Asianet Suvarna News Asianet Suvarna News

'ಮಹದಾಯಿ ಹೋರಾಟಗಾರರೊಬ್ಬ ಸಿಎಂ ಆಗಿದ್ದು ಸಂತಸ ತಂದಿದೆ'

* ಮಹದಾಯಿ ಯೋಜನೆ ಜಾರಿಗೆ ಸಿಎಂ ಬೊಮ್ಮಾಯಿ ಕ್ರಮಕೈಗೊಳ್ಳಬೇಕು
*  ಬಿಜೆಪಿ ಅಧಿಕಾರಕ್ಕೆ ಬಂದರೆ ಯೋಜನೆಯನ್ನು 6 ತಿಂಗಳಲ್ಲಿ ಪೂರ್ಣಗೊಳಿಸುತ್ತೇನೆ ಎಂದಿದ್ದ ಬೊಮ್ಮಾಯಿ
*  ಅಂದಿನ ಕಾಂಗ್ರೆಸ್‌-ಜೆಡಿಎಸ್‌ ಸಮ್ಮಿಶ್ರ ಸರ್ಕಾರಕ್ಕೆ ಪತ್ರ ಬರೆದಿದ್ದ ಬೊಮ್ಮಾಯಿ
 

Farmer Leader Chandragouda Patil Talks Over CM Basavaraj Bommai grg
Author
Bengaluru, First Published Aug 2, 2021, 2:04 PM IST

ನರಗುಂದ(ಆ.02): ಉತ್ತರ ಕರ್ನಾಟಕ ಭಾಗದ ಮಹದಾಯಿ ಹೋರಾಟಗಾರರೊಬ್ಬರು ಮುಖ್ಯಮಂತ್ರಿಯಾಗಿದ್ದು ಈ ಭಾಗದ ಜನತೆಗೆ ಹರ್ಷ ತಂದಿದೆ ಎಂದು ರೈತ ಮುಖಂಡ ಚಂದ್ರಗೌಡ ಪಾಟೀಲ ಹೇಳಿದ್ದಾರೆ. 

ಅವರು ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಅಂದಿನ ಕಾಂಗ್ರೆಸ್‌-ಜೆಡಿಎಸ್‌ ಸಮ್ಮಿಶ್ರ ಸರ್ಕಾರಕ್ಕೆ ಈಗಿನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ರಕ್ತದಲ್ಲಿ ಪತ್ರ ಬರೆದು ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ಯೋಜನೆಯನ್ನು ಕೇವಲ 6 ತಿಂಗಳಲ್ಲಿ ಪೂರ್ಣಗೊಳಿಸುತ್ತೇನೆ ಎಂದು ಹೇಳಿದ್ದರು. 

ನರಗುಂದ: 7ನೇ ವರ್ಷಕ್ಕೆ ಕಾಲಿಟ್ಟ ಮಹದಾಯಿ ಹೋರಾಟ

ಸದ್ಯ ಕೇಂದ್ರ, ಗೋವಾ, ಕರ್ನಾಟಕ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಆಡಳಿತದಲ್ಲಿದ್ದು, ಹೀಗಾಗಿ ಯೋಜನೆ ಜಾರಿಗೆ ಕ್ರಮಕೈಗೊಳ್ಳಬೇಕು. ಅಂದು ಯೋಜನೆ ಜಾರಿಗೆ ಹೋರಾಟ ಮಾಡಿದ್ದ ವ್ಯಕ್ತಿ ಮುಖ್ಯಮಂತ್ರಿಯಾಗಿದ್ದು ಈ ಭಾಗದ ರೈತರಿಗೆ ದೊಡ್ಡ ಶಕ್ತಿ ತಂದಿದೆ ಎಂದರು.

ಈ ಸಂದರ್ಭದಲ್ಲಿ ರೈತ ಸಂಘ ಹಾಗೂ ಹಸಿರು ಸೇನೆ ಶಹರ ಘಟಕದ ಅಧ್ಯಕ್ಷ ವಿಠ್ಠಲ ಜಾಧವ, ಕರವೇ ಅಧ್ಯಕ್ಷ ನಭಿಸಾಬ್‌ ಕಿಲ್ಲೇದಾರ, ಚನ್ನು ನಂದಿ, ಜಗದೀಶ ಬೆಳವಟಿಗಿ,ವೀರಣ್ಣ ಸೋಪ್ಪಿನ,ಬಸವರಾಜ ಭೋಸ್ಲೆ ಸೇರಿದಂತೆ ಇತರರು ಇದ್ದರು.
 

Follow Us:
Download App:
  • android
  • ios