ಮೈಸೂರು(ಡಿ.09): ಹುಣಸೂರು ಬೈ ಎಲೆಕ್ಷನ್ ಸಂದರ್ಭ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿ, ಕೂಗಾಡಿದ್ದ ಕಾಂಗ್ರೆಸ್ ಜಿಲ್ಲಾಧ್ಯಕ್ಷನ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ. ಬಿಳಿಕೆರೆ ಠಾಣೆ ಪೊಲೀಸರು ಸೆಕ್ಷನ್ 143, 147, 353 ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಪೊಲೀಸರ ಮೇಲೆ ಕೂಗಾಡಿದ್ದ ಕಾಂಗ್ರೆಸ್ ಜಿಲ್ಲಾಧ್ಯಕ್ಷನ ಮೇಲೆ ಎಫ್‌ಐಆರ್ ದಾಖಲಿಸಿದ್ದು, ಸಿದ್ದರಾಮಯ್ಯ ಬೆಂಬಲಿಗ, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಡಾ.ಬಿ.ಜೆ.ವಿಜಯ ಕುಮಾರ್ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಪೊಲೀಸ್ ಕರ್ತವ್ಯಕ್ಕೆ ಅಡ್ಡಿ ಪಡಿಸಿದ ಹಿನ್ನೆಲೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

7 ಲಕ್ಷದ ಈರುಳ್ಳಿ ಕಳ್ಳತನ: ಆನಿಯನ್‌ಗಾಗಿ ಆ್ಯಕ್ಸಿಡೆಂಟ್ ಹೈಡ್ರಾಮ..!

ಬಿಳಿಕೆರೆ ಠಾಣೆ ಪೊಲೀಸರು ಸೆಕ್ಷನ್ 143, 147, 353 ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಮತದಾನದ ದಿನ ಹುಣಸೂರಿನ ಹೊಸರಾಮೇನಹಳ್ಳಿಯಲ್ಲಿ ಕಾಂಗ್ರೆಸ್ ಎಂಎಲ್‌ಎ ಹಾಗೂ ಗುಂಪು ಪ್ರತಿಭಟನೆ ನಡೆಸಿತ್ತು.  ಶಾಸಕ ಅನಿಲ್ ಚಿಕ್ಕಮಾದು ಹಾಗೂ ಇನ್ಸ್‌ಪೆಕ್ಟರ್ ಸುನಿಲ್ ಕುಮಾರ್ ನಡುವೆ ಮಾತಿನ ಚಕಮಕಿ ನಡೆದಿತ್ತು. ಅನಿಲ್ ಚಿಕ್ಕಮಾದುಗೆ ಇನ್ಸ್‌ಪೆಕ್ಟರ್ ಸುನೀಲ್‌ಕುಮಾರ್ ದೌರ್ಜನ್ಯ ಎಸಗಿದ್ದಾರೆ ಎಂದು ಕಾಂಗ್ರೆಸ್ ಕಾರ್ಯಕರ್ತರು ಆರೋಪಿಸಿದ್ದರು.

ಮಧ್ಯಾಹ್ನದೊಳಗೆ ಹೊರ ಬೀಳಿದೆ ಹುಣಸೂರು ಬೈಎಲೆಕ್ಷನ್ ಫಲಿತಾಂಶ

ಪೊಲೀಸರ ಕ್ಷಮೆಯಾಚನೆಗಾಗಿ ಪಟ್ಟು ಹಿಡಿದು ಕಾಂಗ್ರೆಸ್ ಪ್ರತಿಭಟನೆ ನಡೆಸಿತ್ತು. ಈ ವೇಳೆ ಡಿವೈಎಸ್‌ಪಿ ಸುಂದರ್ ರಾಜು ವಿರುದ್ಧ ಡಾ.ವಿಜಯ ಕುಮಾರ್ ರೋಷಾವೇಷ ಪ್ರದರ್ಶನ ಮಾಡಿದ್ದರು. ಪ್ರಕರಣ ಸಂಬಂಧ ಅಪರ‌ ಪೊಲೀಸ್ ವರಿಷ್ಠಾಧಿಕಾರಿ ಸ್ನೇಹ ಕಾಂಗ್ರೆಸ್ ನಾಯಕರ ಕ್ಷಮೆ ಕೇಳಿದ್ದರು. ಮಾಜಿ ಸಿಎಂ‌ ಸಿದ್ದರಾಮಯ್ಯ ಮಧ್ಯ ಪ್ರವೇಶದಿಂದ ಪ್ರಕರಣ ಸುಖಾಂತ್ಯ ಕಂಡಿತ್ತು.

ಮತ ಎಣಿಕೆ ಹಿನ್ನೆಲೆ ಸಂಚಾರಿ ವಾಹನಗಳ ಮಾರ್ಗ ಬದಲಾವಣೆ