Haveri: ಕೃಷಿ ಸಚಿವರ ಜಿಲ್ಲೆಯ ಹಲವೆಡೆ ಗೊಬ್ಬರಕ್ಕಾಗಿ ಹಾಹಾಕಾರ: ರೈತರ ಪರದಾಟ
ಹಾವೇರಿ ಜಿಲ್ಲೆ ಕೃಷಿ ಸಚಿವ ಬಿ.ಸಿ ಪಾಟೀಲ್ ಅವರ ತವರು ಜಿಲ್ಲೆ. ಮೇಲಾಗಿ ಸಿಎಂ ಜಿಲ್ಲೆ ಕೂಡಾ ಹೌದು. ಆದರೆ ಮಳೆ ಸೊಂಪಾಗಿ ಬಿತ್ತನೆ ಮಾಡಿ, ಬೆಳೆಗಳಿಗೆ ಗೊಬ್ಬರ ಹಾಕೋ ಉತ್ಸಾಹದಲ್ಲಿರೋ ರೈತರಿಗೆ ಗೊಬ್ಬರವೇ ಸಿಗುತ್ತಿಲ್ಲ.
ಹಾವೇರಿ (ಜು.13): ಹಾವೇರಿ ಜಿಲ್ಲೆ ಕೃಷಿ ಸಚಿವ ಬಿ.ಸಿ ಪಾಟೀಲ್ ಅವರ ತವರು ಜಿಲ್ಲೆ. ಮೇಲಾಗಿ ಸಿಎಂ ಜಿಲ್ಲೆ ಕೂಡಾ ಹೌದು. ಆದರೆ ಮಳೆ ಸೊಂಪಾಗಿ ಬಿತ್ತನೆ ಮಾಡಿ, ಬೆಳೆಗಳಿಗೆ ಗೊಬ್ಬರ ಹಾಕೋ ಉತ್ಸಾಹದಲ್ಲಿರೋ ರೈತರಿಗೆ ಗೊಬ್ಬರವೇ ಸಿಗುತ್ತಿಲ್ಲ. ಜಿಲ್ಲೆಯಾದ್ಯಂತ ಗೋವಿನಜೋಳ ಬಿತ್ತಿರೋ ರೈತರಿಗೆ ಗೊಬ್ಬರದ ಅವಶ್ಯಕತೆ ಇದೆ. ಆದರೆ ಹಾವೇರಿ ಜಿಲ್ಲೆಯ ಹಲವೆಡೆ ರೈತರಿಗೆ ಗೊಬ್ಬರದ ಅಭಾವ ಉಂಟಾಗಿದೆ. ಬೆಳಿಗ್ಗೆ 4 ಗಂಟೆಯಿಂದ ಕ್ಯೂ ನಿಂತರೂ ಯೂರಿಯಾ ಗೊಬ್ಬರ ಸಿಕ್ಕಿಲ್ಲ. ಗೊಬ್ಬರಕ್ಕಾಗಿ ಮಂಗಳವಾರ ಹಾವೇರಿ ತಾಲೂಕು ಕನವಳ್ಳಿ ಗ್ರಾಮದ ರೈತರು ಸಾಲಾಗಿ ಕ್ಯೂ ನಿಂತ ದೃಶ್ಯ ಕಂಡು ಬಂತು.
ಕೃಷಿ ಸಚಿವರ ಜಿಲ್ಲೆಯಾದರೂ ಗೊಬ್ಬರದ ಕೊರತೆ ಆಗಿದೆ. ಗೊಬ್ಬರದ ಕೊರತೆ ಇಲ್ಲ ಅಂತ ಕೃಷಿ ಸಚಿವ ಬಿ.ಸಿ ಪಾಟೀಲ್ ಹೇಳಿಕೊಂಡು ಓಡಾಡ್ತಾರೆ. ಆದರೆ ಬೆಳಿಗ್ಗೆ 4 ಗಂಟೆಯಿಂದ ಕ್ಯೂನಲ್ಲಿ ನಿಂತರೂ ಗೊಬ್ಬರ ಸಿಗುತ್ತಿಲ್ಲ ಎಂದು ರೈತರು ಆಕ್ರೋಶ ಹೊರ ಹಾಕಿದರು. ಸಹಕಾರಿ ಸಂಘದ ಗೋದಾಮಿನಲ್ಲಿ ಗೊಬ್ಬರ ದಾಸ್ತಾನು ಸಮರ್ಪಕವಾಗಿಲ್ಲ. ಜಿಲ್ಲೆಯ ರಾಣೆಬೆನ್ನೂರು, ಹಿರೇಕೇರೂರು ತಾಲೂಕು ಹಂಸಭಾವಿ ಸೇರಿದಂತೆ ಹಲವೆಡೆ ಗೊಬ್ಬರದ ಅಭಾವ ತಲೆದೂರಿದೆ.ಜಿಲ್ಲೆಯಲ್ಲಿ ಮಳೆಯಾಗುತ್ತಿದ್ದು, ಕೃಷಿ ಚಟುವಟಿಕೆಗಳು ಚುರುಕು ಪಡೆದುಕೊಳ್ಳುತ್ತಿವೆ.ಆದರೆ ಗೊಬ್ಬರದ ಅಭಾವದಿಂದಾಗಿ ರೈತರು ರೋಸಿ ಹೋಗಿದ್ದಾರೆ.
Haveri: ಜೀವದ ಹಂಗು ತೊರೆದು ಬಸ್ ಪ್ರಯಾಣ: ಸಾರಿಗೆ ಇಲಾಖೆ ವಿರುದ್ದ ವಿದ್ಯಾರ್ಥಿಗಳ ಆಕ್ರೋಶ
ಬೀಜ, ಗೊಬ್ಬರ ಕೊರತೆಯಾಗದಂತೆ ಸಿಎಂ ಖಡಕ್ ಎಚ್ಚರಿಕೆ: ರಾಜ್ಯದಲ್ಲಿ ಮುಂಗಾರು ಹಂಗಾಮಿಗೆ ಬಿತ್ತನೆ ಬೀಜ ಹಾಗೂ ಗೊಬ್ಬರದ ಕೊರತೆಯಾಗದಂತೆ ಹಿರಿಯ ಅಧಿಕಾರಿಗಳು ಖುದ್ದು ನಿಗಾ ವಹಿಸಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ. ಗುರುವಾರ ತಮ್ಮ ಗೃಹ ಕಚೇರಿಯಲ್ಲಿ ಕೃಷಿ ಇಲಾಖೆಯ ಆಯವ್ಯಯ ಅನುಷ್ಠಾನದ ಪ್ರಗತಿ ಪರಿಶೀಲನೆ ಸಭೆ ನಡೆಸಿದ ಅವರು, ರಾಜ್ಯದಲ್ಲಿ ಮೇ 31ರ ಮಾಹಿತಿಯಂತೆ 1.26 ಲಕ್ಷ ಮೆಟ್ರಿಕ್ ಟನ್ ಡಿಎಪಿ ಲಭ್ಯವಿದ್ದು, ಒಟ್ಟಾರೆ, 7.64 ಲಕ್ಷ ಮೆಟ್ರಿಕ್ ಟನ್ ರಸಗೊಬ್ಬರ ಲಭ್ಯವಿದೆ. ರಾಜ್ಯದ ಬೇಡಿಕೆ ಪೂರೈಸಲು ಯಾವುದೇ ಕೊರತೆ ಇಲ್ಲ.
ಆದರೆ, ವ್ಯವಸ್ಥಿತವಾಗಿ ಅಗತ್ಯ ಆಧರಿಸಿ, ರಸಗೊಬ್ಬರ ಸಕಾಲದಲ್ಲಿ ಪೂರೈಸಲು ಹಿರಿಯ ಅಧಿಕಾರಿಗಳೇ ಮೇಲ್ವಿಚಾರಣೆ ನಡೆಸಿ ಯಾವುದೇ ಕೃತಕ ಅಭಾವ ಸೃಷ್ಟಿಯಾಗದಂತೆ ಮುನ್ನೆಚ್ಚರಿಕೆ ವಹಿಸುವಂತೆ ಸೂಚಿಸಿದರು. ಬಿತ್ತನೆ ಬೀಜ ರಾಜ್ಯದಲ್ಲಿ 7.81 ಲಕ್ಷ ಕ್ವಿಂಟಾಲ್‌ನಷ್ಟುಲಭ್ಯವಿದ್ದು, ಬೇಡಿಕೆಗಿಂತ ಹೆಚ್ಚಿನ ಪ್ರಮಾಣದಲ್ಲಿಯೇ ಲಭ್ಯವಿದೆ. ಆದರೆ ನಕಲಿ ಬೀಜಗಳ ಹಾವಳಿಯನ್ನು ತಪ್ಪಿಸಲು ಅಗತ್ಯ ಮುನ್ನೆಚ್ಚರಿಕೆ ವಹಿಸಬೇಕು. ಈ ಕುರಿತು ಯಾವುದೇ ಲೋಪವಾಗದಂತೆ ಕ್ರಮ ಕೈಗೊಳ್ಳಬೇಕು. ನಕಲಿ ಬೀಜ ಪೂರೈಕೆದಾರರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಕಟ್ಟುನಿಟ್ಟಿನ ಸೂಚನೆ ನೀಡಿದರು.
Haveri: ಶಿಥಿಲಗೊಂಡ ಶಾಲೆಗಳಲ್ಲಿ ಮಕ್ಕಳನ್ನು ಕೂರಿಸಬೇಡಿ: ಸಚಿವ ಶಿವರಾಮ್ ಹೆಬ್ಬಾರ್ ಎಚ್ಚರಿಕೆ
ರಾಜ್ಯದಲ್ಲಿ ಪ್ರಸಕ್ತ ಸಾಲಿನಲ್ಲಿ 114.54 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆ ಗುರಿ ಹೊಂದಲಾಗಿದೆ. ಇದರೊಂದಿಗೆ ಕಂದಾಯ ಇಲಾಖೆ ಹಾಗೂ ಜಲ ಸಂಪನ್ಮೂಲ ಇಲಾಖೆಗಳಿಂದ ಬಂಜರು ಭೂಮಿ ಹಾಗೂ ಸವಳು-ಜವಳು ಭೂಮಿಯ ಮಾಹಿತಿ ಪಡೆದು, ಈ ವರ್ಷ ಕನಿಷ್ಠ ತಲಾ ಒಂದು ಲಕ್ಷ ಹೆಕ್ಟೇರ್‌ನಷ್ಟುಬಂಜರು ಭೂಮಿ ಹಾಗೂ ಸವಳು-ಜವಳು ಭೂಮಿಯನ್ನು ಕೃಷಿಯೋಗ್ಯವಾಗಿ ಪರಿವರ್ತಿಸುವಂತೆ ಸೂಚಿಸಿದರು. ಕೃಷಿ ಸಿಂಚಾಯಿ ಯೋಜನೆಯಡಿ 57 ತಾಲೂಕುಗಳ 2.75 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಜಲಾನಯನ ಅಭಿವೃದ್ಧಿ ಯೋಜನೆ ಕೈಗೆತ್ತಿಕೊಳ್ಳಲಾಗುತ್ತಿದ್ದು, ಇದಕ್ಕಾಗಿ ರಾಜ್ಯದ ಪಾಲಿನ ಅನುದಾನ ಮಂಜೂರು ಮಾಡಲಾಗಿದೆ.