Asianet Suvarna News Asianet Suvarna News

ಕೋಲಾರ: ಬೆಂಗಳೂರು-ಮಾರಿಕುಪ್ಪಂ ರೈಲಿನಲ್ಲಿ ಬೆಂಕಿ, ಎದ್ನೋ ಬಿದ್ನೋ ಅಂತ ಓಡಿದ ಪ್ರಯಾಣಿಕರು..!

ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ರೈಲಿನಿಂದ ಇಳಿದು ಕೆಲ ಪ್ರಯಾಣಿಕರು ಓಡಿ ಹೋಗಿದ್ದಾರೆ. ಬೆಂಕಿ ನಂದಿಸಿದ ಬಳಿಕ ಮತ್ತೆ ಸಂಚಾರ ಆರಂಭವಾಗಿದೆ. ಅದೃಷ್ಟವಶಾತ್ ಯಾವುದೇ ಅನಾಹುತ ಸಂಭವಿಸಿಲ್ಲ. 

Fire on Bengaluru Marikuppam Train at Malur in Kolar grg
Author
First Published Oct 13, 2023, 6:33 AM IST

ಕೋಲಾರ(ಅ.13):  ಶಾರ್ಟ್ ಸರ್ಕ್ಯೂಟ್‌ನಿಂದ ವಿದ್ಯುತ್ ಲೈನ್‌ನಲ್ಲಿ ಬೆಂಕಿ ಕಾಣಿಸಿಕೊಂಡ ಘಟನೆ ಕೋಲಾರ ಜಿಲ್ಲೆಯ ಮಾಲೂರು ರೈಲ್ವೇ ನಿಲ್ದಾಣದಲ್ಲಿ ನಡೆದಿದೆ. ಬೆಂಗಳೂರು - ಮಾರಿಕುಪ್ಪಂ ರೈಲು ನಿಲ್ದಾಣಕ್ಕೆ ಬರುತ್ತಿದಂತೆ ಶಾರ್ಟ್ ಸರ್ಕ್ಯೂಟ್‌ನಿಂದಾಗಿ ಬೆಂಕಿ ಕಾಣಿಸಿಕೊಂಡಿತ್ತು. ಇದರಿಂದ ಪ್ರಯಾಣಿಕರಲ್ಲಿ ಆತಂಕ ಎದುರಾಗಿತ್ತು. 

2 ನಿಮಿಷಗಳ ಕಾಲ ಕಾಣಿಸಿಕೊಂಡ ಬೆಂಕಿಯಿಂದಾಗಿ ಪ್ರಯಾಣಿಕರು ಆತಂಕಕ್ಕೊಳಗಾಗಿದ್ದರು. ರೈಲಿನಲ್ಲಿ 500 ಕ್ಕೂ ಹೆಚ್ಚು ಜನರು ಪ್ರಯಾಣಿಸುತ್ತಿದ್ದರು ಎಂದು ತಿಳಿದು ಬಂದಿದೆ. 

ಮಂಡ್ಯ: ಮನ್ ಮುಲ್ ಯಡವಟ್ಟಿನಿಂದ ಮೆಗಾ ಡೈರಿಗೆ ಬೆಂಕಿ ಬಿತ್ತಾ?

ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ರೈಲಿನಿಂದ ಇಳಿದು ಕೆಲ ಪ್ರಯಾಣಿಕರು ಓಡಿ ಹೋಗಿದ್ದಾರೆ. ಬೆಂಕಿ ನಂದಿಸಿದ ಬಳಿಕ ಮತ್ತೆ ಸಂಚಾರ ಆರಂಭವಾಗಿದೆ. ಅದೃಷ್ಟವಶಾತ್ ಯಾವುದೇ ಅನಾಹುತ ಸಂಭವಿಸಿಲ್ಲ. ಸಕಾಲಕ್ಕೆ ಎಚ್ಚೆತ್ತುಕೊಂಡಿದ್ದರಿಂದ ಭಾರೀ ಅನಾಹುತವೊಂದು ತಪ್ಪಿದೆ. 

Follow Us:
Download App:
  • android
  • ios