ಹಾಸನದಲ್ಲಿ ವಿಮಾನ ನಿಲ್ದಾಣ ನಿರ್ಮಾಣ ಆಗುವುದರಿಂದ ಬೇಲೂರು-ಹಳೇಬೀಡು-ಶ್ರವಣಬೆಳಗೋಳ ತಾಣಗಳ ಪ್ರವಾಸೋದ್ಯಮ ಅಭಿವೃದ್ಧಿ ಆಗುವುದರ ಜೊತೆಗೆ ಹಾಸನ ಜಿಲ್ಲೆಯ ರೈತರಿಗೆ ಕೃಷಿ ರಫ್ತು ಹೆಚ್ಚಿಸಲು ಸಹಕಾರಿಯಾಗಲಿದೆ. ಹಾಗಾಗಿ ಆದಷ್ಟು ಬೇಗ ಕಾಮಗಾರಿಯನ್ನು ಪೂರ್ಣಗೊಳಿಸಿ ಎಂದ ಮಾಜಿ ಪ್ರಧಾನಿ, ರಾಜ್ಯಸಭಾ ಸದಸ್ಯ ಎಚ್.ಡಿ. ದೇವೇಗೌಡ  

ನವದೆಹಲಿ(ಡಿ.06): ಮಹತ್ವಾಕಾಂಕ್ಷೆಯ ಹಾಸನ ವಿಮಾನ ನಿಲ್ದಾಣ ಕಾಮಗಾರಿಯನ್ನು ಬೇಗ ಪೂರ್ಣಗೊಳಿಸುವಂತೆ ಕೇಂದ್ರ ಸರ್ಕಾರಕ್ಕೆ ಮಾಜಿ ಪ್ರಧಾನಿ, ರಾಜ್ಯಸಭಾ ಸದಸ್ಯ ಎಚ್.ಡಿ. ದೇವೇಗೌಡ ಮನವಿ ಮಾಡಿದ್ದಾರೆ. 

ನಗರದ ಸಂಸತ್ತಿನಲ್ಲಿ ಗುರುವಾರ ನಡೆದ ಕಲಾಪದಲ್ಲಿ ಈ ವಿಷಯ ಪ್ರಸ್ತಾಪಿಸಿದ ಅವರು, ಹಾಸನದಲ್ಲಿ ವಿಮಾನ ನಿಲ್ದಾಣ ನಿರ್ಮಾಣ ಆಗುವುದರಿಂದ ಬೇಲೂರು-ಹಳೇಬೀಡು-ಶ್ರವಣಬೆಳಗೋಳ ತಾಣಗಳ ಪ್ರವಾಸೋದ್ಯಮ ಅಭಿವೃದ್ಧಿ ಆಗುವುದರ ಜೊತೆಗೆ ಹಾಸನ ಜಿಲ್ಲೆಯ ರೈತರಿಗೆ ಕೃಷಿ ರಫ್ತು ಹೆಚ್ಚಿಸಲು ಸಹಕಾರಿಯಾಗಲಿದೆ. ಹಾಗಾಗಿ ಆದಷ್ಟು ಬೇಗ ಕಾಮಗಾರಿಯನ್ನು ಪೂರ್ಣಗೊಳಿಸಿ ಎಂದರು. 

ರಾಹುಲ್, ಖರ್ಗೆ, ಸಿದ್ದು, ಡಿಕೆಶಿ ಇರುವವರೆಗೂ ಗ್ಯಾರಂಟಿ ಕಸಿಯುವ ಮಗ ಹುಟ್ಟಲ್ಲ: ಸುರ್ಜೇವಾಲಾ

ಇದೇ ಸಮಯದಲ್ಲಿ ತಮ್ಮ ಅವಧಿಯಲ್ಲಿ ಎಚ್‌ಎಎಲ್ ವಿಮಾನ ನಿಲ್ದಾಣದಲ್ಲಿ ಲಘು ಯುದ್ಧ ವಿಮಾನಗಳು ಹಾಗೂ 65 ಆಸನಗಳ ಸಣ್ಣ ವಿಮಾನಗಳ ಉತ್ಪಾದನೆಗೆ ಅನುಮತಿ ನೀಡಿದನ್ನು ದೇವೇಗೌಡರು ನೆನೆದರು.

ರಾಯಚೂರು, ಹಾಸನ, ವಿಜಯಪುರ ವಿಮಾನ ನಿಲ್ದಾಣ ಕಾಮಗಾರಿಗಳಿಗೆ ಚುರುಕು ಕೊಟ್ಟ ಎಂ.ಬಿ. ಪಾಟೀಲ!

ಬೆಂಗಳೂರು: ರಾಜ್ಯದಲ್ಲಿ ನಡೆಯುತ್ತಿರುವ ರಾಯಚೂರು, ವಿಜಯಪುರ, ಹಾಸನ ಸೇರಿ ವಿವಿಧ ವಿಮಾನ ನಿಲ್ದಾಣಗಳು ಮತ್ತು ಏರ್-ಸ್ಟ್ರಿಪ್ ಅಭಿವೃದ್ಧಿ ಯೋಜನೆಗಳಿಗೆ ತಾಂತ್ರಿಕ ಅಡಚಣೆಗಳು ಉಂಟಾಗಿದೆ. ಕೂಡಲೇ ಸಂಬಂಧಪಟ್ಟ ಅಧಿಕಾರಿಗಳು ಎಲ್ಲ ಅಡಚಣೆಗಳನ್ನು ತ್ವರಿತವಾಗಿ ಬಗೆಹರಿಸಿ ವಿಮಾನ ನಿಲ್ದಾಣ ನಿರ್ಮಾಣ ಮತ್ತು ವಿಮಾನ ಸಂಚಾರಕ್ಕೆ ಅನುಕೂಲ ಮಾಡಿಕೊಡುವಂತೆ ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ‌. ಬಿ. ಪಾಟೀಲ ಅಧಿಕಾರಿಗಳಿಗೆ ಸೂಚನೆ ನೀಡಿದ್ದರು. 

ಆ.24 ರಂದು ಬೆಂಗಳೂರಿನಲ್ಲಿ ಹಿರಿಯ ಅಧಿಕಾರಿಗಳೊಂದಿಗೆ ವಿಮಾನ ನಿಲ್ದಾಣಗಳು ಹಾಗೂ ಏರ್-ಸ್ಟ್ರಿಪ್ ಅಭಿವೃದ್ಧಿ ಯೋಜನೆಗಳ ಕುರಿತು ಪ್ರಗತಿ ಪರಿಶೀಲನಾ ಸಭೆ ನಡೆಸಿ ಮಾತನಾಡಿದರು. ಈ ವೇಳೆ ರಾಜ್ಯದ ಹಲವು ವಿಮಾನ ನಿಲ್ದಾಣ ಯೋಜನೆಗಳಿಗೆ ತಾಂತ್ರಿಕ ಅಡಚಣೆಗಳು ಎದುರಾಗಿವೆ. ಇನ್ನು ಕೆಲ ಯೋಜನೆಗಳಿಗೆ ಅಗತ್ಯ ಪ್ರಮಾಣದ ಭೂಮಿ ಸಿಕ್ಕಿಲ್ಲ. ಇವೆಲ್ಲವನ್ನೂ ತ್ವರಿತವಾಗಿ ಬಗೆಹರಿಸಬೇಕು. 219 ಕೋಟಿ ರೂ. ವೆಚ್ಚದಲ್ಲಿ, 322 ಎಕರೆ‌ ಜಾಗದಲ್ಲಿ ನಿರ್ಮಿಸಲು ಉದ್ದೇಶಿಸಿರುವ ರಾಯಚೂರು ಗ್ರೀನ್ ಫೀಲ್ಡ್ ವಿಮಾನ‌ ನಿಲ್ದಾಣದ ಕಾಮಗಾರಿ ಆರಂಭಕ್ಕೆ ತಾಂತ್ರಿಕ ಅಡಚಣೆಗಳಿದ್ದು, ತಕ್ಷಣ ಅವುಗಳನ್ನು ಬಗೆಹರಿಸಬೇಕು. ಅಗತ್ಯ ಬಿದ್ದರೆ ದೆಹಲಿಗೂ ಹೋಗಿ ಬರಬೇಕು ಎಂದು ಖಡಕ್ ಸೂಚನೆ ರವಾನಿಸಿದ್ದರು. 

ರಾಯಚೂರು ವಿಮಾನ‌ ನಿಲ್ದಾಣ ಯೋಜನೆಗೆ ಈಗಾಗಲೇ ಡಿಪಿಆರ್ ಸಿದ್ಧವಾಗಿದೆ. ಯೋಜನೆಗೆ ಬೇಕಾಗಿರುವ ಪರಿಸರ ಇಲಾಖೆಯ ಅನುಮತಿಯನ್ನು ಕೂಡ ಬೇಗನೆ ಪಡೆಯಬೇಕು. ಹಾಸನ ವಿಮಾನ ನಿಲ್ದಾಣದ ಕಾಮಗಾರಿ ಚುರುಕಾಗಿ ಮುಗಿಸಬೇಕು. ಭೂಸ್ವಾಧೀನದ ಸಮಸ್ಯೆ ಇದ್ದು ತಕ್ಷಣ ಬಗೆಹರಿಸಬೇಕು ಎಂದು ತಿಳಿಸಿದ್ದರು. 

ಉಡಾನ್ ಯೋಜನೆ ಸ್ಥಗಿತವಾಗಿರುವ ಕಾರಣ ಬೀದರ್ ವಿಮಾನ ನಿಲ್ದಾಣದಿಂದ ವಿಮಾನಗಳ ಹಾರಾಟ ನಿಲ್ಲಿಸಲಾಗಿದೆ. ಈ ಸಂಬಂಧ ವಿಮಾನಯಾನ ಸಂಸ್ಥೆಗಳ ಜತೆ ಮಾತುಕತೆ ನಡೆಸಿ, ಪರ್ಯಾಯ ಕ್ರಮಗಳ ಬಗ್ಗೆ ತೀರ್ಮಾನಿಸಬೇಕು. ಪುನಃ ಉಡಾನ್ ಯೋಜನೆ ಚಾಲನೆಗೆ ಏನೆಲ್ಲ ಕ್ರಮ ತೆಗೆದುಕೊಳ್ಳಬೇಕು ಎಂಬುದರ ಬಗ್ಗೆ ತಕ್ಷಣ ಕ್ರಮ ತೆಗೆದುಕೊಳ್ಳಬೇಕು ಎಂದಿದ್ದರು. 

ದೇವೇಗೌಡ್ರು ಒಕ್ಕಲಿಗ ನಾಯಕರನ್ನು ಬೆಳೆಸಿಲ್ಲ: ಸಿದ್ದು ಗುಡುಗು

ಇನ್ನು ವಿಜಯಪುರ ವಿಮಾನ ನಿಲ್ದಾಣ ನಿರ್ಮಾಣ ಕಾಮಗಾರಿ ಬಹುತೇಕ ಪೂರ್ಣವಾಗಿದ್ದು, ಅಗತ್ಯವಿರುವ ಅಗ್ನಿಶಾಮಕ ವಾಹನಗಳನ್ನು ಖರೀದಿಸಲು ತ್ವರಿತವಾಗಿ ಕ್ರಮ ತೆಗೆದುಕೊಳ್ಳಬೇಕು. ಜೊತೆಗೆ, ವಿಜಯಪುರ ವಿಮಾನ ನಿಲ್ದಾಣಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ನಿರ್ಮಾಣಕ್ಕೆ ಅಗತ್ಯವಿರುವ ಭೂಸ್ವಾಧೀನಕ್ಕೂ ಸೂಕ್ತ ಕ್ರಮ ತೆಗೆದುಕೊಳ್ಳುವಂತೆ ಸಲಹೆ‌ ನೀಡಿದ್ದರು. 

ಏರ್-ಸ್ಟ್ರಿಪ್ಸ್ ಅಭಿವೃದ್ಧಿಗೆ ಭೂಮಿ ಗುರುತಿಸಿ: 

ರಾಜ್ಯದಲ್ಲಿನ ಪ್ರವಾಸೋದ್ಯಮ ಪ್ರದೇಶಗಳನ್ನು ಪರಿಗಣಿಸಿ ಚಿಕ್ಕಮಗಳೂರು, ಕೊಡಗು, ಧರ್ಮಸ್ಥಳ ಮತ್ತು ಹಂಪಿಯಲ್ಲಿ ಏರ್-ಸ್ಟ್ರಿಪ್ ನಿರ್ಮಿಸುವುದಾಗಿ ಘೋಷಿಸಲಾಗಿದೆ. ಈ ಪೈಕಿ ಕೊಡಗು ಮತ್ತು ಧರ್ಮಸ್ಥಳದಲ್ಲಿ 140 ಎಕರೆ ಭೂಮಿ ಅಗತ್ಯವಿದೆ. ಸ್ಥಳೀಯ ಶಾಸಕರು ಮತ್ತು ಜಿಲ್ಲಾಡಳಿತದ ಜತೆ ವ್ಯವಹರಿಸಿ, ಈ ಪ್ರಕ್ರಿಯೆ ಮುಗಿಸಬೇಕು ಎಂದು ಹೇಳಿದ್ದರು.