ಖಾಸಗಿ ಗೋ ಶಾಲೆಗಳಿಗೆ ಆರ್ಥಿಕ ನೆರವು: ಪ್ರಭು ಚೌವ್ಹಾಣ್‌

ರಾಜ್ಯದಲ್ಲಿ ಸರ್ಕಾರಿ ಮತ್ತು ಖಾಸಗಿ ಸಂಘ- ಸಂಸ್ಥೆಗಳ ಸಹಯೋಗದಲ್ಲಿ ನಡೆಯುತ್ತಿರುವ ಗೋಶಾಲೆಗಳಿಗೆ ಅಗತ್ಯವಿರುವ ಆರ್ಥಿಕ ನೆರವನ್ನು ಒದಗಿಸಲು ಸರ್ಕಾರ ಬದ್ಧವಾಗಿದೆ ಎಂದು ರಾಜ್ಯ ಪಶುಸಂಗೋಪನಾ ಸಚಿವ ಪ್ರಭು ಚೌವ್ಹಾಣ್‌ ಹೇಳಿದರು.

Financial assistance to private Goshala says  Prabhu Chouhan rav

ಶಿವಮೊಗ್ಗ (ನ.26) : ರಾಜ್ಯದಲ್ಲಿ ಸರ್ಕಾರಿ ಮತ್ತು ಖಾಸಗಿ ಸಂಘ- ಸಂಸ್ಥೆಗಳ ಸಹಯೋಗದಲ್ಲಿ ನಡೆಯುತ್ತಿರುವ ಗೋಶಾಲೆಗಳಿಗೆ ಅಗತ್ಯವಿರುವ ಆರ್ಥಿಕ ನೆರವನ್ನು ಒದಗಿಸಲು ಸರ್ಕಾರ ಬದ್ಧವಾಗಿದೆ ಎಂದು ರಾಜ್ಯ ಪಶುಸಂಗೋಪನಾ ಸಚಿವ ಪ್ರಭು ಚೌವ್ಹಾಣ್‌ ಹೇಳಿದರು.

ತಾಲೂಕಿನ ಹುಣಸೋಡು ಗ್ರಾಮದಲ್ಲಿ ಕರ್ಕಿ ಶ್ರೀಮಠದ ಸಹಕಾರದೊಂದಿಗೆ ನಡೆಯುತ್ತಿರುವ ಜ್ಞಾನೇಶ್ವರಿ ಗೋಶಾಲೆಗೆ ಭೇಟಿ ನೀಡಿ, ಗೋಪೂಜೆ ನೆರವೇರಿಸಿದ ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು.

ಅಕ್ರಮ ಕಸಾಯಿಖಾನೆ ಶಾಶ್ವತ ಮುಚ್ಚಿಸಿ: ಸಚಿವ ಚವ್ಹಾಣ್‌ ತಾಕೀತು

ಗೋಹತ್ಯೆ ನಿಷೇಧ ಕಾನೂನು ಜಾರಿಯಾದ ನಂತರ ಕಸಾಯಿಖಾನೆಗೆ ಹೋಗುತ್ತಿರುವ ಗೋವುಗಳ ಸಂಖ್ಯೆ ಗಣನೀಯ ಪ್ರಮಾಣದಲ್ಲಿ ನಿಯಂತ್ರಣಕ್ಕೆ ಬಂದಿದ್ದು, ಗೋಶಾಲೆಗಳಿಗೆ ಬರುತ್ತಿರುವ ಜಾನುವಾರುಗಳ ಸಂಖ್ಯೆಯಲ್ಲಿ ಏರಿಕೆಯಾಗಿದೆ. ರಾಜ್ಯದಲ್ಲಿ 291 ಗೋವುಗಳ ಚಿಕಿತ್ಸೆಯ ಕಾರ್ಯಾರಂಭ ಆಗಿದ್ದು ಮೈಸೂರು ಮತ್ತು ಕಲಬುರ್ಗಿಯಲ್ಲಿ ಇನ್ನಷ್ಟೇ ಆರಂಭಿಸಬೇಕಿದೆ ರಾಜ್ಯದಾದ್ಯಂತ ಒಟ್ಟು 100 ಗೋಶಾಲೆಗಳನ್ನು ಸರ್ಕಾರದ ವತಿಯಿಂದಲೇ ಆರಂಭಿಸಲು ಉದ್ದೇಶಿಸಲಾಗಿದೆ. ಗೋವುಗಳ ರಕ್ಷಣೆಗಾಗಿ ಗೋಶಾಲೆಗಳ ನಿರ್ಮಾಣ ಕಾರ್ಯ ಮಂದಗತಿಯಲ್ಲಿ ಸಾಗಿದ್ದು, ಅವುಗಳಿಗೆ ವೇಗ ಹೆಚ್ಚಿಸಲಾಗುವುದು. ಈಗಾಗಲೇ ಘೋಷಿಸಿರುವಂತೆ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಗೋಶಾಲೆಗಳ ಆರಂಭಕ್ಕೆ ಸ್ಥಳ ನಿವೇಶನ ಗುರುತಿಸುವ ಕಾರ್ಯ ನಡೆದಿದೆ. ಕೆಲವು ಕಡೆ ಸ್ಥಳ ಗುರುತಿಸಲಾಗಿದ್ದು, ಭೌತಿಕವಾಗಿ ಕಟ್ಟಡ ನಿರ್ಮಿಸುವ ಕಾರ್ಯ ಪ್ರಗತಿಯಲ್ಲಿದೆ ಎಂದ ಅವರು, ಸರ್ಕಾರದ ಈ ಮಹತ್ವದ ಕಾರ್ಯದೊಂದಿಗೆ ಸಾಕಷ್ಟುಸಂಖ್ಯೆಯ ದಾನಿಗಳು ಗೋಶಾಲೆಗಳಿಗೆ ಉದಾರ ದಾನ ನೀಡಲು ಆಸಕ್ತಿ ತೋರಿಸಿದ್ದಾರೆ ಎಂದವರು ನುಡಿದರು.

ಸರ್ಕಾರಿ ನೌಕರರ ಸಂಘದಿಂದ ಆರ್ಥಿಕ ನೆರವು:

ರಾಜ್ಯ ಸರ್ಕಾರದ ಪುಣ್ಯಕೋಟಿ ವಿಶೇಷ ಯೋಜನೆಯಡಿ ಗೋವಿನ ಸಂತತಿ ರಕ್ಷಣೆ ಹಾಗೂ ಗೋಶಾಲೆಗಳ ನಿರ್ಮಾಣಕ್ಕೆ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್‌.ಷಡಾಕ್ಷರಿ ಅವರು ಸರ್ಕಾರಿ ನೌಕರರಿಂದ ಸುಮಾರು .100 ಕೋಟಿ ಆರ್ಥಿಕ ಸಹಾಯಧನವನ್ನು ನೀಡುತ್ತಿರುವುದು ಈ ಯೋಜನೆಯ ಅನುಷ್ಠಾನಕ್ಕೆ ಹೆಚ್ಚಿನ ಬಲ ಬಂದಂತಾಗಿದೆ. ಪ್ರಸ್ತುತ ಗೋಶಾಲೆಗಳಲ್ಲಿ ಪ್ರತಿ ಜಾನುವಾರಿಗೆ ಪ್ರತಿ ದಿನಕ್ಕೆ ನೀಡಲಾಗುತ್ತಿರುವ .17 ಅನ್ನು ಗುಜರಾತ್‌ ರಾಜ್ಯದಲ್ಲಿರುವಂತೆ .30 ಗಳಿಗೆ ಹೆಚ್ಚಿಸುವ ಉದ್ದೇಶ ಹೊಂದಲಾಗಿದೆ. ಈ ಸಂಬಂಧ ಶೀಘ್ರವೇ ಮಾನ್ಯ ಮುಖ್ಯಮಂತ್ರಿಗಳೊಂದಿಗೆ ಸಮಾಲೋಚನೆ ನಡೆಸಿ, ಅನುಷ್ಠಾನಕ್ಕೆ ತರಲಾಗುವುದು ಎಂದರು.

ಚಿತ್ರನಟ ಸುದೀಪ್‌ ಅವರನ್ನು ಪಶುಪಾಲನಾ ಇಲಾಖೆಯ ರಾಯಭಾರಿಯನ್ನಾಗಿ ನೇಮಿಸಲಾಗಿದೆ. ಇದೇ ಸಂದರ್ಭದಲ್ಲಿ ನಟ ಸುದೀಪ್‌ ಅವರು 31 ಗೋವುಗಳನ್ನು ದತ್ತು ಸ್ವೀಕರಿಸಿದ್ದಾರೆ. ಅಲ್ಲದೇ ಸ್ವತಃ ನಾನೇ 31ಗೋವುಗಳನ್ನು ದತ್ತು ಪಡೆದಿದ್ದೇನೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು 11 ಗೋವುಗಳನ್ನು ದತ್ತು ಪಡೆದು ತಮ್ಮ ಜನ್ಮ ದಿನವನ್ನು ಆಚರಿಸಿಕೊಂಡಿದ್ದಾರೆ. ಅಂತೆಯೇ ಸಾರ್ವಜನಿಕರೂ ಕೂಡ ಇದೇ ಮಾದರಿಯಲ್ಲಿ ಗೋವುಗಳನ್ನು ದತ್ತುಪಡೆದು ಗೋವುಗಳ ರಕ್ಷಣೆಗೆ ಮುಂದಾಗಬೇಕು. ಇದೇ ರೀತಿಯಲ್ಲಿ ರಾಜ್ಯದ ಎಲ್ಲಾ ಚುನಾಯಿತ ಪ್ರತಿನಿಧಿಗಳು ತಮ್ಮ ಕಾರ್ಯಕ್ಷೇತ್ರದ ಒಂದು ಗೋಶಾಲೆಯನ್ನು ದತ್ತು ಪಡೆದು ನಿರ್ವಹಿಸಲು ಮನವಿ ಮಾಡಲಾಗುವುದು ಎಂದರು.

ಪಶುಪಾಲನಾ ಇಲಾಖೆಯಲ್ಲಿ ವೈದ್ಯಕೀಯ ಸಿಬ್ಬಂಧಿಗಳ ಕೊರತೆ ಇದೆ. ಈಗಾಗಲೇ 400 ವೈದ್ಯಾಧಿಕಾರಿಗಳ ನೇಮಕಾತಿ ಪ್ರಕ್ರಿಯೆ ಪೂರ್ಣಗೊಂಡಿದ್ದು, ಆಯ್ಕೆಗೆ ಸಂಬಂಧಿಸಿದಂತೆ ನ್ಯಾಯಾಲಯದಲ್ಲಿ ಮೊಕದ್ದಮೆ ದಾಖಲಾಗಿದೆ. ಪ್ರಕರಣ ಇತ್ಯರ್ಥಗೊಂಡ ನಂತರ ನೇಮಕಗೊಂಡ ಅಭ್ಯರ್ಥಿಗಳಿಗೆ ಕರ್ತವ್ಯದ ಮೇಲೆ ಹಾಜರಾಗಲು ಸೂಚನಾಪತ್ರ ರವಾನಿಸಲಾಗುವುದು ಎಂದರು.

 

ಗೋಶಾಲೆ ಆರಂಭಕ್ಕೆ ಡಿಸೆಂಬರ್‌ ಗಡುವು: ಸಚಿವ ಪ್ರಭು ಚವ್ಹಾಣ್‌

ಯಾವುದೇ ಫಲಾಪೇಕ್ಷೆಯಿಲ್ಲದೇ ಗೋವುಗಳನ್ನು ಸಂರಕ್ಷಿಸುತ್ತಿರುವ, ಗೋಶಾಲೆಗಳನ್ನು ನಡೆಸುತ್ತಿರುವ ಸಂಘ-ಸಂಸ್ಥೆಗಳ ಪ್ರತಿನಿಧಿಗಳಿಗೆ ಅಭಿನಂದನೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಶಿವಮೊಗ್ಗದ ಸುರಭಿ ಗೋಶಾಲೆಯ ಮುಖ್ಯಸ್ಥ ನಟರಾಜ್‌ ಭಾಗವತ್‌, ಮಹಾವೀರ ಗೋಶಾಲೆಯ ಮುಖ್ಯಸ್ಥ ಬಾಬುಲಾಲ್‌ ಜೈನ್‌, ಜ್ಞಾನೇಶ್ವರಿ ಗೋಶಾಲೆಯ ಮುಖ್ಯಸ್ಥ ಚಂದ್ರಹಾಸ ರಾಯ್ಕರ್‌ ಹಾಗೂ ಸೋಮೇಶ್‌ ಮತ್ತಿತರರು ಉಪಸ್ಥಿತರಿದ್ದರು.

.13 ಕೋಟಿ ಬಿಡುಗಡೆ

ರಾಜ್ಯದಲ್ಲಿ 43,000 ಗೋವುಗಳಿಗೆ ಚರ್ಮಗಂಟು ರೋಗ ಬಂದಿದ್ದು, ಚಿಕಿತ್ಸೆ ನೀಡಲಾಗುತ್ತಿದೆಯಲ್ಲದೆ, ಇದು ಇನ್ನಷ್ಟುಹರಡದಂತೆ ವ್ಯಾಕ್ಸಿನೇಶನ್‌ ಮಾಡಲಾಗುತ್ತಿದೆ. ಈ ಚಿಕಿತ್ಸೆಗಾಗಿ ಮುಖ್ಯಮಂತ್ರಿಳು ತಕ್ಷಣವೇ 13 ಕೋಟಿ ರು. ಬಿಡುಗಡೆ ಮಾಡಿದ್ದಾರೆ ಎಂದು ಪ್ರಭು ಚೌಹ್ಹಾಣ್‌ ಹೇಳಿದರು.

ಕಾಂಗ್ರೆಸ್‌ ವಿರೋಧಿಸುವುದನ್ನೇ ತಮ್ಮ ಕಾಯಕವನ್ನಾಗಿ ಮಾಡಿಕೊಂಡಿದ್ದಾರೆ ಬಿಜೆಪಿಯಿಂದ ಜನಪರ ಕೆಲಸ ನಡೆಯುತ್ತಿದೆ. ಸಿಎಂ ಬೊಮ್ಮಾಯಿ ಅಭಿವೃದ್ಧಿಯಲ್ಲಿ ತೊಡಗಿದ್ದಾರೆ ಎಂದು ಪ್ರಭು ಚೌಹ್ಹಾಣ್‌ ಹೇಳಿದರು. ಕಾಂಗ್ರೆಸ್‌ನವರು ಭಾರತ್‌ ಜೋಡೋ ಬದಲು ಕಾಂಗ್ರೆಸ್‌ ಜೋಡು ಮಾಡಲಿ. ಒಡೆದ ಕಾಂಗ್ರೆಸ್‌ ಬಣ ರಾಜಕೀಯವನ್ನು ಬಂದ್‌ ಮಾಡಲಿ ಎಂದು ವ್ಯಂಗ್ಯವಾಡಿದರು.

ರಾಜ್ಯದಲ್ಲಿ 200 ಗೋಶಾಲೆಗಳಿದ್ದು, ಈಗಾಗಲೇ ಸರ್ಕಾರದಿಂದಲೂ ನೂರು ಗೋಶಾಲೆಗಳ ಸ್ಥಾಪನೆಗೆ ಕ್ರಮ ಕೈಗೊಳ್ಳಲಾಗಿದೆ. ಗೋವುಗಳ ಚಿಕಿತ್ಸೆಗಾಗಿ ಬೆಂಗಳೂರು ಮತ್ತು ಬೆಳಗಾವಿ ವಿಭಾಗಗಳಲ್ಲಿ ಆಂಬ್ಯುಲೆನ್ಸ್‌ ಸೇವೆ ಆರಂಭಿಸಲಾಗಿದ್ದು, 196 ಸಂಖ್ಯೆಗೆ ಕರೆ ಮಾಡಿದರೆ ಮನೆ ಬಾಗಿಲಿಗೆ ಹೋಗಿ ಗೋವುಗಳಿಗೆ ಚಿಕಿತ್ಸೆ ನೀಡಲಾಗುತ್ತದೆ

- ಪ್ರಭು ಚೌಹ್ಹಾಣ್‌, ಪಶು ಸಂಗೋಪನಾ ಸಚಿವ

Latest Videos
Follow Us:
Download App:
  • android
  • ios