Asianet Suvarna News Asianet Suvarna News

ಕೊನೆಗೂ ಕ್ವಾರಂಟೈನ್‌ ತೆರೆಯುವಲ್ಲಿ ಶಿವಮೊಗ್ಗ ಜಿಲ್ಲಾಡಳಿತ ಯಶಸ್ವಿ

 ಹೊರ ರಾಜ್ಯಗಳಿಂದ ಬಂದ ಜನರನ್ನು ಕ್ವಾರಂಟೈನ್‌ಗೆ ಒಳಪಡಿಸಲು ಕ್ವಾರಂಟೈನ್ ಸೆಂಟರ್ ತೆರೆಯುವಲ್ಲಿ ಶಿವಮೊಗ್ಗ ಜಿಲ್ಲಾಡಳಿತ ಕೊನೆಗೂ ಯಶಸ್ವಿಯಾಗಿದೆ. ಈ ಕುರಿತಾದ ರಿಪೋರ್ಟ್ ಇಲ್ಲಿದೆ ನೋಡಿ. 

Finally Shivamogga District administration to Quarantine centre in Bhadravathi
Author
Bhadravathi, First Published May 15, 2020, 4:00 PM IST

ಭದ್ರಾವತಿ(ಮೇ.15): ಕೊನೆಗೂ ಜಿಲ್ಲಾಡಳಿತ ತಾಲೂಕಿನಲ್ಲಿ 2 ಕ್ವಾರಂಟೈನ್‌ಗಳನ್ನು ತೆರೆಯುವಲ್ಲಿ ಯಶಸ್ವಿಯಾಗಿದ್ದು, ಹೊರ ರಾಜ್ಯಗಳಿಂದ ಬಂದ ಸುಮಾರು 34 ಮಂದಿಯನ್ನು ಪ್ರತ್ಯೇಕವಾಗಿರಿಸಲಾಗಿದೆ. 

ಕಳೆದ 3-4 ದಿನಗಳ ಹಿಂದೆ ಜಿಲ್ಲಾಡಳಿತ ನಗರಸಭೆ ವ್ಯಾಪ್ತಿಯ ಉಂಬ್ಳೆಬೈಲು ರಸ್ತೆಯಲ್ಲಿರುವ ಸರ್ಕಾರಿ ಮೆಟ್ರಿಕ್‌ ನಂತರದ ಬಾಲಕರ ಮತ್ತು ಬಾಲಕಿಯರ ವಿದ್ಯಾರ್ಥಿ ನಿಲಯಗಳಲ್ಲಿ ಕ್ವಾರಂಟೈನ್‌ ತೆರೆಯಲು ನಿರ್ಧರಿಸಿತ್ತು. ಆದರೆ ಇದಕ್ಕೆ ಸ್ಥಳೀಯರು ವಿರೋಧ ವ್ಯಕ್ತಪಡಿಸಿದ ಹಿನ್ನಲೆಯಲ್ಲಿ ಬೇರೆಡೆ ತೆರೆಯುವುದಾಗಿ ಭರವಸೆ ನೀಡಿತ್ತು.

ದೇವರ ನರಸೀಪುರ ಮತ್ತು ಹಂಚಿನ ಸಿದ್ದಾಪುರದಲ್ಲಿರುವ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಕ್ವಾರಂಟೈನ್‌ ತೆರೆಯಲಾಗಿದೆ. ಕ್ವಾರಂಟೈನ್‌ನಲ್ಲಿರುವವರಿಗೆ ಊಟದ ವ್ಯವಸ್ಥೆ ಸೇರಿದಂತೆ ಅವಶ್ಯಕ ಸೌಲಭ್ಯ ಕಲ್ಪಿಸುವುದು ವಸತಿ ಶಾಲೆ ಸಿಬ್ಬಂದಿ ಜವಾಬ್ದಾರಿಯಾಗಿದೆ. ಒಟ್ಟಾರೆ ನಿರ್ವಹಣೆ ಸಮಾಜ ಕಲ್ಯಾಣ ಇಲಾಖೆಗೆ ವಹಿಸಲಾಗಿದೆ. ಪೊಲೀಸ್‌ ಮತ್ತು ಆರೋಗ್ಯ ಇಲಾಖೆ ಸಿಬ್ಬಂದಿ ತಮಗೆ ವಹಿಸಿರುವ ಕರ್ತವ್ಯ ನಿರ್ವಹಿಸಲಿದ್ದಾರೆಂದು ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ದಾದಾಪೀರ್‌ ತಿಳಿಸಿದ್ದಾರೆ.

ಡಿಕೆಶಿ ಜನ್ಮದಿನಕ್ಕೆ ಹೊಸ ಅರ್ಥ ಕೊಟ್ಟ ಕಾಂಗ್ರೆಸ್ ಕಾರ್ಯಕರ್ತರು

ದೇವರ ನರಸೀಪುರ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ತಮಿಳು, ಚನ್ನೆತ್ರೖನಿಂದ ಆಗಮಿಸಿರುವ 15 ಹಾಗೂ ಹಂಚಿನ ಸಿದ್ದಾಪುರದ ವಸತಿ ಶಾಲೆಯಲ್ಲಿ ಗೋವಾ, ಉತ್ತರಪ್ರದೇಶ, ಮಹಾರಾಷ್ಟ್ರ ಮತ್ತು ಆಂಧ್ರ ಪ್ರದೇಶ ರಾಜ್ಯಗಳಿಂದ ನಗರಕ್ಕೆ ಬಂದಿರುವ 27 ಸೇರಿ ಒಟ್ಟು 34 ಮಂದಿಯನ್ನು ನಿಗಾದಲ್ಲಿರಿಸಲಾಗಿದೆ ಎಂದು ಆರೋಗ್ಯ ಇಲಾಖೆಯ ಹಿರಿಯ ಆರೋಗ್ಯ ಸಹಾಯಕ ನಿಲೇಶ್‌ರಾಜ್‌ ತಿಳಿಸಿದ್ದಾರೆ.

ಸಮುದಾಯಕ್ಕೆ ಹರಡದಂತೆ ಎಚ್ಚರ ವಹಿಸಲು ಕ್ವಾರಂಟೈನ್‌:

ಮೂಲತಃ ತಾಲೂಕಿನ ನಿವಾಸಿಗಳಾಗಿದ್ದು, ವಿವಿಧ ಕಾರಣಗಳಿಂದ ಲಾಕ್‌ಡೌನ್‌ ಘೋಷಣೆಯಾಗುವ ಮೊದಲು ಬೇರೆ ಬೇರೆ ರಾಜ್ಯಗಳಲ್ಲಿ ಸಿಲುಕಿಕೊಂಡಿದ್ದವರು ಪುನಃ ತಮ್ಮ ತಮ್ಮ ಸ್ವಂತ ಊರುಗಳಿಗೆ ಆಗಮಿಸುತ್ತಿರುವ ಹಿನ್ನಲೆಯಲ್ಲಿ ಅವರನ್ನು ಪ್ರತ್ಯೇಕವಾಗಿರಿಸಿ ಆರೋಗ್ಯ ತಪಾಸಣೆ ನಡೆಸುವ ಮೂಲಕ ಮಹಾಮಾರಿ ಕೊರೋನಾ ಹರಡದಂತೆ ಎಚ್ಚರವಹಿಸಲು ಕ್ವಾರಂಟೈನ್‌Üಳನ್ನು ತೆರೆಯಲಾಗಿದೆ.

ಬೇರೆ ಬೇರೆ ರಾಜ್ಯಗಳಿಂದ ಬಂದವರು ನೇರವಾಗಿ ತಮ್ಮ ತಮ್ಮ ಮನೆಗಳಿಗೆ ತೆರಳುವುದರಿಂದ ಒಂದು ವೇಳೆ ಕೊರೋನಾ ಬಾಧಿತರಿಂದ ಕುಟುಂಬಕ್ಕೆ, ಸಮುದಾಯಕ್ಕೆ ವೈರಸ್‌ ಹರಡುವ ಸಾಧ್ಯತೆ ಹೆಚ್ಚಾಗಿದೆ. ಆದರೆ ಸ್ಥಳೀಯರು ಇದನ್ನು ತಪ್ಪಾಗಿ ಭಾವಿಸುವ ಮೂಲಕ ಕ್ವಾರಂಟೈನ್‌ಗಳನ್ನು ತೆರೆಯಲು ವಿರೋಧಿಸುತ್ತಿರುವುದು ಆತಂಕದ ಬೆಳವಣಿಗೆಯಾಗಿದೆ ಎಂದು ಕೊರೋನಾ ನಿರ್ಮೂಲನೆಗಾಗಿ ಹಗಲಿರುಳು ಹೋರಾಟ ನಡೆಸುತ್ತಿರುವವರು ವಿಷಾದ ವ್ಯಕ್ತಪಡಿಸಿದ್ದಾರೆ.
 

Follow Us:
Download App:
  • android
  • ios