Asianet Suvarna News Asianet Suvarna News

ಕಲಬುರಗಿ: ಸಾಲದ ಬಾಧೆ ತಾಳಲಾರದೆ ಬಾವಿಗೆ ಹಾರಿ ಪ್ರಾಣಬಿಟ್ಟ ಅನ್ನದಾತ

ಅನ್ನದಾತ ಸಾಲ ಮರುಪಾವತಿ ಮಾಡಲಾಗದೆ ಆತ್ಮಹತ್ಯೆಗೆ ಶರಣಾದ ರೈತ| ಕಲಬುರಗಿ ಜಿಲ್ಲೆಯ ಅಫಜಲಪುರ ತಾಲೂಕಿನ ಕೊಳ್ಳೂರ ಗ್ರಾಮದಲ್ಲಿ ನಡೆದ ಘಟನೆ| ಮೂರು ದಿನಗಳ ಹಿಂದೆ ನಾಪತ್ತೆಯಾಗಿದ್ದ ರೈತ ಇಂದು ಶವವಾಗಿ ಪತ್ತೆ| 

Farmer Committed Suicide in Kalaburagi District grg
Author
Bengaluru, First Published Dec 6, 2020, 12:55 PM IST

ಕಲಬುರಗಿ(ಡಿ.06): ಆತ್ಮಹತ್ಯೆ ಮಾಡಿಕೊಳ್ಳುವ ರೈತರು ಹೇಡಿಗಳು ಎಂದು ಕೃಷಿ ಸಚಿವ ಬಿ.ಸಿ. ಪಾಟೀಲ್‌ ಅವರ ವಿವಾದಾತ್ಮಕ ಹೇಳಿಕೆ ಮಾಸುವ ಮುನ್ನವೇ ಮತ್ತೊಬ್ಬ ಅನ್ನದಾತ ಸಾಲ ಮರುಪಾವತಿ ಮಾಡಲಾಗದೆ ಆತ್ಮಹತ್ಯೆ ಮಾಡಿಕೊಂಡ ಘಟನೆ ರಾಜ್ಯದಲ್ಲಿ ನಡೆದಿದೆ.

ಹೌದು, ಸಾಲದ ಬಾಧೆ ತಾಳಲಾರದೆ ಬಾವಿಗೆ ಹಾರಿ ರೈತನೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ಜಿಲ್ಲೆ ಅಫಜಲಪುರ ತಾಲೂಕಿನ ಕೊಳ್ಳೂರ ಗ್ರಾಮದಲ್ಲಿ ಇಂದು(ಭಾನುವಾರ) ನಡೆದಿದೆ. ಮಾದೇವಪ್ಪ ಶಿವಪ್ಪ ಪೂಜಾರಿ(65) ಆತ್ಮಹತ್ಯೆ ಮಾಡಿಕೊಂಡ ರೈತನಾಗಿದ್ದಾನೆ. 

ರಾಜ್ಯ ಬಿಜೆಪಿ ಈಗ ಒಡೆದ ಮನೆ: ಪ್ರಿಯಾಂಕ್‌ ಖರ್ಗೆ

ಕೃಷಿ ಚಟುವಟಿಕೆಗಾಗಿ ಮಾದೇವಪ್ಪ ಶಿವಪ್ಪ ಪೂಜಾರಿ ಕೆಜಿಬಿ ಬ್ಯಾಂಕಿನಲ್ಲಿ 3 ಲಕ್ಷ ಹಾಗೂ ಖಾಸಗಿ ಸಾಲ ಮಾಡಿಕೊಂಡಿದ್ದ ಎಂದು ಹೇಳಲಾಗುತ್ತಿದೆ. ಸಾಲ ಮರುಪಾವತಿ ಮಾಡಲಾಗದೆ ನೊಂದು ಆತ್ಮಹತ್ಯೆಗೆ ಶರಣಾಗಿದ್ದಾನೆ. ಕಳೆದ ಮೂರು ದಿನಗಳ ಹಿಂದೆ ರೈತ ಮಾದೇವಪ್ಪ ಶಿವಪ್ಪ ಪೂಜಾರಿ ನಾಪತ್ತೆಯಾಗಿದ್ದು ಇಂದು ಶವವಾಗಿ ಪತ್ತೆಯಾಗಿದ್ದಾನೆ. ಈ ಸಂಬಂಧ ಅಫಜಲಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

ಆತ್ಮಹತ್ಯೆ ಮಾಡಿಕೊಳ್ಳುವ ರೈತರು ಹೇಡಿಗಳು ಎಂದು ಕೃಷಿ ಸಚಿವ ಬಿ.ಸಿ. ಪಾಟೀಲ್‌ ಅವರ ವಿವಾದಾತ್ಮಕ ಹೇಳಿಕೆ ಮಾಸುವ ಮುನ್ನವೇ ಮತ್ತೊಬ್ಬ ಅನ್ನದಾತ ಸಾಲ ಮರುಪಾವತಿ ಮಾಡಲಾಗದೆ ಆತ್ಮಹತ್ಯೆ ಮಾಡಿಕೊಂಡ ಘಟನೆ ರಾಜ್ಯದಲ್ಲಿ ನಡೆದಿದೆ.
 

Follow Us:
Download App:
  • android
  • ios