ಧಾರವಾಡ (ಫೆ.05): ಮಹಿಳೆಯ ಹೆಸರಲ್ಲಿ ನಕಲಿ ಫೇಸ್‌ಬುಕ್‌ ಖಾತೆ ತೆರೆದು ಮೋಸಮಾಡಿ ಹುಬ್ಬಳ್ಳಿ ತಾಲೂಕಿನ ಗುತ್ತಿಗೆದಾರನಿಂದ ಸುಮಾರು  15 ಲಕ್ಷಕ್ಕೂ ಹೆಚ್ಚು ಹಣ ಪಡೆದಿದ್ದ ಹಾಸನ ಮೂಲದ ವ್ಯಕ್ತಿಯನ್ನು ಸೈಬರ್‌, ಆರ್ಥಿಕ ಮತ್ತು ಮಾದಕ ದ್ರವ್ಯ ಅಪರಾಧ ಪೊಲೀಸರು ಬಂಧಿಸಿದ್ದಾರೆ.

ಹಾಸನ ತಾಲೂಕಿನ ದೊಡ್ಡಗಿಣಿಗೇರೆ ಗ್ರಾಮದ 29 ವರ್ಷದ ಆರೋಪಿ ಪ್ರತಾಪ್‌ ಡಿ.ಎಂ.ಸುಷ್ಮಾ (ಸುಸು) ಹೆಸರಿನಲ್ಲಿ ನಕಲಿ ಫೇಸ್‌ಬುಕ್‌ ಖಾತೆ ತೆರೆದು ಹುಬ್ಬಳ್ಳಿ ತಾಲೂಕಿನ ಗಂಗಿವಾಳ ಗ್ರಾಮದ ರುದ್ರಗೌಡ ಮಲ್ಲನಗೌಡ ಪಾಟೀಲ ಎಂಬ ಗುತ್ತಿಗೆದಾರನಿಗೆ ಫ್ರೆಂಡ್‌ ರಿಕ್ವೆಸ್ಟ್‌ ಕಳುಹಿಸಿ ಫೇಸ್‌ಬುಕ್‌ ಮೂಲಕ ಪರಿಚಯ ಮಾಡಿಕೊಂಡು 2017ರಲ್ಲಿ ವಾಟ್ಸ್‌ಆ್ಯಪ್‌ ನಂಬರ್‌ ಪಡೆದು 3 ವರ್ಷಗಳಿಂದ ರುದ್ರಗೌಡ ಪಾಟೀಲ ಜತೆಗೆ ಚಾಟಿಂಗ್‌ ಮಾಡಿದ್ದಾನೆ. 

ಬೇರೆ ಹೆಣ್ಣುಗಳು ಬೇಕು : ಹೆಂಡ್ತಿ ಮುಖ ಕಂಡರಾಗದ ಸಾಫ್ಟ್‌ವೇರ್ ಗಂಡನಿಂದ ಬೇಸತ್ತು ಸೂಸೈಡ್ ...

3 ವರ್ಷಗಳ ಚಾಟಿಂಗ್‌ ಸಮಯದಲ್ಲಿ ಆರೋಪಿ, ರುದ್ರಗೌಡನಿಗೆ ತಾನು ಮೂಕಿ, ಕಿವುಡಿ ಇರುತ್ತೇನೆ ಎಂದು ಮೆಸೇಜ್‌ ಮಾಡುತ್ತಾ ನಾನು ನಿಮ್ಮನ್ನು ಪ್ರೀತಿಸುತ್ತೇನೆ, ಮದುವೆಯಾಗುತ್ತೇನೆ ಎಂದು ನಂಬಿಸಿದ್ದಾನೆ. ರುದ್ರಗೌಡನಿಂದ ಆರೋಪಿ ಪ್ರತಾಪ್‌ ತನಗೆ ಹಾಗೂ ತನ್ನ ಪರಿಚಯಸ್ಥ 8-10 ಜನರ ಬ್ಯಾಂಕ್‌ ಖಾತೆಗಳಿಗೆ ಸುಮಾರು 14 ರಿಂದ 15 ಲಕ್ಷ ಹಾಕಿಸಿಕೊಂಡು ಮೋಸ ಮಾಡಿದ್ದಾನೆ ಎಂದು 2019ರ ಡಿಸೆಂಬರ್‌ 9ರಂದು ಪೊಲೀಸ್‌ ಠಾಣೆಗೆ ದೂರು ದಾಖಲಿಸಿದ್ದರು. ಆರೋ​ಪಿ​ಯಿಂದ .1.25 ಲಕ್ಷ ವಶಪಡಿಸಿಕೊಂಡಿದ್ದಾರೆ.