ಹುಬ್ಬಳ್ಳಿ(ಮಾ.08): ನಗರದ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಪಕ್ಕದಲ್ಲಿನ ಪ್ರದೇಶದಲ್ಲಿ ಒಣಗಿದ ಹುಲ್ಲಿಗೆ ಏಕಾಏಕಿ ಶನಿವಾರ ಮಧ್ಯಾಹ್ನ ಬೆಂಕಿ ಕಾಣಿಸಿಕೊಂಡು ಕೆಲಕಾಲ ಆತಂಕ ಮನೆ ಮಾಡಿತ್ತು. ಅಗ್ನಿಶಾಮಕ ದಳದ ಸಿಬ್ಬಂದಿ, ಸಾರ್ವಜನಿಕರ ಹರಸಾಹಸದಿಂದಾಗಿ ಬೆಂಕಿ ನಂದಿಸಲಾಗಿದ್ದು ಸ್ವಲ್ಪದರಲ್ಲಿ ದೊಡ್ಡ ಅನಾಹುತವೊಂದು ತಪ್ಪಿದೆ.

ವಿಮಾನ ನಿಲ್ದಾಣದ ಪಕ್ಕದಲ್ಲಿ ಪವರ್‌ ಹೌಸ್‌ ಇದೆ. ಅದರ ಪಕ್ಕದಲ್ಲಿರುವ ನಾಲ್ಕು ಎಕರೆ ಪ್ರದೇಶ ಖಾಲಿಯಿದೆ. ಅಲ್ಲಿನ ಒಣಗಿದ ಹುಲ್ಲಿಗೆ ಮಧ್ಯಾಹ್ನ ಬೆಂಕಿ ಕಾಣಿಸಿಕೊಂಡಿದ್ದು ದಟ್ಟಹೊಗೆ ಎಲ್ಲೆಡೆ ವ್ಯಾಪಿಸಿತ್ತು. ಇದರಿಂಗಿ ಏನೋ ದೊಡ್ಡ ಆನಾಹುತವೇ ಆಗಿದೇನೋ ಎಂಬ ಆತಂಕ ವಿಮಾನ ನಿಲ್ದಾಣದ ಸುತ್ತಮುತ್ತಲಿನ ನಿವಾಸಿಗಳಲ್ಲಿ ಮನೆ ಮಾಡಿತ್ತು. ಸಾರ್ವಜನಿಕರು ವಿಮಾನ ನಿಲ್ದಾಣದತ್ತ ದೌಡಾಯಿಸಿದರು.

ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ಅಷ್ಟರೊಳಗೆ ಇನ್ನಷ್ಟುಅಗ್ನಿಶಾಮಕದಳ ಸಿಬ್ಬಂದಿ ಆಗಮಿಸಿ ಸತತ ಎರಡು ಗಂಟೆ ಕಾಲ ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ತಹಬದಿಗೆ ತಂದಿದ್ದಾರೆ. ಬೆಂಕಿಯಿಂದಾಗಿ ಮೂರ್ನಾಲ್ಕು ಎಕರೆ ಪ್ರದೇಶದಲ್ಲಿನ ಹುಲ್ಲು ಸಂಪೂರ್ಣ ಬೆಂಕಿಗೆ ಆಹುತಿಯಾಗಿದೆ. ಈ ಪ್ರದೇಶದಲ್ಲಿದ್ದ ಗಿಡ- ಮರಗಳು ಬಹುತೇಕ ಸುಟ್ಟು ಕರಕಲಾಗಿವೆ. ಬೆಂಕಿ ಹೇಗೆ ತಗುಲಿತು ಎಂಬುದು ತಿಳಿದು ಬಂದಿಲ್ಲ. ಗೋಕುಲ ರಸ್ತೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.