MYsuru : ನ. 2 ರಂದು ರೈತ-ದಲಿತ- ಕಾರ್ಮಿಕರ ಸಮಾವೇಶ
ಬಂಡವಾಳ ಹೂಡಿಕೆದಾರರ ಸಮಾವೇಶ ವಿರೋಧಿಸಿ ಬೆಂಗಳೂರಿನ ಸ್ವಾತಂತ್ರ್ಯ ಹೋರಾಟಗಾರರ ಉದ್ಯಾನವನದಲ್ಲಿ ನ. 2 ರಂದು ಸಮಾವೇಶ ಹಮ್ಮಿಕೊಳ್ಳಲಾಗಿದೆ.
ಮೈಸೂರು (ಅ.26): ಬಂಡವಾಳ ಹೂಡಿಕೆದಾರರ ಸಮಾವೇಶ ವಿರೋಧಿಸಿ ಬೆಂಗಳೂರಿನ ಸ್ವಾತಂತ್ರ್ಯ ಹೋರಾಟಗಾರರ ಉದ್ಯಾನವನದಲ್ಲಿ ನ. 2 ರಂದು ಸಮಾವೇಶ ಹಮ್ಮಿಕೊಳ್ಳಲಾಗಿದೆ.
ಉದ್ಯೋಗ (job) ಸೃಷ್ಟಿನೆಪದಲ್ಲಿ ರಾಜ್ಯದ (Karnataka) ಫಲವತ್ತಾದ ಕೃಷಿ ಭೂಮಿ, ನೀರು, ವಿದ್ಯುತ್ ಅನ್ನು ಕಾರ್ಪೊರೇಟ್ ಕಂಪನಿಗಳಿಗೆ ದಾರೆ ಎರೆಯಲು ಹಾಗೂ ರಾಜ್ಯದ ಕಾರ್ಮಿಕ ಕಾಯ್ದೆಗಳಿಗೆ ತಿದ್ದುಪಡಿ ತಂದು ಕಾರ್ಮಿಕರನ್ನು ಕಾರ್ಪೊರೇಟ್ ಕಂಪನಿಗಳ ಗುಲಾಮರನ್ನಾಗಿ ಮಾಡುವ ಉದ್ದೇಶದಿಂದ ರಾಜ್ಯ ಸರ್ಕಾರ ನಡೆಸುತ್ತಿರುವ ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶವನ್ನು ವಿರೋಧಿಸಿ ರೈತರು, ದಲಿತರು, ಕಾರ್ಮಿಕರು ಮತ್ತು ನಾಗರೀಕರ ಬೃಹತ್ ಪ್ರತಿಭಟನಾ ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದು ಸಂಘದ ಅಧ್ಯಕ್ಷ ಬಡಗಲಪುರ ನಾಗೇಂದ್ರ ಸುದ್ದಿಗೋಷ್ಠಿಯಲ್ಲಿ ಮಂಗಳವಾರ ತಿಳಿಸಿದರು.
ಜಾಗತಿಕ ಬಂಡಾವಳ ಹೂಡಿಕೆದಾರರ ಸಮಾವೇಶ ನಮ್ಮ ರಾಜ್ಯಕ್ಕೆ ಹೊಸದಲ್ಲ. ಈ ಹಿಂದೆಯು ಇಂತಹ ಸಮಾವೇಶ ನಡೆದಿದೆ. ಸಾಮಾನ್ಯವಾಗಿ ಚುನಾವಣೆ ಸಮೀಪವಿದ್ದಾಗ ಇಂತಹ ಸಮಾವೇಶ ಸಂಘಟಿಸಿ, ಇಷ್ಟಲಕ್ಷ ಕೋಟಿ ಬಂಡಾವಳ ಹೂಡಿಕೆಯಾಗುತ್ತಿದೆ. ಇದರ ಫಲವಾಗಿ ಉದ್ಯೋಗ ಸೃಷ್ಟಿಯಾಗುತ್ತದೆ ಎಂದು ಪ್ರಚಾರ ಪಡೆಯಲಾಗುತ್ತದೆ. ಇದು ಜನ ಸಾಮಾನ್ಯರಲ್ಲಿ ಭ್ರಮೆಯನ್ನು ಸೃಷ್ಟಿಸುತ್ತದೆ. ಬಹುತೇಕ ಸಂದರ್ಭದಲ್ಲಿ ಇದು ಸುಳ್ಳಿನ ಪ್ರಚಾರವಾಗಿರುತ್ತದೆ ಎಂದು ಅವರು ತಿಳಿಸಿದರು.
ಉದ್ಯೋಗ ಸೃಷ್ಟಿನೆಪದಲ್ಲಿ ರಾಜ್ಯದ ಫಲವತ್ತಾದ ಕೃಷಿ ಭೂಮಿ, ನೀರು, ವಿದ್ಯುತ್ತನ್ನು ಖಾಸಗಿ ಕಂಪನಿಗಳಿಗೆ ನೀಡಲು ನಡೆಸುತ್ತಿರುವ ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶ ವಿರೋಧಿಸುತ್ತೇವೆ. ವಾಸ್ತವದಲ್ಲಿ ಇಂತಹ ಹೂಡಿಕೆದಾರರ ಸಮಾವೇಶಗಳಿಂದ ರಾಜ್ಯದ ಅಭಿವೃದ್ಧಿ, ಉದ್ಯೋಗ ಸೃಷ್ಟಿಗೆ ಅನುಕೂಲವಾಗುವ ಬದಲು ಕಾರ್ಪೊರೇಟ್ ಕಂಪನಿಗಳು, ಏಜೆಂಟರಿಗೆ ಲಾಭವಾಗುತ್ತದೆ. ಅಲ್ಲದೆ, ಒಂದು ಕಡೆ ರೈತರು ತಮ್ಮ ಭೂಮಿ ಕಳೆದುಕೊಳ್ಳುತ್ತಾರೆ. ಕಾರ್ಮಿಕರ ಶೋಷಣೆ ಇನ್ನಷ್ಟುಹೆಚ್ಚುತ್ತದೆ ಎಂದು ಅವರು ದೂರಿದರು.
ಹೀಗಾಗಿ ಇಂತಹ ಹೂಡಿಕೆದಾರರ ಸಮಾವೇಶ ಅಗತ್ಯವಿಲ್ಲ. ಬಲಾತ್ಕಾರವಾಗಿ ಭೂಮಿ ಕಸಿದುಕೊಳ್ಳಬಾರದು, ರೈತರು, ದಲಿತರ ಸ್ವಾಧೀನದಲ್ಲಿರುವ ಕೃಷಿ ಭೂಮಿ ಸಕ್ರಮಗೊಳಿಸಬೇಕು, ಅತಿವೃಷ್ಟಿಯಿಂದ ನಷ್ಟಕ್ಕೆ ಗುರಿಯಾದವರಿಗೆ ಕೂಡಲೇ ಸೂಕ್ತ ಪರಿಹಾರ ನೀಡಬೇಕು, ವಿದ್ಯುತ್ ಕ್ಷೇತ್ರದ ಖಾಸಗೀಕರಣ ನಿಲ್ಲಬೇಕು, ಕಾರ್ಪೊರೇಟ್ ಕಂಪನಿಗಳಿಗೆ ಅನುಕೂಲವಾಗುವಂತೆ ಕಾರ್ಮಿಕ ಕಾಯ್ದೆಗಳಿಗೆ ತಿದ್ದುಪಡಿ ತರಬಾರದು ಎಂದು ಒತ್ತಾಯಿಸಿ ಹಾಗೂ ಕೇಂದ್ರ, ರಾಜ್ಯ ಸರ್ಕಾರಗಳ ರೈತ, ಕಾರ್ಮಿಕ ವಿರೋಧಿ ನೀತಿಗಳ ವಿರುದ್ಧ ಪ್ರತಿಭಟನಾ ಸಮಾವೇಶ ಹಮ್ಮಿಕೊಳ್ಳಲಾಗುತ್ತಿದೆ ಎಂದು ಅವರು ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಜಿಲ್ಲಾಧ್ಯಕ್ಷ ಹೊಸೂರು ಕುಮಾರ್, ಕಾರ್ಯದರ್ಶಿ ಹೊಸಕೋಟೆ ಬಸವರಾಜು, ಪಿ. ಮರಂಕಯ್ಯ ಇದ್ದರು.
- ಬಂಡವಾಳ ಹೂಡಿಕೆದಾರರ ಸಮಾವೇಶ ವಿರೋಧಿಸಿ ಬೆಂಗಳೂರಿನ ಸ್ವಾತಂತ್ರ್ಯ ಹೋರಾಟಗಾರರ ಉದ್ಯಾನವನದಲ್ಲಿ ನ. 2 ರಂದು ಸಮಾವೇಶ ಹಮ್ಮಿಕೊಳ್ಳಲಾಗಿದೆ.
- ಉದ್ಯೋಗ ಸೃಷ್ಟಿನೆಪದಲ್ಲಿ ರಾಜ್ಯದ ಫಲವತ್ತಾದ ಕೃಷಿ ಭೂಮಿ, ನೀರು, ವಿದ್ಯುತ್ ಅನ್ನು ಕಾರ್ಪೊರೇಟ್ ಕಂಪನಿಗಳಿಗೆ ದಾರೆ ಎರೆಯಲು ಹಾಗೂ ರಾಜ್ಯದ ಕಾರ್ಮಿಕ ಕಾಯ್ದೆಗಳಿಗೆ ತಿದ್ದುಪಡಿ
- ಕಾರ್ಮಿಕ ಕಾಯ್ದೆಗಳಿಗೆ ತಿದ್ದುಪಡಿ ತಂದು ಕಾರ್ಮಿಕರನ್ನು ಕಾರ್ಪೊರೇಟ್ ಕಂಪನಿಗಳ ಗುಲಾಮರನ್ನಾಗಿ ಮಾಡುವ ಉದ್ದೇಶ
- ರಾಜ್ಯ ಸರ್ಕಾರ ನಡೆಸುತ್ತಿರುವ ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶವನ್ನು ವಿರೋಧಿಸಿ ರೈತರು, ದಲಿತರು, ಕಾರ್ಮಿಕರು ಮತ್ತು ನಾಗರೀಕರ ಬೃಹತ್ ಪ್ರತಿಭಟನಾ ಸಮಾವೇಶ
- ಜನ ಸಾಮಾನ್ಯರಲ್ಲಿ ಭ್ರಮೆಯನ್ನು ಸೃಷ್ಟಿಸುತ್ತದೆ. ಬಹುತೇಕ ಸಂದರ್ಭದಲ್ಲಿ ಇದು ಸುಳ್ಳಿನ ಪ್ರಚಾರವಾಗಿರುತ್ತದೆ
- ಜಾಗತಿಕ ಬಂಡಾವಳ ಹೂಡಿಕೆದಾರರ ಸಮಾವೇಶ ನಮ್ಮ ರಾಜ್ಯಕ್ಕೆ ಹೊಸದಲ್ಲ. ಈ ಹಿಂದೆಯು ಇಂತಹ ಸಮಾವೇಶ ನಡೆದಿದೆ.
- ಇಂತಹ ಹೂಡಿಕೆದಾರರ ಸಮಾವೇಶ ಅಗತ್ಯವಿಲ್ಲ. ಬಲಾತ್ಕಾರವಾಗಿ ಭೂಮಿ ಕಸಿದುಕೊಳ್ಳಬಾರದು, ರೈತರು, ದಲಿತರ ಸ್ವಾಧೀನದಲ್ಲಿರುವ ಕೃಷಿ ಭೂಮಿ ಸಕ್ರಮಗೊಳಿಸಬೇಕು