ಬೆಂಗಳೂರಿನ ಗ್ಯಾರೇಜ್‌ನಲ್ಲಿ ಅಗ್ನಿ ಅವಘಡ: ಸುಟ್ಟು ಕರಕಲಾದ 3 ಕಾರುಗಳು
ಕಾರ್ ಗ್ಯಾರೇಜ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದ ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿಯನ್ನ ನಂದಿಸಿದ್ದಾರೆ.

ಬೆಂಗಳೂರು(ಜ.27): ಬೆಂಗಳೂರಿನ ಕಾರ್ ಗ್ಯಾರೇಜ್‌ನಲ್ಲಿ ಅಗ್ನಿ ಅವಘಡ ಸಂಭವಿಸಿದ ಘಟನೆ ಮತ್ತಿಕೆರೆ ಸಮೀಪದ ದಿವಾನರಪಾಳ್ಯದಲ್ಲಿ ನಿನ್ನೆ(ಗುರುವಾರ) ರಾತ್ರಿ 10 ಗಂಟೆ ಸುಮಾರಿಗೆ ನಡೆದಿದೆ.
ಕಾರ್ ಗ್ಯಾರೇಜ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದ ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿಯನ್ನ ನಂದಿಸಿದ್ದಾರೆ.
ತುಮಕೂರು: ತಿಮ್ಲಾಪುರ ಸಂರಕ್ಷಿತ ಅರಣ್ಯ ಪ್ರದೇಶಕ್ಕೆ ಬೆಂಕಿ ಇಟ್ಟ ದುಷ್ಕರ್ಮಿಗಳು
ಎರಡು ಅಗ್ನಿಶಾಮಕ ವಾಹನಗಳಲ್ಲಿ ತೆರಳಿ ನಡೆಸಿದ ಕಾರ್ಯಾಚರಣೆ ನಡೆಸಲಾಗಿದೆ ಅಂತ ತಿಳಿದು ಬಂದಿದೆ. ಘಟನೆಯಲ್ಲಿ ಗ್ಯಾರೇಜ್ ಬಳಿ ನಿಲ್ಲಿಸಿದ್ದ ಮೂರು ಹಳೆ ಕಾರುಗಳು ಸುಟ್ಟು ಕರಕಲಾಗಿವೆ. ಯಶವಂತಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.