ಮಂಗಳೂರು(ಡಿ.23): ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ಮಂಗಳೂರಿನಲ್ಲಿ ನಡೆದ ಪ್ರತಿಭಟನೆಯಲ್ಲಿ 148 ಮಂದಿಯ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಗಲಭೆಯಲ್ಲಿ ಮೃತಪಟ್ಟ ಗೋಲಿಬಾರ್ ನಲ್ಲಿ ಜಲೀಲ್ ಮತ್ತು ನೌಶೀನ್ ವಿರುದ್ಧವೂ ಕೇಸು ದಾಖಲಿಸಲಾಗಿದೆ.

ಮಂಗಳೂರಿನಲ್ಲಿ ಹಿಂಸಾತ್ಮಕ ಪ್ರತಿಭಟನೆ ‌ಪ್ರಕರಣದಲ್ಲಿ ಪೊಲೀಸರು 148 ಮಂದಿ ವಿರುದ್ದ ಎಫ್‌ಐಆರ್‌ ದಾಖಲಿಸಿದ್ದಾರೆ. ಗೋಲಿಬಾರ್‌ನಲ್ಲಿ ಮೃತಪಟ್ಟ ಜಲೀಲ್ ಮತ್ತು ನೌಶೀನ್ ವಿರುದ್ದವೂ ಕೇಸು ದಾಖಲಿಸಲಾಗಿದೆ.

"

ಮಂಗಳೂರು ಗಲಭೆ: ವಿಡಿಯೋ ಇದ್ರೆ ಕಳಿಸಿ ಎಂದ ಕಮಿಷನರ್ ಹರ್ಷ

ಪಾಂಡೇಶ್ವರ ಮತ್ತು ಬಂದರು ಠಾಣೆಯಲ್ಲಿ ಒಟ್ಟು 8 ಪ್ರಕರಣ ದಾಖಲಾಗಿದ್ದು, 29 ಮಂದಿಯ ವಿರುಧ್ಧ ಡಿಸಿಪಿ ಅರುಣಾಂಶುಗಿರಿ ಅವರು ದೂರು ದಾಖಲಿಸಿದ್ದಾರೆ. ಉಳಿದಂತೆ ಘಟನಾ ಸ್ಥಳದಲ್ಲಿದ್ದ ಪೊಲೀಸರು ನೀಡಿದ ದೂರಿನಂತೆ ಪ್ರಕರಣ ದಾಖಲಿಸಲಾಗಿದೆ.

ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ನಡೆದ ಮಂಗಳೂರು ಗಲಭೆಯ ಹೆಚ್ಚಿನ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ಕಿಸಿ

ಹೈಲ್ಯಾಂಡ್ ಆಸ್ಪತ್ರೆ ಆವರಣದಲ್ಲಿ ಗಲಾಟೆ ಮಾಡಿದ 25 ಮಂದಿಯನ್ನು ವಶಕ್ಕೆ ಪಡೆಯಲಾಗಿದೆ. ಡಿಸಿ ಕಚೇರಿ ಎದುರು ಸೆಕ್ಷನ್ ಉಲ್ಲಂಘಿಸಿ ಪ್ರತಿಭಟಿಸಿದ ಪಿಎಫ್ ಐ ಮತ್ತು ಎಸ್ ಡಿಪಿಐ ಸಂಘಟನೆಯ 36 ಮಂದಿಯನ್ನೂ ವಶಕ್ಕೆ ಪಡೆಯಲಾಗಿದೆ.

ಮಂಗಳೂರು: 'ಸತ್ತವರ ಮನೆಗೆ ಭೇಟಿ ನೀಡದ ಉಸ್ತುವಾರಿ ಸಚಿವ, ಶಾಸಕ'..!