Asianet Suvarna News Asianet Suvarna News

ಮುಸ್ಲಿಮರ ಕುರಿತು ಪ್ರಚೋಧನಕಾರಿ ಭಾಷಣ: ಪ್ರತಾಪ್ ಸಿಂಹ ವಿರುದ್ಧ ಎಫ್‌ಐಆರ್‌

ಗಣೇಶ ವಿಸರ್ಜನೆ ವೇಳೆ ಎಲ್ಲಾ ಕಡೆ ಕಲ್ಲು ತೂರುವ ಪ್ರವೃತ್ತಿ ಕಾಣಿಸ್ತಾ ಇದೆ. ಕಲ್ಲು ಹೊಡೆಯುವ ಪ್ರವೃತ್ತಿ ಮುಸ್ಲಿಮರಿಗೆ ಯಾಕೆ ಬರುತ್ತೆ. ಹಿಂದೂಗಳು ಕೈಯಲ್ಲಿ ಒಂದೊಂದು ಕಲ್ಲು ಹಿಡಿದುಕೊಂಡ್ರೆ ನೀಮ್ಮ ಕಥೆ ಏನು ಆಗುತ್ತದೆ..?. ನ್ಯೂಕ್ಲಿಯರ್ ಬಾಂಬ್ ಮಾಡಿದ ಹಿಂದೂಗಳಿಗೆ ಪೆಟ್ರೋಲ್ ಬಾಂಬ್ ಮಾಡೋಕೆ ಬರಲ್ವಾ..?. ಟಾಂಗಾಗಳು, ಗುಜರಿಗಳು ಮಾಡುವ ಕೆಲಸವನ್ನು ಕ್ಷಣ ಮಾತ್ರದಲ್ಲಿ ಹಿಂದೂಗಳಿಗೆ ಮಾಡಲು ಬರುತ್ತದೆ ಎಂದಿದ್ದ ಪ್ರತಾಪ್ ಸಿಂಹ  

FIR against Former BJP MP Pratap Simha For provocative speech on Muslims grg
Author
First Published Sep 25, 2024, 8:58 AM IST | Last Updated Sep 25, 2024, 8:58 AM IST

ಯಾದಗಿರಿ(ಸೆ.25):  ಮೈಸೂರು ಕೊಡಗು ಲೋಕಸಭಾ ಕ್ಷೇತ್ರದ ಮಾಜಿ ಬಿಜೆಪಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಶಹಾಪುರ ಪೋಲಿಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಯಾದಗಿರಿ ಜಿಲ್ಲೆಯ ಶಹಾಪುರದಲ್ಲಿ ನಡೆದ ಗಣೇಶ ವಿಸರ್ಜನೆ ಶೋಭಾಯಾತ್ರೆ ವೇಳೆ ಪ್ರತಾಪ್ ಸಿಂಹ ಪ್ರಚೋಧನಕಾರಿ ಭಾಷಣ ಮಾಡಿದ್ದರು. 

ಇದೇ 21 ರಂದು ಹಿಂದೂ ಮಹಾಗಣಪತಿ ವಿಸರ್ಜನೆ ಶೋಭಾಯಾತ್ರೆಯಲ್ಲಿ ಭಾಗಿಯಾಗಿ ಪ್ರತಾಪ್ ಸಿಂಹ ಭಾಷಣ ಮಾಡಿದ್ದರು. ಪ್ರತಾಪ್ ಸಿಂಹ ಮುಸ್ಲಿಮರ ಕುರಿತು ಪ್ರಚೋಧನಕಾರಿ ಮಾತನಾಡಿದ್ದರು. ಗಣೇಶ ವಿಸರ್ಜನೆ ವೇಳೆ ಎಲ್ಲಾ ಕಡೆ ಕಲ್ಲು ತೂರುವ ಪ್ರವೃತ್ತಿ ಕಾಣಿಸ್ತಾ ಇದೆ. ಕಲ್ಲು ಹೊಡೆಯುವ ಪ್ರವೃತ್ತಿ ಮುಸ್ಲಿಮರಿಗೆ ಯಾಕೆ ಬರುತ್ತೆ... ಹಿಂದೂಗಳು ಕೈಯಲ್ಲಿ ಒಂದೊಂದು ಕಲ್ಲು ಹಿಡಿದುಕೊಂಡ್ರೆ ನೀಮ್ಮ ಕಥೆ ಏನು ಆಗುತ್ತದೆ..?. ನ್ಯೂಕ್ಲಿಯರ್ ಬಾಂಬ್ ಮಾಡಿದ ಹಿಂದೂಗಳಿಗೆ ಪೆಟ್ರೋಲ್ ಬಾಂಬ್ ಮಾಡೋಕೆ ಬರಲ್ವಾ..?. ಟಾಂಗಾಗಳು, ಗುಜರಿಗಳು ಮಾಡುವ ಕೆಲಸವನ್ನು ಕ್ಷಣ ಮಾತ್ರದಲ್ಲಿ ಹಿಂದೂಗಳಿಗೆ ಮಾಡಲು ಬರುತ್ತದೆ ಎಂದು ಪ್ರತಾಪ್ ಸಿಂಹ ಹೇಳಿದ್ದರು. 

ಹಿಂದೂಗಳ ಕೈಗೆ ಕಲ್ಲು ಬಂದರೆ ಮುಸ್ಲಿಂರಿಗೆ ಉಳಿಗಾಲ ಇರಲ್ಲ: ಪ್ರತಾಪ್ ಸಿಂಹ

ಧಾರ್ಮಿಕ ನಂಬಿಕೆಗಳಿಗೆ ಅವಮಾನಗೊಳಿಸಿ ಧ್ವೇಷ ಭಾವನೆಯಿಂದ ಮಾತನಾಡಿದ್ದಾರೆ. ಗಲಭೆ ಮಾಡುವಂತಹ ಪ್ರಚೋಧನಕಾರಿ ಹೇಳಿಕೆ ನೀಡಿದಕ್ಕೆ ಶಹಾಪುರ ಠಾಣೆಯಲ್ಲಿ ಕೇಸ್ ದಾಖಲಾಗಿದೆ.  ಶಹಾಪುರ ಪಿಎಸ್ಐ ಡಿ.ವಿ.ನಾಯಕ ಅವರು ಸ್ವಯಂಕೃತ ದೂರು ದಾಖಲಿಸಿದ್ದಾರೆ. ಮಾಜಿ ಸಂಸದ ಪ್ರತಾಪ್ ಸಿಂಹ ಸೇರಿ 5 ಜನರ ವಿರುದ್ಧ ಬಿಎನ್ಎಸ್ ಕಾಯ್ದೆಯಡಿ 299, 192 ಕಾಯ್ದೆಯಡಿ ಎಫ್‌ಐಆರ್‌ ದಾಖಲಾಗಿದೆ. 

Latest Videos
Follow Us:
Download App:
  • android
  • ios