Asianet Suvarna News Asianet Suvarna News

ಮಂಗಳೂರು: ಧರ್ಮ ದ್ವೇಷದ ಭಾಷಣ, ಸಹಾಯಕ ಪ್ರಾಧ್ಯಾಪಕನ ವಿರುದ್ಧ ಎಫ್ಐಆರ್

ಹಿಂದೂಗಳು ಹಿಂದೂ ಮಾಲೀಕತ್ವದ ಸಭಾಂಗಣದಲ್ಲೇ ಮದುವೆ ಆಗಬೇಕು, ಹಿಂದೂ ಮಾಲೀಕತ್ವದ ಶಿಕ್ಷಣ ಸಂಸ್ಥೆಗಳಿಗೆ ತಮ್ಮ ಮಕ್ಕಳನ್ನು ಕಳುಹಿಸಬೇಕು. ಅನ್ಯ ಧರ್ಮೀಯರ ಸಭಾಂಗಣದಲ್ಲಿ ಮದುವೆ ಆಗಬಾರದು. ಅವರ ಶಾಲೆಗಳಿಗೆ ಕಳುಹಿಸಬಾರದು, ಅವರಿಗೆ ನಿಮ್ಮಿಂದ ಸಲ್ಲುವ ಆದಾಯದ ಒಂದು ಪಾಲು ವಿದೇಶಕ್ಕೆ ಸಲ್ಲುತ್ತದೆ ಎಂದು ಹೇಳಿದ್ದ ಅರುಣ್ ಉಳ್ಳಾಲ್ 
 

FIR against Assistant Professor for religion Hate speech in Mangaluru grg
Author
First Published Oct 5, 2024, 9:50 PM IST | Last Updated Oct 5, 2024, 9:50 PM IST

ಮಂಗಳೂರು(ಅ.05):  ಧರ್ಮ ದ್ವೇಷದ ಭಾಷಣ ಆರೋಪದಡಿ ಸಹಾಯಕ ಪ್ರಾಧ್ಯಾಪಕನ ವಿರುದ್ಧ ಎಫ್ಐಆರ್ ದಾಖಲಾಗಿದೆ. ಮಂಗಳೂರಿನ ಪ್ರತಿಷ್ಠಿತ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಡಾ.ಅರುಣ್ ಉಳ್ಳಾಲ್ ವಿರುದ್ಧ ಎಫ್ಐಆರ್ ದಾಖಲಾಗಿದೆ. 

ಮಂಗಳೂರು ಸೆನ್ ಪೊಲೀಸರು ಸ್ವಯಂ ಪ್ರೇರಿತ ಪ್ರಕರಣವನ್ನ ದಾಖಲಿಸಿಕೊಂಡಿದ್ದಾರೆ. ಹಿಂದೂಗಳು ಹಿಂದೂ ಮಾಲೀಕತ್ವದ ಸಭಾಂಗಣದಲ್ಲೇ ಮದುವೆ ಆಗಬೇಕು, ಹಿಂದೂ ಮಾಲೀಕತ್ವದ ಶಿಕ್ಷಣ ಸಂಸ್ಥೆಗಳಿಗೆ ತಮ್ಮ ಮಕ್ಕಳನ್ನು ಕಳುಹಿಸಬೇಕು. ಅನ್ಯ ಧರ್ಮೀಯರ ಸಭಾಂಗಣದಲ್ಲಿ ಮದುವೆ ಆಗಬಾರದು. ಅವರ ಶಾಲೆಗಳಿಗೆ ಕಳುಹಿಸಬಾರದು, ಅವರಿಗೆ ನಿಮ್ಮಿಂದ ಸಲ್ಲುವ ಆದಾಯದ ಒಂದು ಪಾಲು ವಿದೇಶಕ್ಕೆ ಸಲ್ಲುತ್ತದೆ ಎಂದು ಅರುಣ್ ಉಳ್ಳಾಲ್ ಹೇಳಿದ್ದರು. 
ಮಂಗಳೂರಿನ ಉಳ್ಳಾಲ ತಾಲೂಕಿನ ಕಿನ್ಯಾದ ಕೇಶವ ಶಿಶುಮಂದಿರದಲ್ಲಿ ಅರುಣ್ ಉಳ್ಳಾಲ್ ಭಾಷಣ ಮಾಡಿದ್ದರು. ನವದಂಪತಿ ಸಮಾವೇಶದಲ್ಲಿ ಡಾ.ಅರುಣ್ ಉಳ್ಳಾಲ್ ಭಾಷಣ ಮಾಡಿದ್ದರು. 

ಹೃದಯ, ಕಿಡ್ನಿ, ಶ್ವಾಸಕೋಶ, ಕಣ್ಣು ಬಹು ಅಂಗಾಗ ದಾನ ಮಾಡಿ ಸಾರ್ಥಕತೆ ಮೆರೆದ ಮಂಜುಳಾ!

ಧರ್ಮ ದ್ವೇಷದ ಭಾಷಣ ಮಾಡಿದ ಅರೋಪದಡಿ ಡಾ. ಅರುಣ್ ಉಳ್ಳಾಲ್ ವಿರುದ್ಧ ಮಂಗಳೂರು ಸೆನ್ ಕ್ರೈಂ ಪೊಲೀಸ್ ಠಾಣೆಯಲ್ಲಿ 66(C) IT ACT AND  196,  351 (BNS), 2023 ರಂತೆ ಪ್ರಕರಣ ದಾಖಲಾಗಿದೆ. 
ಅರುಣ್ ಉಳ್ಳಾಲ್ ಜಿಲ್ಲಾ ಮಟ್ಟದ ರಾಜ್ಯೋತ್ಸವ ಪ್ರಶಸ್ತಿ ಸೇರಿ ಹಲವು ಪ್ರಶಸ್ತಿ ಪಡೆದಿದ್ದಾರೆ. ಭಾಷಣದ ವಿಡಿಯೋ ವೈರಲ್ ಬೆನ್ನಲ್ಲೇ ಸಾಮಾಜಿಕ ತಾಣಗಳಲ್ಲಿ ಭಾರೀ ಆಕ್ರೋಶ ವ್ಯಕ್ತವಾಗಿತ್ತು. ಎಡಪಂಥೀಯರು ಹಾಗೂ ಅನ್ಯ ಧರ್ಮೀಯ ಸಂಘಟನೆಗಳಿಂದ ವಿರೋಧ ವ್ಯಕ್ತವಾಗಿತ್ತು. 

ಭಾರೀ ವಿರೋಧದ ಬೆನ್ನಲ್ಲೇ ಮಂಗಳೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಡಾ.ಅರುಣ್ ಉಳ್ಳಾಲ್ ಮಂಗಳೂರಿನ ಪ್ರತಿಷ್ಠಿತ ಕ್ರೈಸ್ತ ಶಿಕ್ಷಣ ಸಂಸ್ಥೆಯಲ್ಲಿ ಸಹಾಯಕ ಪ್ರಾಧ್ಯಾಪಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. 

Latest Videos
Follow Us:
Download App:
  • android
  • ios