ಸಿಎಂ ಕಾರು ಅಡ್ಡಗಟ್ಟಿ ಪ್ರತಿಭಟನೆ: ಜೆಡಿಎಸ್ ಶಾಸಕನ ಪುತ್ರನ ವಿರುದ್ಧ ಎಫ್‌ಐಆರ್
ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಆಗಮಿಸಿದ್ದ ವೇಳೆ ಅವರ ಕಾರು ಅಡ್ಡಗಟ್ಟಿ ಕಪ್ಪುಬಟ್ಟೆ ಪ್ರದರ್ಶಿಸಿದ್ದ ಜೆಡಿಎಸ್ ಯುವ ಮುಖಂಡ ಶರಣಗೌಡ ಕಂದಕೂರು ಸೇರಿ 15ಕ್ಕೂ ಹೆಚ್ಚು ಮಂದಿ ವಿರುದ್ಧ ಪ್ರಕರಣ ದಾಖಲು| ಶರಣಗೌಡ ಕಂದಕೂರು ಗುರುಮಠಕಲ್ ಶಾಸಕ ನಾಗನಗೌಡ ಕಂದಕೂರು ಅವರ ಪುತ್ರ|
ಯಾದಗಿರಿ(ಅ.7): ಯಾದಗಿರಿಗೆ ಶನಿವಾರ ಸಂಜೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಆಗಮಿಸಿದ್ದ ವೇಳೆ ಅವರ ಕಾರು ಅಡ್ಡಗಟ್ಟಿ ಕಪ್ಪುಬಟ್ಟೆ ಪ್ರದರ್ಶಿಸಿದ್ದ ಹಿನ್ನೆಲೆಯಲ್ಲಿ ಗುರುಮಠಕಲ್ ಶಾಸಕ ನಾಗನಗೌಡ ಕಂದಕೂರು ಪುತ್ರ, ಜೆಡಿಎಸ್ ಯುವ ಮುಖಂಡ ಶರಣಗೌಡ ಕಂದಕೂರು ಸೇರಿ 15ಕ್ಕೂ ಹೆಚ್ಚು ಮಂದಿ ವಿರುದ್ಧ ಯಾದಗಿರಿ ನಗರ ಠಾಣೆಯಲ್ಲಿ ಭಾನುವಾರ ಪ್ರಕರಣ ದಾಖಲಾಗಿದೆ.
ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ
ಗುರುಮಠಕಲ್ ಮತಕ್ಷೇತ್ರಕ್ಕೆ ಹಿಂದಿನ ಸರ್ಕಾರ ನೀಡಿದ್ದ ಅನುದಾನ ವಾಪಸ್ ಪಡೆದ ಹಿನ್ನೆಲೆಯಲ್ಲಿ ಜಿಲ್ಲೆಯ ನೆರೆಪೀಡಿತ ಪ್ರದೇಶಗಳ ವೀಕ್ಷಣೆ ನಂತರ ಜಿಲ್ಲಾಡಳಿತ ಭವನಕ್ಕೆ ಮುಖ್ಯಮಂತ್ರಿ ತೆರಳುತ್ತಿದ್ದ ವೇಳೆ ಕಾರು ಅಡ್ಡಗಟ್ಟಿ ಆಕ್ರೋಶ ಹೊರಹಾಕಲಾಗಿತ್ತು. ವಿಶೇಷವೆಂದರೆ ಶರಣಗೌಡ ಕಂದಕೂರು ಅವರು ಸಮ್ಮಿಶ್ರ ಸರ್ಕಾರದ ಅವಧಿಯಲ್ಲಿ ಯಡಿಯೂರಪ್ಪ ಅವರದ್ದೆನ್ನಲಾದ ಆಡಿಯೋ ಬಿಡುಗಡೆ ಮಾಡಿ ‘ಆಪರೇಷನ್ ಕಮಲ’ದ ಆರೋಪ ಮಾಡಿದ್ದರು.