷೇತ್ರ ಶಾಸಕ ಹಾಗೂ ಬಿಡಿಎ ಅಧ್ಯಕ್ಷ ಎಸ್.ಆರ್.ವಿಶ್ವನಾಥ್, ರಾಜಾನುಕುಂಟೆ ಗ್ರಾಮ ಪಂಚಾಯಿತಿ ಅಧ್ಯಕ್ಷ ವೀರಣ್ಣ, ಯಲಹಂಕ ತಾಲೂಕು ಬಿಜೆಪಿ ಅಧ್ಯಕ್ಷ ಹನುಮಯ್ಯ, ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ದಿಬ್ಬೂರು ಜಯಣ್ಣ, ಪಿಡಿಒ ರಾಜೇಶ್, ಇಟಕಲ್‌ಪುರ ಮೋಹನ್, ಮುಖಂಡರಾದ ಅದ್ದೆವಿಶ್ವನಾಥ್‌ಪುರದ ಮಂಜುನಾಥ್ ಹಾಜರಿದ್ದರು.
ಬಕ್ರೀದ್‌ಗೆ ರಸ್ತೆಯಲ್ಲಿ ಪ್ರಾರ್ಥನೆಗೆ ಅವಕಾಶ ಇಲ್ಲ: ಬಿಬಿಎಂಪಿ ಸ್ಪಷ್ಟನೆ
ಗ್ರಾಪಂ ಮಟ್ಟದ ಮೊದಲ ಘಟಕ: ಯಲಹಂಕ ತಾಲೂಕು ವ್ಯಾಪ್ತಿಯ ನಾಲ್ಕೈದು ಗ್ರಾಮ ಪಂಚಾಯಿತಿಗಳನ್ನು ಕೇಂದ್ರೀಕರಿಸಿ ಮಲ ತ್ಯಾಜ್ಯ ಸಂಸ್ಕರಣಾ ಘಟಕ ಸ್ಥಾಪಿಸಲಾಗಿದೆ. ಇದು ದೇಶದಲ್ಲೇ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ನಿರ್ಮಾಣವಾಗಿರುವ ಮೊದಲ ಘಟಕವಾಗಿದೆ. ಆಧುನಿಕ ಯಂತ್ರಗಳ ಮೂಲಕ ಮನೆಗಳ ಶೌಚಾಲಯದ ಮಲ ತ್ಯಾಜ್ಯವನ್ನು ಸಂಗ್ರಹಿಸಿ ವಾಹನಗಳ ಮೂಲಕ ಮಲತ್ಯಾಜ್ಯ ಸಂಸ್ಕರಣಾ ಘಟಕಕ್ಕೆ ರವಾನಿಸಿ ಬಳಿಕ ಘಟಕದಲ್ಲಿ ಯಂತ್ರಗಳ ಮೂಲಕ ತ್ಯಾಜ್ಯವನ್ನು ಬೇರ್ಪಡಿಸಿ ಗೊಬ್ಬರವನ್ನು ತಯಾರಿಸಲಾಗುತ್ತದೆ. ಇಲ್ಲಿ ತಯಾರಾಗುವ ಗೊಬ್ಬರವನ್ನು ಬೆಳೆಗಳಿಗೂ ಉಪಯೋಗಿಸಬಹುದು ಎಂದು ಬೆಂಗಳೂರು ನಗರ ಜಿಲ್ಲಾ ಪಂಚಾಯಿತಿ ಸಿಇಒ ಸಂಗಪ್ಪ ತಿಳಿಸಿದರು.
