Asianet Suvarna News Asianet Suvarna News

Belagavi Winter Session: ಅಧಿವೇಶನದ ಮೊದಲ ದಿನವೇ ಸರ್ಕಾರಕ್ಕೆ ಪ್ರತಿಭಟನೆಯ ಬಿಸಿ

*  ರಾಜ್ಯದಲ್ಲಿ ಕೃಷಿ ಕಾಯ್ದೆ ಕೈಬಿಡುವಂತೆ ಸುವರ್ಣಸೌಧ ಮುತ್ತಿಗೆ
*  ಬೆಳಗಾವಿ ಅಧಿವೇಶನ ವೇಳೆ ಪ್ರತಿಭಟನೆಗೆ ರಾಜ್ಯ ರೈತ ಸಂಘ, ಹಸಿರು ಸೇನೆ ನಿರ್ಧಾರ
*  ನೆರೆ ಪರಿಹಾರಕ್ಕೆ ಒತ್ತಾಯಿಸಿ ಪಾದಯತ್ರೆ 
 

Farmers and Congress Will Be Held Protest on Dec 13th During Session in Belagavi  grg
Author
Bengaluru, First Published Dec 12, 2021, 9:38 AM IST
  • Facebook
  • Twitter
  • Whatsapp

ಹಾವೇರಿ(ಡಿ.12): ಕೇಂದ್ರ ಸರ್ಕಾರದಂತೆ ರಾಜ್ಯ ಸರ್ಕಾರವೂ ರೈತ ವಿರೋಧಿ ಕೃಷಿ ಕಾಯ್ದೆಗಳನ್ನು(Farm Law) ಕೈಬಿಡಬೇಕು ಎಂದು ಒತ್ತಾಯಿಸಿ ಬೆಳಗಾವಿ ಅಧಿವೇಶನದ(Belagavi Session) ವೇಳೆ ಸುವರ್ಣಸೌಧಕ್ಕೆ(Suvarna Vidhana Soudha) ಮುತ್ತಿಗೆ ಹಾಕಲಾಗುವುದು ಎಂದು ರೈತ ಸಂಘ ಮತ್ತು ಹಸಿರು ಸೇನೆ ರಾಜ್ಯ ಪ್ರಧಾನ ಕಾರ್ಯದರ್ಶಿ ಮಾಲತೇಶ ಪೂಜಾರ ಹೇಳಿದರು.

ಇಲ್ಲಿಯ ಪತ್ರಿಕಾ ಭವನದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿ, ರೈತರ(Farmers) ಹೋರಾಟಕ್ಕೆ ಮಣಿದು ಕೇಂದ್ರ ಸರ್ಕಾರ(Central Government) ಮೂರು ಕೃಷಿ ಕಾಯ್ದೆಗಳನ್ನು ಹಿಂದಕ್ಕೆ ಪಡೆದಿದೆ. ಆದರೆ, ರಾಜ್ಯ ಸರ್ಕಾರ(Government of Karnataka) ಇನ್ನೂ ಕಾಯ್ದೆ ರದ್ದುಗೊಳಿಸಿಲ್ಲ. ಅದಕ್ಕಾಗಿ ಕೋಡಿಹಳ್ಳಿ ಚಂದ್ರಶೇಖರ್‌(Kodihalli Chandrashekhar) ನೇತೃತ್ವದಲ್ಲಿ ಸುವರ್ಣಸೌಧ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಲಿದ್ದೇವೆ. ಹೋರಾಟಕ್ಕೆ ಜಿಲ್ಲೆಯಿಂದ 500ಕ್ಕೂ ಹೆಚ್ಚು ರೈತರು ಭಾಗವಹಿಸಲಿದ್ದಾರೆ. ಅಧಿವೇಶನ ಮುಗಿಯುವವರೆಗೂ ಹೋರಾಟ ಮುಂದುವರಿಸುತ್ತೇವೆ ಎಂದು ಹೇಳಿದರು.

Karnataka Assembly session: ಸೋಮವಾರ ಬೆಳಗಾವಿ ಸದನ ಕದನ ಶುರು : ಅಧಿವೇಶನ ವೇಳೆ 75 ಪ್ರತಿಭಟನೆ?

ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಅಪಾರ ಪ್ರಮಾಣದಲ್ಲಿ ಜೋಳ, ಹತ್ತಿ ಬೆಳೆ ನಾಶವಾಗಿದೆ(Crop Damage). ಆದರೆ, ಇದುವರೆಗೆ ಬೆಳೆ ನಷ್ಟ ಪರಿಹಾರ(Compensation) ನೀಡಿಲ್ಲ. ಜಿಲ್ಲೆಯಲ್ಲಿ ಹೆಚ್ಚು ಬೆಳೆಯುವ ಮೆಕ್ಕೆಜೋಳಕ್ಕೆ ಬೆಂಬಲ ಬೆಲೆ ಘೋಷಿಸಬೇಕು. ಖರೀದಿ ಕೇಂದ್ರ ಸ್ಥಾಪಿಸಿ ಮೆಕ್ಕೆಜೋಳ ಖರೀದಿ ಮಾಡಬೇಕು. ಅತಿವೃಷ್ಟಿಯಲ್ಲಿ ಬಿದ್ದ ಮನೆಗಳಿಗೆ ಪರಿಹಾರ ನೀಡುವಲ್ಲಿ ಸರ್ಕಾರ ವಿಫಲವಾಗಿದೆ. ಅಧಿಕಾರಿಗಳು ರಾಜಕೀಯದವರ ಒತ್ತಡಕ್ಕೆ ಮಣಿದು ಕೆಲಸ ಮಾಡುತ್ತಿದ್ದಾರೆ. ಜಿಲ್ಲಾಧಿಕಾರಿಗಳು ರೈತರ ಸಮಸ್ಯೆ ಬಗ್ಗೆ ಕಿಂಚಿತ್ತೂ ಚಿಂತೆ ಮಾಡುತ್ತಿಲ್ಲ. ಇದೇ ರೀತಿ ಮುಂದುವರಿದರೆ ಜಿಲ್ಲಾಧಿಕಾರಿ ಕಚೇರಿ ಎದುರು ಉಗ್ರ ಹೋರಾಟ ಕೈಗೆತ್ತಿಕೊಳ್ಳಲಾಗುವುದು ಎಂದು ಎಚ್ಚರಿಸಿದರು.

ಪೊಲೀಸ್‌(Police) ಇಲಾಖೆ ಮೂಲಕ ಹೋರಿ ಬೆದರಿಸುವ ಹಬ್ಬಕ್ಕೆ ಜಿಲ್ಲಾಧಿಕಾರಿಗಳು ತಡೆಯೊಡ್ಡುತ್ತಿದ್ದಾರೆ. ಇದು ಗ್ರಾಮೀಣ ಜನರ ಹಬ್ಬವಾಗಿ ಆಚರಣೆಯಾಗುತ್ತಿದೆ. ಅಕ್ಕಪಕ್ಕದ ಜಿಲ್ಲೆಗಳಲ್ಲಿ ಕೊಬ್ಬರಿ ಹೋರಿ ಹಬ್ಬ ಆಚರಿಸಲಾಗುತ್ತಿದೆ. ಆದರೆ, ಇಲ್ಲಿಗೆ ಮಾತ್ರ ಕಟ್ಟುನಿಟ್ಟು ಮಾಡಲಾಗುತ್ತಿದೆ. ಜಿಲ್ಲೆಯಲ್ಲೂ ಹೋರಿ ಹಬ್ಬಕ್ಕೆ ಅವಕಾಶ ಮಾಡಿಕೊಡದಿದ್ದರೆ ಜಿಲ್ಲಾಧಿಕಾರಿ ಕಚೇರಿ ಎದುರು ರೈತರೊಂದಿಗೆ ಸೇರಿ ಪ್ರತಿಭಟನೆ ನಡೆಸಲಾಗುವುದು. ಇದಕ್ಕೆ ಅವಕಾಶ ನೀಡಬಾರದು ಎಂದು ಹೇಳಿದರು.

ರೈತ ಸಂಘದ ಜಿಲ್ಲಾಧ್ಯಕ್ಷ ಹನುಮಂತಪ್ಪ ಹುಚ್ಚಣ್ಣನವರ ಮಾತನಾಡಿ, ನೆರೆ ಪರಿಹಾರ ನೀಡುವಲ್ಲಿ ಅಧಿಕಾರಿಗಳು ತಾರತಮ್ಯ ಮಾಡುತ್ತಿದ್ದಾರೆ. ಶಾಸಕರು, ಅವರ ಪಿಎಗಳು ಹೇಳಿದಂತೆ ಅಧಿಕಾರಿಗಳು ಕೇಳುತ್ತಿದ್ದಾರೆ. ಜಿಲ್ಲೆಯಲ್ಲಿ ಆಡಳಿತ ಸಂಪೂರ್ಣ ಹದಗೆಟ್ಟಿದೆ. ರೈತರ ಬೇಡಿಕೆಗಳ ಬಗ್ಗೆ ಜಿಲ್ಲಾಧಿಕಾರಿಗಳು ಗಮನ ನೀಡುತ್ತಿಲ್ಲ ಎಂದು ಆರೋಪಿಸಿದರು.

ಸಂಘಟನೆ ಪ್ರಮುಖರಾದ ಎಂ.ಎನ್‌. ನಾಯ್ಕ, ರಾಜೇಸಾಬ ತರ್ಲಗಟ್ಟ, ಚನ್ನಪ್ಪ ಮಳ್ಳೂರ, ರಮೇಶ ಹೆಸರೂರ, ಗೋಣೆಪ್ಪ ಕರಿಗಾರ, ಶೇಖಪ್ಪ ಹಲಸೂರ ಇತರರು ಇದ್ದರು.

Farm Laws Repeal: 'ಪ್ರತಿಭಟನೆ ವೇಳೆ ಮೃತ ರೈತರ ಲೆಕ್ಕ ಇಲ್ಲ, ಪರಿಹಾರ ನೀಡಲ್ಲ!'

ನೆರೆ ಪರಿಹಾರಕ್ಕೆ ಒತ್ತಾಯ

ನಾಳೆಯಿಂದ ಬೆಳಗಾವಿಯ ಸುವರ್ಣಸೌಧದಲ್ಲಿ ಚಳಿಗಾಲದ ಅಧಿವೇಶನ ಆರಂಭದ ದಿನವೇ ಸರ್ಕಾರಕ್ಕೆ ಪ್ರತಿಭಟನೆ(Protest) ಬಿಸಿ ತಟ್ಟಲಿಸಲು ಕಾಂಗ್ರೆಸ್‌(Congress) ಸಜ್ಜಾಗಿದೆ. ಹೌದು, ಬೆಳಗಾವಿ ಜಿಲ್ಲೆಯ ಖಾನಾಪುರ ಕ್ಷೇತ್ರದ ಅಭಿವೃದ್ಧಿ, ನೆರೆ ಪರಿಹಾರಕ್ಕೆ ಒತ್ತಾಯಿಸಿದ ಬೆಳಗಾವಿ ಜಿಲ್ಲೆ ಖಾನಾಪುರ ಕಾಂಗ್ರೆಸ್ ಶಾಸಕಿ ಅಂಜಲಿ‌ ನಿಂಬಾಳ್ಕರ್(Anjali Nimbalkar) 'ಸಂಘರ್ಷ ಪಾದಯಾತ್ರೆ'ಯನ್ನ ಆರಂಭಿಸಲಿದ್ದಾರೆ. 

ಇಂದು ಮಧ್ಯಾಹ್ನ 3 ಗಂಟೆಗೆ ಖಾನಾಪುರದ ಶಿವಸ್ಮಾರಕ ಚರ್ಚ್‌ನಿಂದ ಪಾದಯಾತ್ರೆಗೆ ಚಾಲನೆ ಅಂಜಲಿ ನಿಂಬಾಳ್ಕರ್ ಆರಂಭಿಸಲಿದ್ದಾರೆ.  ಖಾನಾಪುರದಿಂದ ಬೆಳಗಾವಿಯ ಸುವರ್ಣಸೌಧವರೆಗೆ 40 ಕಿ.ಮೀ. ಪಾದಯಾತ್ರೆಯ ಮೂಲಕ ನಾಳೆ(ಸೋಮವಾರ) ಬೆಳಗ್ಗೆ 9.30ಕ್ಕೆ ಸುವರ್ಣಸೌಧ ಪಾದಯಾತ್ರೆ ತಲುಪಲಿದೆ. ಇಂದು ರಾತ್ರಿ ಬೆಳಗಾವಿಗೆ ಮಾಜಿ ಸಿಎಂ ಸಿದ್ದರಾಮಯ್ಯ(Siddaramaiah) ಆಗಮಿಸಲಿದ್ದಾರೆ. ನಾಳೆ ಅಂಜಲಿ ನಿಂಬಾಳ್ಕರ್ ಪಾದಯಾತ್ರೆಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ(Satish Jarkiholi) ಸೇರಿದಂತೆ ಇತರ ಕಾಂಗ್ರೆಸ್ ನಾಯಕರು ಭಾಗಿಯಾಗಲಿದ್ದಾರೆ.   
 

Follow Us:
Download App:
  • android
  • ios