ಉಡುಪಿ(ಫೆ.06): ಕಾರ್ಕಳ ತಾಲೂಕಿನ ಮರ್ಣೆ ಗ್ರಾಮದ ಕಾಡುಹೊಳೆಯಲ್ಲಿ ಬೈಹುಲ್ಲು ಸಾಗಿಸುತ್ತಿದ್ದ ಲಾರಿಗೆ ಬೆಂಕಿ ತಗುಲಿ ಲಾರಿಯಲ್ಲಿದ್ದ ಸುಮಾರು 50 ಸಾವಿರಕ್ಕೂ ಹೆಚ್ಚು ಮೌಲ್ಯದ ಬೈಹುಲ್ಲು ಸಂಪೂರ್ಣ ಸುಟ್ಟು ಭಸ್ಮವಾಗಿದೆ.

ಆಗುಂಬೆಯಿಂದ ಅಂಡಾರು ಕಡೆಗೆ ಬುಧವಾರ ಮಧ್ಯಾಹ್ನ 2.30ರ ವೇಳೆಗೆ ಬೈಹುಲ್ಲನ್ನು ಹೇರಿಕೊಂಡು ಹೋಗುತ್ತಿದ್ದ ಲಾರಿಗೆ ಕಾಡುಹೊಳೆಯಲ್ಲಿ ವಿದ್ಯುತ್‌ ತಂತಿ ತಗುಲಿ ಶಾರ್ಟ್‌ ಸಕ್ರ್ಯೂಟ್‌ ಆಗಿ ಬೆಂಕಿ ಹೊತ್ತಿಕೊಂಡಿತು.

ಮಂಗಳೂರು: ಪುಟ್ಟ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ

ಅಪಾಯನ್ನರಿತು ಕೂಡಲೇ ಎಚ್ಚೆತ್ತ ಲಾರಿ ಚಾಲಕ ಬೆಂಕಿ ನಂದಿಸಲು ಸ್ಥಳಿಯರ ನೆರವು ಕೋರಿದಾಗ, ಸ್ಥಳೀಯರು ನೀರು ಹಾಯಿಸಿ ಬೆಂಕಿ ನಂದಿಸಲು ಪ್ರಯತ್ನಪಟ್ಟರೂ ನಂದಿಸಲು ಸಾಧ್ಯವಾಗಲಿಲ್ಲ. ಬಳಿಕ ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿಲಾಯಿತು. ಸಿಬ್ಬಂದಿಗಳು ಸುಮಾರು ಒಂದು ಗಂಟೆಯ ಕಾರ್ಯಾಚರಣೆ ನಡೆಸಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾದರು.

ರಸ್ತೆ ಮಧ್ಯೆ ಬಸ್‌ ನಿಲ್ಲಿಸಿ ಚಾಲಕರ ಹೊಡೆದಾಟ..!