ಶಿವಮೊಗ್ಗ(ಡಿ.28):  ರಾಜ್ಯ ರೈತ ಸಂಘದ ರಾಜ್ಯ ಗೌರವಾಧ್ಯಕ್ಷರಾದ ಎಚ್.ಆರ್ ಬಸವರಾಜಪ್ಪನವರ ನೇತೃತ್ವದಲ್ಲಿ ನೂರಾರು ಕಾರ್ಯಕರ್ತರು ಸಾಮೂಹಿಕವಾಗಿ ಜಿಯೋ ಸಿಮ್‌ನಿಂದ ಏರ್‌ಟೆಲ್‌ ಸಿಮ್‌ಗೆ ಪೋರ್ಟ್ ಆಗಲು ನಿರ್ಧರಿಸಿದ್ದಾರೆ.

ಇಂದು(ಸೋಮವಾರ) ನಗರದ ಶಿವಮೂರ್ತಿ ಸರ್ಕಲ್‌ನಲ್ಲಿರುವ ಏರ್‌ಟೆಲ್ ಕಚೇರಿ ಮುಂದೆ ಕಾರ್ಯಕರ್ತರೊಂದಿಗೆ ಎಚ್.ಆರ್ ಬಸವರಾಜಪ್ಪನವರ ನೇತೃತ್ವದಲ್ಲಿ ತಮ್ಮ ಜಿಯೋ ನಂಬರ್‌ನಿಂದ ಹೊರಬಂದು ಏರ್‌ಟೆಲ್ ಚಂದಾದಾರರಾಗಿದ್ದಾರೆ. 

ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಜಾರಿಗೆ ತಂದಿರುವ ಕೃಷಿ ಕಾನೂನುಗಳು ಮುಖೇಶ್ ಅಂಬಾನಿ ಮತ್ತು ಗೌತಮ್ ಅದಾನಿಯಂತಹ ಕಾರ್ಪೊರೇಟ್ ಕಂಪನಿಗಳ ಪರವಾಗಿವೆ ಎಂದು ಆರೋಪಿಸಿರುವ ರೈತರು ಅವರ ಎಲ್ಲಾ ಉತ್ಪನ್ನಗಳನ್ನು ಬಹಿಷ್ಕಾರ ಮಾಡಿದ್ದಾರೆ. ಇದು ದೇಶಾದ್ಯಂತ ವ್ಯಾಪಕ ಮೆಚ್ಚುಗೆ ಗಳಿಸಿ ಜಿಯೋ ಕಂಪನಿಗೆ ಹೊಡೆತ ಕೊಟ್ಟಿತ್ತು. 

'ರಾಜ್ಯ ಸರ್ಕಾರದಿಂದ ಕನ್ನಡ ವಿರೋಧಿ ನೀತಿ'

ಈಗ ಅದೇ ಮಾದರಿಯಲ್ಲಿ ಕರ್ನಾಟಕದಲ್ಲಿಯೂ ಆಂದೋಲನ ಆರಂಭವಾಗಿದ್ದು, ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯ ಗೌರವಾಧ್ಯಕ್ಷರಾದ ಎಚ್.ಆರ್ ಬಸವರಾಜಪ್ಪನವರ ನೇತೃತ್ವದಲ್ಲಿ ನೂರಾರು ಕಾರ್ಯಕರ್ತರು ಸಾಮೂಹಿಕವಾಗಿ ಜಿಯೋ ಸಿಮ್‌ನಿಂದ ಏರ್‌ಟೆಲ್‌ ಸಿಮ್‌ಗೆ ಪೋರ್ಟ್ ಆಗಿದ್ದಾರೆ. ಈ ಮೂಲಕ ರೈತ ಚಳವಳಿಯನ್ನು ಗಟ್ಟಿಗೊಳಿಸಲು, ಕಾರ್ಪೊರೇಟ್ ಕಂಪನಿಗಳನ್ನು ವಿರೋಧಿಸಲು ರೈತರು ಸಜ್ಜಾಗಿದ್ದಾರೆ.

ಈ ಸಂದರ್ಭದಲ್ಲಿ ರಾಜ್ಯ ಗೌರವ ಅಧ್ಯಕ್ಷರಾದ ಹೆಚ್.ಆರ್ ಬಸವರಾಜಪ್ಪ, ಉಪಾಧ್ಯಕ್ಷರಾದ ಹಿಟ್ಟೂರು ರಾಜು, ಜಿಲ್ಲಾಧ್ಯಕ್ಷರಾದ ಎಸ್. ಶಿವಮೂರ್ತಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಇ.ಬಿ ಜಗದೀಶ್, ಜಿಲ್ಲಾ ಮುಖಂಡರಾದ ಪಿ.ಶೇಖರಪ್ಪ, ಎಂ.ಡಿ ನಾಗರಾಜ ಹೇಳಿದ್ದಾರೆ.