ಖ್ಯಾತ ವಕೀಲ ಹಾಗೂ ಬೆಂಬಲಿಗರು ಕಾಂಗ್ರೆಸ್‌ ಸೇರ್ಪಡೆ

ಪಕ್ಷಕ್ಕೆ ಬಂದವರೆಲ್ಲಾ ನಮ್ಮ ಕುಟುಂಬ ಸದಸ್ಯರಿದ್ದಂತೆ. ಹಿರಿಯ ಮುಖಂಡರಾದ ಖ್ಯಾತ ವಕೀಲ ಭಗವಂತಪ್ಪ, ಮಾಜಿ ಗ್ರಾಪಂ ಅಧ್ಯಕ್ಷ ವಿ.ಚಿಂತಲರೆಡ್ಡಿ, ಮಾಜಿ ಜಿಪಂ ಸದಸ್ಯ ಎಸ್‌.ಟಿ.ನಾಗರಾಜ್‌ ಇತರೆ ಅಪಾರ ಸಂಖ್ಯೆಯ ಬೆಂಬಲಿಗರು ಜೆಡಿಎಸ್‌ ತೊರೆದು ಕಾಂಗ್ರೆಸ್‌ ಸೇರ್ಪಡೆಯಾಗಿದ್ದು ಸಂತಸ ತಂದಿದೆ. ಅವರಿಗೆ ಪಕ್ಷದಲ್ಲಿ ವಿಶೇಷ ಸ್ಥಾನಮಾನ ಕಲ್ಪಿಸುವುದಾಗಿ ಶಾಸಕ ವೆಂಕಟರಮಣಪ್ಪ ಭರವಸೆ ವ್ಯಕ್ತಪಡಿಸಿದರು.

Famous lawyers and supporters join the Congress snr

  ಪಾವಗಡ:  ಪಕ್ಷಕ್ಕೆ ಬಂದವರೆಲ್ಲಾ ನಮ್ಮ ಕುಟುಂಬ ಸದಸ್ಯರಿದ್ದಂತೆ. ಹಿರಿಯ ಮುಖಂಡರಾದ ಖ್ಯಾತ ವಕೀಲ ಭಗವಂತಪ್ಪ, ಮಾಜಿ ಗ್ರಾಪಂ ಅಧ್ಯಕ್ಷ ವಿ.ಚಿಂತಲರೆಡ್ಡಿ, ಮಾಜಿ ಜಿಪಂ ಸದಸ್ಯ ಎಸ್‌.ಟಿ.ನಾಗರಾಜ್‌ ಇತರೆ ಅಪಾರ ಸಂಖ್ಯೆಯ ಬೆಂಬಲಿಗರು ಜೆಡಿಎಸ್‌ ತೊರೆದು ಕಾಂಗ್ರೆಸ್‌ ಸೇರ್ಪಡೆಯಾಗಿದ್ದು ಸಂತಸ ತಂದಿದೆ. ಅವರಿಗೆ ಪಕ್ಷದಲ್ಲಿ ವಿಶೇಷ ಸ್ಥಾನಮಾನ ಕಲ್ಪಿಸುವುದಾಗಿ ಶಾಸಕ ವೆಂಕಟರಮಣಪ್ಪ ಭರವಸೆ ವ್ಯಕ್ತಪಡಿಸಿದರು.

ನಗರದ ನವನೀತ ಕನ್ವೆಂಕ್ಷನ್‌ ಹಾಲ್‌ನಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಖ್ಯಾತ ವಕೀಲ ಭಗವಂತಪ್ಪ ನೇತೃತ್ವದ ನೂರಾರು ಮಂದಿ ಬೆಂಬಲಿಗರನ್ನು ಕಾಂಗ್ರೆಸ್‌ಗೆ ಸೇರ್ಪಡೆ ಮಾಡಿಕೊಂಡ ಬಳಿಕ ಮಾತನಾಡಿದರು.

ನಮ್ಮ ಪಕ್ಷ, ಶಿಸ್ತು ಬದ್ದತೆ ಹೊಂದಿದ್ದು. ಹಳಬರು ಹಾಗೂ ಹೊಸಬರೆಂದು ತಾರತಮ್ಯ ಮಾಡದೇ ಪಕ್ಷಕ್ಕೆ ಬಂದ ಎಲ್ಲರನ್ನು ಸಮಾನವಾಗಿ ಕಾಣಲಾಗುವುದು. ನೂತನವಾಗಿ ಸೇರ್ಪಡೆಯಾದ ಮುಖಂಡ ಮತ್ತು ಕಾರ್ಯಕರ್ತರಿಗೆ ವಿಶೇಷ ಸ್ಥಾನಮಾನ ಹಾಗೂ ಗೌರವ ನೀಡಲಾಗುತ್ತದೆ ಎಂದರು.

ತಾ.ಕಾಂಗ್ರೆಸ್‌ ಅಧ್ಯಕ್ಷ ಎಚ್‌.ವಿ.ವೆಂಕಟೇಶ್‌ ಮಾತನಾಡಿ, ಹಿರಿಯ ಮುಖಂಡ ವಕೀಲರಾದ ಭಗವಂತಪ್ಪ ಅಣ್ಣನವರು ಒಂದು ಶಕ್ತಿ ಇದ್ದಂತೆ. ಇಲ್ಲಿ ಎರಡು ಬಾರಿ ಜೆಡಿಎಸ್‌ ಅಧಿಕಾರಕ್ಕೆ ತರುವಲ್ಲಿ ಅವರ ಪಾತ್ರ ಹೆಚ್ಚಿದೆ. ಅವರ ಸೇರ್ಪಡೆ ಕಾಂಗ್ರೆಸ್‌ಗೆ ಮತ್ತಷ್ಟುಬಲ ತಂದಿದ್ದು ಅವರ ಸಹಕಾರಕ್ಕೆ ಋುಣಿಯಾಗಿದ್ದೇನೆ ಎಂದರು.

ವಕೀಲ ಭಗವಂತಪ್ಪ ಮಾತನಾಡಿ, ನಾನು ಜೆಡಿಎಸ್‌ ಮುಖಂಡನಾಗಿ ಸೇವೆ ಸಲ್ಲಿಸಿದ್ದು, ನಮ್ಮಂಥವರು ಜೆಡಿಎಸ್‌ಗೆ ಬೇಕಿಲ್ಲ. ಅವರೇ ನಮ್ಮನ್ನು ಪಕ್ಷದಿಂದ ದೂರವಿಟ್ಟಿದ್ದಾರೆ. ಅಲ್ಲಿ ನಮ್ಮಂಥವರಿಗೆ ಅದ್ಯತೆ ಇಲ್ಲ. ಜೆಡಿಎಸ್‌ನ ಮಾಜಿ ತಿಮ್ಮರಾಯಪ್ಪ ನಮ್ಮನ್ನು ಕಡೆಗಾಣಿಸಿದ್ದು ನಮ್ಮಿಂದ ಅವರಿಗೆ ತೊಂದರೆ ಆಗಬಾರದೆಂದು ಜೆಡಿಎಸ್‌ ತೊರೆದು ಕಾಂಗ್ರೆಸ್‌ ಸೇರ್ಪಡೆಯಾಗಿದ್ದೇವೆ ಎಂದರು.

ಮುಖಂಡ ಮಾರಪ್ಪ ಮಾತನಾಡಿ, ಭಾನುವಾರ ತಾ. ಗುಜ್ಜನಡು ಗ್ರಾಮದಲ್ಲಿ ನೂರಾರು ಮಂದಿ ಕಾಂಗ್ರೆಸ್‌ ಸೇರ್ಪಡಯಾಗಲಿರುವುದಾಗಿ ತಿಳಿಸಿದರು.

ಇದೇ ವೇಳೆ ನೂರಾರು ಮಂದಿ ಜೆಡಿಎಸ್‌ ತೊರೆದು ಕಾಂಗ್ರೆಸ್‌ ಸೇರ್ಪಡೆಯಾಗಿದ್ದು. ತಾ.ಕಾಂಗ್ರೆಸ್‌ ಅಧ್ಯಕ್ಷ ಸುದೇಶ್‌ಬಾಬು, ಮಹಮದ್‌ ಇಮ್ರಾನ್‌, ಮುಖಂಡರಾದ ಎ.ಶಂಕರರೆಡ್ಡಿ, ವಿ.ಚಿಂತಲರೆಡ್ಡಿ, ಎಸ್‌.ಟಿ.ನಾಗರಾಜ್‌, ಮಾಜಿ ತಾಪಂ ಸದಸ್ಯ ಆನಂದ್‌, ಓಬಳಾಪುರ ರಮಣರೆಡ್ಡಿ, ದವಡಬೆಟ್ಟಮಾರಪ್ಪ ಎಂ.ಎಸ್‌.ವಿಶ್ವನಾಥ್‌, ಮಾಜಿ ಪುರಸಭೆ ಅಧ್ಯಕ್ಷ ವೇಲುರಾಜ್‌, ರಾಜ್ಯ ಅಲ್ಪ ಸಂಖ್ಯಾತರ ಘಟಕದ ಷಾಬಾಬು, ಪುರಸಭೆ ಸದಸ್ಯರಾದ ಪಿ.ಎಚ್‌.ರಾಜೇಶ್‌, ರವಿ, ಬಾಲಸುಬ್ರಣ್ಯಂ, ಚಿತ್ತಗಾನಹಳ್ಳಿ ಚಂದ್ರು ಹಾಗೂ ಇತರೆ ಆನೇಕ ಮಂದಿ ಮುಖಂಡರು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.

ಕಾಂಗ್ರೆಸ್‌ಗೆ ಮತ ನೀಡಿದರೆ ಸಿದ್ದರಾಮಯ್ಯ ಸಿಎಂ

ಗಂಗಾವತಿ(ಏ.06): ಕಾಂಗ್ರೆಸ್‌ ಪಕ್ಷಕ್ಕೆ ಮತ ಹಾಕಿದರೆ ರಾಜ್ಯದಲ್ಲಿ ಮತ್ತೆ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗುವುದು ಖಚಿತ ಎಂದು ಮಾಜಿ ಸಚಿವ ಇಕ್ಬಾಲ್‌ ಅನ್ಸಾರಿ ಹೇಳಿದರು. ತಾಲೂಕಿನ ಹಂಪಸದುರ್ಗಾದಲ್ಲಿ ಜರುಗಿದ ಚುನಾವಣೆ ಬಹಿರಂಗ ಸಭೆಯಲ್ಲಿ ಮಾತನಾಡಿದ ಅವರು, ಈಗಾಗಲೇ ರಾಜ್ಯದಲ್ಲಿ ಕಾಂಗ್ರೆಸ್‌ ಪರ ಅಲೆ ಇದ್ದು, ಗಂಗಾವತಿ ವಿಧಾನಸಭಾ ಕ್ಷೇತ್ರದಲ್ಲಿ ತಾವು ಸ್ಪರ್ಧಿಸುತ್ತಿದ್ದು, ನನಗೆ ಮತ ಹಾಕಿ ಬೆಂಬಲಿಸಿ ಸಿದ್ದರಾಮಯ್ಯ ಅವರ ಕೈ ಬಲಪಡಿಸಿದರೆ ಮುಖ್ಯಮಂತ್ರಿ ಆಗುವುದರಲ್ಲಿ ಸಂದೇಹ ಇಲ್ಲ ಎಂದರು.

ಈ ಹಿಂದೆ ಸಿದ್ದರಾಮಯ್ಯ ಸಿಎಂ ಆಗಿದ್ದ ಸಂದರ್ಭದಲ್ಲಿ ಹಲವಾರು ಯೋಜನೆ ಅನುಷ್ಟಾನಗೊಳಿಸಿದ ಕೀರ್ತಿ ಅವರಿಗೆ ಸಲ್ಲುತ್ತದೆ. ಮತ್ತೇ ಮುಖ್ಯಮಂತ್ರಿ ಆದರೆ ಹಲವಾರು ಯೋಜನೆ ಕಾರ್ಯಗತಗೊಳಿಸುತ್ತಾರೆ ಎಂದರು.

ಈ ಭಾರಿ ಚುನಾವಣೆಗೆ ಬಳ್ಳಾರಿಯಿಂದ ಬಂದಿದ್ದಾರೆ, ಈಗಾಗಲೇ ಲೂಟಿ ಮಾಡಿ ಸಾಕಷ್ಟುಹೆಸರು ಪಡೆದಿದ್ದಾರೆ.ಇಂತವರು ಇಲ್ಲಿ ಇರಲಿಕ್ಕೆ ಸಾಧ್ಯಇಲ್ಲ. ಸರ್ಕಾರದ ಸಂಪತ್ತು ನಮ್ಮ ಸಂಪತ್ತು ಆಗಿದೆ.ಇಂತಹ ಸರ್ಕಾರದ ಲೂಟಿ ಮಾಡಿ ಈಗ ಗಂಗಾವತಿಗೆ ಬಂದಿದ್ದಾರೆ. ಇವರಿಂದ ಅಭಿವೃದ್ಧಿ ಹೇಗೆ ಸಾಧ್ಯ ಎಂದರು. ಈ ಸಂದರ್ಭದಲ್ಲಿ ಹಲವಾರು ಮುಖಂಡರು ಬಿಜೆಪಿ ತೊರೆದು ಕಾಂಗ್ರೆಸ್‌ ಸೇರ್ಪಡೆಯಾದರು.

ಕಾಂಗ್ರೆಸ್ಸಿನವರಿಗೆ ಗುಂಡಿಗೆನೂ ಇಲ್ಲ, ಗಂಡಸ್ತನವೂ ಇಲ್ಲ: ಸಚಿವ ಆನಂದ್‌ ಸಿಂಗ್‌ ವಿವಾದಾತ್ಮಕ ಹೇಳಿಕೆ

ರೋಡ್‌ ಶೋ:

ಹಂಪಸ ದುರ್ಗಾದಲ್ಲಿ ಮಾಜಿ ಸಚಿವ ಇಕ್ಬಾಲ್‌ ಅನ್ಸಾರಿ ರೋಡ್‌ ಶೋ ನಡೆಸಿದರು.ತೆರೆದ ವಾಹನದಲ್ಲಿ ಮೆರವಣಿಗೆ ಮೂಲಕ ಗ್ರಾಮದಲ್ಲಿ ಮತ ಯಾಚಿಸಿದರು. ಅಸಂಖ್ಯಾತ ಮಹಿಳೆಯರು,ಯುವಕರು ಜೈ ಘೋಷ ಹಾಕಿದರು.

ಕರ್ನಾಟಕದಲ್ಲಿ ಒಂದೇ ಹಂತದಲ್ಲಿ ಮೇ 10ರಂದು ಮತದಾನ ನಡೆಯಲಿದ್ದು, ಮೇ 13ಕ್ಕೆ ಮತ ಎಣಿಕೆ ನಡೆಯಲಿದೆ. ಏಪ್ರಿಲ್ 13ಕ್ಕೆ ಚುನಾವಣೆ ಅಧಿಸೂಚನೆ ಹೊರಡಿಸಲಿದ್ದು, ಏಪ್ರಿಲ್ 13ರಿಂದ ನಾಮಪತ್ರ ಸಲ್ಲಿಕೆ ಆರಂಭವಾಗಲಿದೆ. ನಾಮಪತ್ರ ಹಿಂಪಡೆಯಲು ಏಪ್ರಿಲ್ 24 ಕಡೆಯ ದಿನಾಂಕ.

Latest Videos
Follow Us:
Download App:
  • android
  • ios