Asianet Suvarna News Asianet Suvarna News

chikkaballapura : ನ.26ಕ್ಕೆ ರಾಷ್ಟ್ರೀಯ ಹೆದ್ದಾರಿ ಬಂದ್‌

  • ಕೇಂದ್ರದ ಕೃಷಿ ಕಾಯ್ದೆಗಳ ವಿರುದ್ಧ ದೆಹಲಿಯಲ್ಲಿ ನಡೆಯುತ್ತಿರುವ ರೈತರ ನಿರಂತರ ಹೋರಾಟ
  • ಕೇಂದ್ರ ಸರ್ಕಾರ ಸ್ಪಂದಿಸದ ಹಿನ್ನೆಲೆಯಲ್ಲಿ ನ.26ಕ್ಕೆ ಬೆಂಗಳೂರು ನಗರ, ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳನ್ನು ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿ-7 ಬಂದ್
farmers Protest in Delhi national highway bandh on november 26th in chikkaballapura snr
Author
Bengaluru, First Published Nov 17, 2021, 1:30 PM IST

ಚಿಕ್ಕಬಳ್ಳಾಪುರ (ನ.17):  ಕೇಂದ್ರದ ಕೃಷಿ ಕಾಯ್ದೆಗಳ ವಿರುದ್ಧ ದೆಹಲಿಯಲ್ಲಿ ನಡೆಯುತ್ತಿರುವ ರೈತರ ನಿರಂತರ ಹೋರಾಟ ವರ್ಷ ಕಳೆದರೂ ಕೇಂದ್ರ ಸರ್ಕಾರ ಸ್ಪಂದಿಸದ ಹಿನ್ನೆಲೆಯಲ್ಲಿ ನ.26ಕ್ಕೆ ಬೆಂಗಳೂರು (Bengaluru) ನಗರ, ಗ್ರಾಮಾಂತರ, ಕೋಲಾರ (Kolar), ಚಿಕ್ಕಬಳ್ಳಾಪುರ (Chikkaballapura) ಜಿಲ್ಲೆಗಳನ್ನು ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿ-7ನ್ನು (National Highway) ನಗರದ ಹೊರ ವಲಯದ ಚದಲು ಪುರದಲ್ಲಿ ಕ್ರಾಸ್‌ನಲ್ಲಿ  ತಡೆದು ಪ್ರತಿಭಟನೆ ನಡೆಸುವುದಾಗಿ ಸಂಯುಕ್ತ ಹೋರಾಟ ಕರ್ನಾಟಕ (karnataka) ಜಿಲ್ಲಾ ಸಮಿತಿ ಎಚ್ಚರಿಸಿದೆ.

ನಗರದ ಪತ್ರಕರ್ತರ ಭವನದಲ್ಲಿ ಈ ಕುರಿತು ಮಂಗಳವಾರ ಸುದ್ದಿಗೋಷ್ಠಿ ನಡೆಸಿದ ವಿವಿಧ ರೈತಪರ, ಕನ್ನಡಪರ, ಪ್ರಗತಿಪರ ಸಂಘಟನೆಗಳ ಐಕ್ಯ ಹೋರಾಟ ಸಮಿತಿ ಸದಸ್ಯರು, ದೇಶವ್ಯಾಪ್ತಿ ಅಂದು ಹೆದ್ದಾರಿ ಬಂದ್‌ (High bandh) ಚಳವಳಿ ನಡೆಸುವ ಮೂಲಕ ಕೃಷಿ ಕಾಯ್ದೆಗಳನ್ನು ಹಿಂಪಡೆಯುವಂತೆ ಕೇಂದ್ರ ಸರ್ಕಾರದ (Govt Of India) ಮೇಲೆ ಮತ್ತೊಮ್ಮೆ ಒತ್ತಡ ತರಲಾಗುವುದೆಂದರು.

ರಾಷ್ಟ್ರೀಯ ಹೆದ್ದಾರಿ ತಡೆ :  ನವ ದೆಹಲಿಯಲ್ಲಿ (New Delhi) ಹೋರಾಟ ಪ್ರಾರಂಭವಾಗಿ ವರ್ಷವಾದ ಹಿನ್ನೆಲೆಯಲ್ಲಿ ಸಂಯುಕ್ತ ಕಿಸಾನ್‌ ಮೋರ್ಚಾ ಕರೆ ಮೇರೆಗೆ ಹೋರಾಟ ಹಮ್ಮಿ ಕೊಳ್ಳಲಾಗುತ್ತಿದೆ. 500ಕ್ಕೂ ಹೆಚ್ಚು ಸಂಘಟನೆಗಳವರು ನವದೆಹಲಿಗೆ ರಾರ‍ಯಲಿ ತೆರಳಿದ್ದಾರೆ. ಅದರ ಭಾಗವಾಗಿ ಕರ್ನಾಟಕದಲ್ಲಿ 7​​, 8 ಕಡೆ ಹೆದ್ದಾರಿ ತಡೆ ಮೂಲಕ ಪ್ರತಿಭಟನೆ ನಡೆಸಲು ನಿರ್ಧರಿಸಲಾಗಿದೆ. ಅಂದು ಚದಲುಪುರ ಕ್ರಾಸ್‌ನಲ್ಲಿ ಕೃಷಿ ಪರಿಕರ, ಜಾನುವಾರಗಳ ಸಮೇತ ಬೆಳಗ್ಗೆ 10ರಿಂದ ಸಂಜೆ 5ರವರೆಗೆ ರಾಷ್ಟ್ರೀಯ ಹೆದ್ದಾರಿ ತಡೆ ನಡೆಸಲಾಗುವುದು. ಜಿಲ್ಲೆಯ ರೈತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ಮನವಿ ಮಾಡಿದ ಅವರು, ಕೇಂದ್ರ ಸರ್ಕಾರ ಕೃಷಿ ವಿರೋಧಿ ಕಾಯ್ದೆಗಳನ್ನು ವಾಪಸ್‌ ಪಡೆಯಬೇಕೆಂದರು.

ಸುದ್ದಿಗೋಷ್ಠಿಯಲ್ಲಿ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ರಾಜ್ಯ ಪ್ರಧಾನ ಕಾರ್ಯದರ್ಶಿ ಭಕ್ತರಹಳ್ಳಿ ಬೈರೇಗೌಡ, ಸಿಐಟಿಯು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಿದ್ದಗಂಗಪ್ಪ, ಪ್ರಾಂತ ರೈತ ಸಂಘದ ಜಿಲ್ಲಾಧ್ಯಕ್ಷ ಬಿ.ಎನ್. ಮುನಿಕೃಷ್ಣಪ್ಪ, ಪ್ರಜಾ ಸಂಘರ್ಷ ಸಮಿತಿ ಜಿಲ್ಲಾ ಸಹ ಸಂಚಾಲಕ ಚನ್ನರಾಯಪ್ಪ, ಕೆ.ಎಸ್‌.ಪುಟ್ಟಣಯ್ಯ ಬಣದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜೆ.ವೆಂಕಟಸ್ವಾಮಿ, ರೈಥ ಸಂಘದ ಮುನಿಕೆಂಪಯ್ಯು, ಕರವೇ ರಾಮೇಗೌಡ, ಕನ್ನಡ ಸೇನೆ ಜಿಲ್ಲಾಧ್ಯಕ್ಷ ರವಿಕುಮಾರ್‌, ತಿಪ್ಪೇನಹಳ್ಳಿ ನಾರಾಯಣಸ್ವಾಮಿ, ಗುಡಿಬಂಡೆ ರಾಮನಾಥ್‌, ರಾಮಾಂಜಿನಪ್ಪ ಸೇರಿದಂತೆ ಮತ್ತಿತರರು ಇದ್ದರು.

ರೈತರ ಸಮಸ್ಯೆ ಗಮನಕ್ಕೆ ತಂದ ಸಿದ್ದರಾಮಯ್ಯ  : ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಗೆ (Basavaraj Bommai) ಸಿದ್ದರಾಮಯ್ಯ (Siddaramaiah) ಪತ್ರ (Letter) ಬರೆದಿದ್ದಾರೆ.  ರಾಜ್ಯದ ರೈತರು (Farmers) ಬೆಳೆದ ಬೆಳೆಗಳ ಬಗ್ಗೆ ಪತ್ರದ ಮೂಲಕ ಬೊಮ್ಮಾಯಿ ಗಮನಕ್ಕೆ ತರುವ ಪ್ರಯತ್ನಿಸಿದ್ದು, ಬೆಳೆ ಹಾನಿ ಪರಿಹಾರಕ್ಕೆ ಆಗ್ರಹಿಸಿದ್ದಾರೆ. ಮುಖ್ಯಮಂತ್ರಿಗಳಿಗೆ ಸಿದ್ದರಾಮಯ್ಯ ಬರೆದಿರುವ ಪತ್ರದ ಪೂರ್ಣ ವಿವರ ಈ ಕೆಳಗಿನಂತಿದೆ.

ಸಿದ್ದರಾಮಯ್ಯ ಬರೆದಿರುವ ಪತ್ರ : ನವೆಂಬರ್ ತಿಂಗಳ ಮಧ್ಯಭಾಗಕ್ಕೆ ಬರುತ್ತಿದ್ದರೂ ರಾಜ್ಯದಲ್ಲಿ ಮಳೆ ನಿಲ್ಲುತ್ತಿಲ್ಲ. ರಾಜ್ಯದ ಅನೇಕ ಜಿಲ್ಲೆಗಳಲ್ಲಿ ಸೆಪ್ಟೆಂಬರ್ ಮತ್ತು ಅಕ್ಟೋಬರ್ ತಿಂಗಳುಗಳಲ್ಲಿ ವಾಡಿಕೆಗಿಂತ ಹೆಚ್ಚು ಮಳೆ ಬಂದಿದೆ. 

'ಅಡಕೆ ಔಷಧೀಯ ವಸ್ತು : ಅಡಕೆ ಬಗ್ಗೆ ತಪ್ಪು ಮಾಹಿತಿ ನೀಡಬೇಡಿ'

ಇದರಿಂದಾಗಿ ಕೊಯಿಲಿಗೆ ಬಂದ ಬೆಳೆಗಳು ಹೊಲ ಗದ್ದೆಗಳಲ್ಲೆ ಕೊಳೆತು ಹೋಗುವಂತಾಗಿದೆ.  ರಾಜ್ಯದಲ್ಲಿ ವಾಡಿಕೆಯಂತೆ ೬೯.೭೯ ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆಯಾಗುತ್ತದೆ. ಆದರೆ ಕೊರೋನ ಸಮಸ್ಯೆ ಬಂದ ನಂತರ ಜನರು ಹೆಚ್ಚಿನ ಪ್ರಮಾಣದಲ್ಲಿ ಕೃಷಿ ಕೆಲಸಗಳಲ್ಲಿ ತೊಡಗಿಕೊಂಡಿದ್ದಾರೆ. 

ಅದರಿಂದಾಗಿ ಕಳೆದ ವರ್ಷ ಮುಂಗಾರಿನಲ್ಲಿ ವಾಡಿಕೆಗಿಂತ ಸುಮಾರು 8 ಲಕ್ಷಕ್ಕೂ ಹೆಚ್ಚು ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆ ಮಾಡಲಾಗಿತ್ತು. ಅಂದರೆ 77.65 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆ ಮಾಡಲಾಗಿತ್ತು. 

ಕಳೆದ ಬಾರಿಗಿಂತ ಈ ಬಾರಿ 1.7 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಹೆಚ್ಚಾಗಿ  ಬಿತ್ತನೆಯಾಗಿದೆ. ಮುಂಗಾರು ಬೆಳೆಗಳಾದ ರಾಗಿ, ಭತ್ತ, ಮುಸುಕಿನ ಜೋಳ, ತೊಗರಿ, ಹತ್ತಿ, ಮೆಣಸಿನ ಕಾಯಿ, ಶೇಂಗಾ, ಹೆಸರು, ಉದ್ದು ಮುಂತಾದವುಗಳ ಕೊಯಿಲಿನ ಕೆಲಸ ನಡೆಯುತ್ತಿದೆ. 

ಆದರೆ ಸೆಪ್ಟೆಂಬರ್ ತಿಂಗಳಲ್ಲಿ ಪ್ರಾರಂಭವಾದ ಮಳೆ ಇನ್ನೂ ನಿಂತಿಲ್ಲ. ಆರಂಭದಲ್ಲಿ ಬಿತ್ತನೆ ಮಾಡುವಾಗ ಜುಲೈ ಮತ್ತು ಆಗಸ್ಟ್ ತಿಂಗಳಲ್ಲಿ ಮಳೆ ಕೈಕೊಟ್ಟ ಕಾರಣ ದಕ್ಷಿಣ ಒಳನಾಡು ಸೇರಿದಂತೆ ಅನೇಕ ಜಿಲ್ಲೆಗಳಲ್ಲಿ ರೈತರು ಹಾಕಿದ ಬಿತ್ತನೆ ಬೀಜಗಳು ಸರಿಯಾಗಿ ಹುಟ್ಟಲಿಲ್ಲ.  ಆನಂತರ ಸರಿಯಾದ ಸಮಯಕ್ಕೆ ರಸಗೊಬ್ಬರ ಸಿಗಲಿಲ್ಲ. 

ಇಷ್ಟರ ನಡುವೆಯೂ ರೈತರು ಕಷ್ಟ ಪಟ್ಟು ಬೆಳೆಗಳನ್ನು ಬೆಳೆದಿದ್ದಾರೆ, ಆದರೆ ವ್ಯಾಪಕವಾಗಿ ಸುರಿಯುತ್ತಿರುವ ಮಳೆಯ ಕಾರಣದಿಂದರೈತಾಪಿ ಸಮುದಾಯ ಸಂಕಷ್ಟಕ್ಕೆ ಸಿಲುಕಿದೆ. ಮಲೆನಾಡು, ಕರಾವಳಿ ಪ್ರದೇಶಗಳಲ್ಲಿ ಸುರಿಯುತ್ತಿರುವ ವ್ಯಾಪಕ ಮಳೆಯಿಂದಾಗಿ ಅಡಿಕೆ, ಕಾಫಿ, ಮೆಣಸು ಮುಂತಾದ ವಾಣಿಜ್ಯ ಬೆಳೆಗಳು ಹಲವು ರೀತಿಯ ಸಮಸ್ಯೆಗಳನ್ನು ಎದುರಿಸುತ್ತಿವೆ. ಕೊಳೆ ರೋಗದ ಜೊತೆಗೆ ಅಡಿಕೆಗೆ ಹಳದಿ ಎಲೆ ರೋಗ ಬಂದಿದೆ. 

ಮೆಣಸಿನ ಬಳ್ಳಿಗಳು ಕೊಳೆತು ಹೋಗುತ್ತಿವೆ. ಕಾಫಿಯೂ ಕೊಳೆ ರೋಗದ ಸಮಸ್ಯೆಯನ್ನು ಎದುರಿಸುತ್ತಿದೆ. ಕೃಷಿ ಇಲಾಖೆಯ ಮಾಹಿತಿಯ ಪ್ರಕಾರ, ವ್ಯಾಪಕ ಮಳೆಯಿಂದಾಗಿ ಅಕ್ಟೋಬರ್ ಅಂತ್ಯದ ವೇಳೆಗೆ 11.22 ಲಕ್ಷ ಹೆಕ್ಟೇರ್‌ಗೂ ಹೆಚ್ಚು ಪ್ರದೇಶದಲ್ಲಿ ಬೆಳೆದ ಬೆಳೆ ನಷ್ಟವಾಗಿದೆ. 

ಆದರೆ ಕೃಷಿ ಇಲಾಖೆಯ ಮಾಹಿತಿಗಳಲ್ಲಿ ಕಳೆದ ಒಂದೂವರೆ ತಿಂಗಳಿಂದ ಅತಿ ಹೆಚ್ಚು ಮಳೆ ಬಿದ್ದು ಹಾನಿಯಾಗಿರುವ ಜಿಲ್ಲೆಗಳ ಮಾಹಿತಿಯೆ ಇಲ್ಲ. ಮಲೆನಾಡು, ಕರಾವಳಿ ಜಿಲ್ಲೆಗಳ ಅಡಿಕೆ, ಮೆಣಸು, ಕಾಫಿಗೆ ಆಗಿರುವ ನಷ್ಟದ ಮಾಹಿತಿ ಇಲ್ಲ. 

ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಬೆಂಗಳೂರು ಗ್ರಾಮಾಂತರ, ಬೆಂ. ನಗರ, ಕೋಲಾರ, ರಾಮನಗರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ಮೈಸೂರು, ಮಂಡ್ಯ, ಚಾಮರಾಜನಗರ ಮುಂತಾದ ಜಿಲ್ಲೆಗಳಲ್ಲಿ ಬೆಳೆದ ರಾಗಿ, ಭತ್ತ, ಮುಸುಕಿನ ಜೋಳದ ಬೆಳೆಗಳಿಗೆ ಆಗಿರುವ ನಷ್ಟದ ಕುರಿತು ಸಮೀಕ್ಷೆಯೆ ನಡೆಸಿಲ್ಲ. 

ಇನ್ನು ಕಲ್ಯಾಣ ಕರ್ನಾಟಕ ಮತ್ತು ಕಿತ್ತೂರು ಕರ್ನಾಟಕದ ಜಿಲ್ಲೆಗಳ ಬೆಳೆಗಳಲ್ಲಿ ಜುಲೈ ತಿಂಗಳಿAದ ಸುರಿಯುತ್ತಿರುವ ಮಳೆಯಿಂದ ರೈತರು ವ್ಯಾಪಕ ಸಮಸ್ಯೆಯನ್ನು ಎದುರಿಸುತ್ತಿದ್ದಾರೆ. ಅನೇಕ ಕಡೆ ಬರದ ಸಮಸ್ಯೆಯೂ ಇದೆ. ಇಷ್ಟೆಲ್ಲ ಆದರೂ ಸಹ ಸರ್ಕಾರ ಕೈ ಕಟ್ಟಿ ಕುಳಿತಿದೆ. ನಷ್ಟವಾಗಿರುವ ರೈತರ ಬೆಳೆಗಳನ್ನು ಸಮರ್ಪಕವಾಗಿ ಸಮೀಕ್ಷೆ ಮಾಡುವುದಾಗಲಿ, ಪರಿಹಾರ ನೀಡುವುದನ್ನಾಗಲಿ ಮಾಡುತ್ತಿಲ್ಲ.  

ಕೇಂದ್ರ ಸರ್ಕಾರವೂ ಕೂಡ ಸಮರ್ಪಕ ಪರಿಹಾರ ನೀಡುತ್ತಿಲ್ಲ. 2019-20-21ರ ವರ್ಷಗಳಲ್ಲಿ ಸುಮಾರು 1.5 ರಿಂದ 2 ಲಕ್ಷ ಕೋಟಿ ರೂಗಳವರೆಗೆ ನಷ್ಟವಾಗಿತ್ತು. ಆದರೆ ಕೇಂದ್ರ ಸರ್ಕಾರ 2019-20 ರಲ್ಲಿ 1652.85, 2020-21 ರಲ್ಲಿ 1328.30 ಕೋಟಿಗಳನ್ನು ಮಾತ್ರ ಬಿಡುಗಡೆ ಮಾಡಿದೆ. ಅಂದರೆ ಒಟ್ಟು ಬಿಡುಗಡೆ ಮಾಡಿದ ಹಣ ಕೇವಲ 2981.15 ಕೋಟಿ ರೂಗಳು ಮಾತ್ರ. 2021-22 ನಷ್ಟಕ್ಕೆ ಒಂದು ರೂಪಾಯಿಯನ್ನೂ ನೀಡಿಲ್ಲ.

ಕೇಂದ್ರ ಮತ್ತು ರಾಜ್ಯಗಳೆರಡೂ ಈ ಮಟ್ಟದ ನಿರ್ಲಕ್ಷ್ಯ ತೋರಿಸುವುದು ಅತ್ಯಂತ ಅಮಾನವೀಯ ನಡವಳಿಕೆಯಾಗುತ್ತದೆ.  ಕೊರೋನಾದಿಂದ ಸಂಕಟದಲ್ಲಿರುವ ರೈತಾಪಿ ಸಮುದಾಯದಲ್ಲಿ ಆತ್ಮಹತ್ಯೆಗಳ ಪ್ರಮಾಣ ಮತ್ತೆ ಹೆಚ್ಚಾಗುತ್ತಿರುವುದು ಆತಂಕದ ಸಂಗತಿಯಾಗಿದೆ. 

ಈ ಹಿನ್ನೆಲೆಯಲ್ಲಿ ಮಳೆಯಿಂದ ತೊಂದರೆಗೊಳಗಾಗಿರುವ ರೈತರ ಬೆಳೆಗಳನ್ನು ಈ ಕೂಡಲೆ ಸಮರ್ಪಕವಾಗಿ ಸಮೀಕ್ಷೆ ಮಾಡಿಸಿ ಪರಿಹಾರ ನೀಡಬೇಕೆಂದು ಪತ್ರದ ಮೂಲಕ ಆಗ್ರಹಿಸಿದ್ದಾರೆ.

Follow Us:
Download App:
  • android
  • ios