ಬಳ್ಳಾರಿ (ಡಿ.09) : ನಗರದ ಹವಾಂಭಾವಿ ಪ್ರದೇಶದಲ್ಲಿನ ಸಮಾಜ ಕಲ್ಯಾಣ ಸಚಿವ ಬಿ.ಶ್ರೀರಾಮುಲು ಅವರ ನಿವಾಸದಲ್ಲಿ ಮಂಗಳವಾರ ಅಗ್ನಿ ಅವಘಡ ಸಂಭವಿಸಿದೆ. ಶಾರ್ಟ್‌ ಸಕ್ರ್ಯೂಟ್‌ನಿಂದ ಮನೆಯ ಹೊರಭಾಗದಲ್ಲಿದ್ದ ಜನರೇಟರ್‌ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು, ಡೀಸೆಲ್‌ ಟ್ಯಾಂಕರ್‌ಗೆ ಆವರಿಸಿದೆ. 

ಈ ವೇಳೆ ಕೆಲಹೊತ್ತು ಸ್ಥಳದಲ್ಲಿ ಆತಂಕದ ವಾತಾವರಣ ಉಂಟಾಗಿದ್ದು, ಸುದ್ದಿ ತಿಳಿದ ಕೂಡಲೇ ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಯಾವುದೇ ಅಪಾಯ ಸಂಭವಿಸಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕುತೂಹಲ ಮೂಡಿಸಿದೆ ರಾಮುಲು ಸಭೆ : ಹೊಸ ಪ್ಲಾನ್ ಮಾಡಿದ್ರಾ ಸಚಿವರು ...

ಶ್ರೀರಾಮುಲು ಅವರು ಈ ಹಿಂದೆ ಸಂಸದರಾಗಿದ್ದ, 2017ರ ಡಿಸೆಂಬರ್‌ ತಿಂಗಳಲ್ಲಿ ದೆಹಲಿಯ ಫಿರೋಜ್‌ ಶಾ ರಸ್ತೆಯಲ್ಲಿರುವ ಸರ್ಕಾರಿ ಬಂಗಲೆಯಲ್ಲಿ ಅಗ್ನಿ ಅವಘಡ ಸಂಭವಿಸಿತ್ತು. ಶ್ರೀರಾಮುಲು ಮಲಗಿದ್ದ ಕೋಣೆಯಲ್ಲೇ ನಡೆದ ಅಗ್ನಿ ದುರಂತದಲ್ಲಿ ಅವರು ಕೂದಲೆಳೆ ಅಂತರದಲ್ಲಿ ಪಾರಾಗಿದ್ದರು.