ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಲ್ಲಿ ಗ್ಯಾರಂಟಿ ಕರಪತ್ರ ಹಂಚಿದ ಕೈ ಅಭ್ಯರ್ಥಿ ಸೌಮ್ಯಾರೆಡ್ಡಿ ಮೇಲೆ ಎಫ್‌ಐಆರ್!
ಬೆಂಗಳೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸೌಮ್ಯಾರೆಡ್ಡಿ ಅವರು ಗ್ಯಾರಂಟಿ ಕುರಿತ ಕರಪತ್ರ ಹಂಚಿದ್ದಕ್ಕೆ ಚುನಾವಣಾ ಅಧಿಕಾರಿಗಳು ಎಫ್‌ಐಆರ್ ದಾಖಲಿಸಿದ್ದಾರೆ.
ಬೆಂಗಳೂರು (ಏ.15): ಬೆಂಗಳೂರು ದಕ್ಷಿಣ ಲೋಕಸಭಾ ಕಾಂಗ್ರೆಸ್ ಅಭ್ಯರ್ಥಿ ಸೌಮ್ಯ ರೆಡ್ಡಿ ಅವರು ಲೋಕಸಭಾ ಚುನಾವಣೆಯ ಮಾದರಿ ನೀತಿ ಸಂಹಿತೆಯನ್ನು ಉಲ್ಲಂಘನೆ ಮಾಡಿದ್ದರಿಂದಾಗಿ ಜನಪ್ರತಿನಿಧಿ ಕಾಯ್ದೆ ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ.
ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಅವರ ಪುತ್ರಿಯೂ ಆಗಿರುವ ಬೆಂಗಳೂರು ದಕ್ಷಿಣ ಲೋಕಸಭಾ ಕಾಂಗ್ರೆಸ್ ಅಭ್ಯರ್ಥಿ ಸೌಮ್ಯಾರೆಡ್ಡಿ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ. ಚಿಕ್ಕಪೇಟೆ ವಿಧಾನಸಭಾ ಕ್ಷೇತ್ರದ ಚುನಾವಣಾ ಅಧಿಕಾರಿ ಸಂತೋಷ್ ಅವರು ಕಲಾಸಿಪಾಳ್ಯ ಪೊಲೀಸ್ ಠಾಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸೌಮ್ಯರೆಡ್ಡಿ ವಿರುದ್ದ ಪ್ರಕರಣ ದಾಖಲಿಸಿದ್ದಾರೆ. ಪೊಲೀಸರು ಜನಪ್ರತಿನಿದಿ ಕಾಯ್ದೆ 1950,1951,1989 ಅಡಿಯಲ್ಲಿ FIR ದಾಖಲು ಮಾಡಿಕೊಂಡಿದ್ದಾರೆ. ಜೊತೆಗೆ, ಚಿಕ್ಕಪೇಟೆ ವಿಧಾನಸಭಾ ಕ್ಷೇತ್ರದ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಾಜಶೇಖರ್ ವಿರುದ್ದವೂ ಎಫ್ಐಆರ್ ದಾಖಲಿಸಲಾಗಿದೆ.
ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ 2.90 ಕೋಟಿ ರೂ. ದಾಖಲೆಗಳಿಲ್ಲದ ಹಣ ಜಪ್ತಿ
ಕಾಂಗ್ರೆಸ್ ಅಭ್ಯರ್ಥಿ ಸೌಮ್ಯಾರೆಡ್ಡಿ, ಚಿಕ್ಕಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಾಜಶೇಖರ್ ಸೇರಿ ಹಲವರು ಚಿಕ್ಕಪೇಟೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ 'ನುಡಿದಂತೆ ನಡೆದಿದ್ದೀವೆ, ಐದು ಗ್ಯಾರೆಂಟಿ ಕೊಟ್ಟಿದ್ದೇವೆ' ಕರಪತ್ರಗಳನ್ನು ಹಂಚಿಕೆ ಮಾಡಿದ್ದಾರೆ. ಸದರಿ ಕರಪತ್ರಗಳಲ್ಲಿ ಪ್ರಕಾಶಕರು ಹಾಗೂ ಮುದ್ರಕರ ಹೆಸರು, ವಿಳಾಸ, ಮುದ್ರಿತ ಪ್ರತಿಗಳ ಸಂಖ್ಯೆ, ಅದಕ್ಕೆ ತಗುಲಿರುವ ವೆಚ್ಚಗಳ ಬಗ್ಗೆ ಯಾವುದೇ ಅಂಶಗಳನ್ನು ನಮೂದು ಮಾಡಿಲ್ಲ. ಅಸ್ಪಷ್ಟ ಮಾಹಿತಿ ಇರುವ ಕರಪತ್ರಗಳನ್ನು ಹಂಚಿಕೆ ಮಾಡುವ ಮೂಲಕ ಮಾದರಿ ನೀತಿ ಸಂಹಿತೆಯನ್ನು ಉಲ್ಲಂಘನೆ ಮಾಡಲಾಗಿದೆ.
ಪ್ರಚಾರದ ವೇಳೆ ಎದೆನೋವೆಂದು ಆಸ್ಪತ್ರೆಗೆ ದಾಖಲಾದ ಸಚಿವ ಜಮೀರ್ ಅಹಮದ್ ಖಾನ್:
ಸೋಮವಾರ ಚಿತ್ರದುರ್ಗದ ಕಾಂಗ್ರೆಸ್ ಅಭ್ಯರ್ಥಿಯ ಪರವಾಗಿ ಪ್ರಚಾರ ಮಾಡುವಾಗ ಎದೆನೋವು ಕಾಣಿಸಿಕೊಂಡು ದಿಢೀರನೆ ಆಸ್ಪತ್ರೆಗೆ ದಾಖಲಾದ ವಸತಿ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಬಿ.ಝಡ್. ಜಮೀರ್ ಅಹಮದ್ ಖಾನ್ ಅವರು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಪುನಃ ಕಾಂಗ್ರೆಸ್ ಸಮಾವೇಶದ ವೇದಿಕೆಯಲ್ಲಿ ಬಂದು ಪಾಲ್ಗೊಂಡ ಘಟನೆ ನಡೆಯಿತು.
ಎದೆನೋವೆಂದು ಆಸ್ಪತ್ರೆಗೆ ಹೋದ ಕೆಲವೇ ನಿಮಿಷದಲ್ಲಿ ಪ್ರಚಾರಕ್ಕೆ ವಾಪಸ್ ಬಂದ ಸಚಿವ ಜಮೀರ್ ಅಹಮದ್ ಖಾನ್!
ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಬಿ.ಎನ್ ಚಂದ್ರಪ್ಪ ಪರ ಮತಯಾಚನೆಗೆ ಆಗಮಿಸಿದ್ದ ಸಚಿವ ಜಮೀರ್ ಅಹಮದ್ ಖಾನ್ ಅವರು, ಪ್ರಚಾರದ ರ್ಯಾಲಿಯ ವೇಳೆ ಎದೆನೋವೆಂದು ಕುಳಿತುಕೊಂಡರು. ಕೂಡಲೇ ಅವರ ಸಹಚರರು ಹತ್ತಿರದ ಬಸವೇಶ್ವರ ಆಸ್ಪತ್ರೆಗೆ ದಾಖಲು ಮಾಡಿದರು. ಆಗ ಆಸ್ಪತ್ರೆಯಲ್ಲಿ ಹೃದ್ರೋಗ ತಜ್ಞ ಡಾ.ಕಾರ್ತಿಕ್ ಅವರಿಂದ ಚಿಕಿತ್ಸೆ ಪಡೆದ ಸಚಿವ ಜಮೀರ್ ಅಹಮದ್ ಖಾನ್ ಅವರಿಗೆ ನಾರ್ಮಲ್ ಇದೆ ಎಂದು ಮಾಹಿತಿ ನೀಡಿದರು. ಇಸಿಜಿ, ಎಕೋ ನಾರ್ಮಲ್ ಇದೆ ಎಂದು ವೈದ್ಯರು ತಿಳಿಸಿದ ನಂತರ ಪುನಃ ಆಸ್ಪತ್ರೆಯಿಂದ ಚುನಾವಣಾ ಪ್ರಚಾರದ ಕಾರ್ಯಕ್ಕೆ ವಾಪಸ್ ಬಂದರು.